ಕಳೆದ 8 ವರ್ಷಗಳಲ್ಲಿ ಆರ್ಥಿಕತೆ ಬಲಪಡಿಸುವಲ್ಲಿ ಉತ್ತಮ ಕೆಲಸವಾಗಿದೆ: ಅಮಿತ್ ಶಾ
ಭಾರತ 2027 ರಲ್ಲಿ ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ....
Team Udayavani, Nov 12, 2022, 2:55 PM IST
ಚೆನ್ನೈ : ಕಳೆದ 8 ವರ್ಷಗಳಲ್ಲಿ, ಅಭಿವೃದ್ಧಿ ಮತ್ತು ಆರ್ಥಿಕತೆಯನ್ನು ಬಲಪಡಿಸುವ ವಿಷಯದಲ್ಲಿ ದೇಶವು ಉತ್ತಮ ಕೆಲಸ ಮಾಡಿದೆ. 2025ರ ವೇಳೆಗೆ ಭಾರತ 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದಾರೆ.
‘ದಿ ಇಂಡಿಯಾ ಸಿಮೆಂಟ್ಸ್ ಲಿಮಿಟೆಡ್’ ನ ಪ್ಲಾಟಿನಂ ಜುಬಿಲಿ ಆಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಮೋರ್ಗನ್ ಸ್ಟಾನ್ಲಿಯ ಇತ್ತೀಚಿನ ವರದಿಯ ಪ್ರಕಾರ, ಭಾರತವು 2027 ರ ವೇಳೆಗೆ ವಿಶ್ವದ 3 ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ. ಇದಕ್ಕಾಗಿ ಮೂಲಸೌಕರ್ಯವು ಬಹಳ ಮುಖ್ಯವಾಗಿದೆ. ಪರಿಣಾಮಕಾರಿ ಮತ್ತು ಪಾರದರ್ಶಕ ನೀತಿಗಳಿಂದಾಗಿ, ಮೋದಿ ಸರ್ಕಾರವು ಕಳೆದ 8 ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ಬಹಳಷ್ಟು ಸಾಧಿಸಿದೆ ಎಂದರು.
ರಾಜಕೀಯ ಸ್ಥಿರತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದಿಂದಾಗಿ, ಭಾರತವು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿದೆ. IMF ಭಾರತದ ಆರ್ಥಿಕತೆಯನ್ನು ಕತ್ತಲೆಯ ವಲಯದಲ್ಲಿ ಪ್ರಕಾಶಮಾನವಾದ ತಾಣ ಎಂದು ಕರೆದಿದೆ ಮತ್ತು ಭಾರತವು 2022-23 ರಲ್ಲಿ 6.8% GDP ಯೊಂದಿಗೆ G20 ನಲ್ಲಿ 2 ನೇ ಸ್ಥಾನದಲ್ಲಿದೆ ಮತ್ತು 2023-24 ರಲ್ಲಿ 6.1% GDP ಯೊಂದಿಗೆ G20 ನಲ್ಲಿ 1 ನೇ ಸ್ಥಾನದಲ್ಲಿರಲಿದೆ ಎಂದು ಭವಿಷ್ಯ ನುಡಿದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
ODI Rankings: ಮತ್ತೆ ಅಗ್ರ ಹತ್ತರೊಳಗೆ ಬಂದ ಹರ್ಮನ್ಪ್ರೀತ್ ಕೌರ್
Kasaragod: ಸಿಡಿಲು ಬಡಿದು ಹಾನಿ; 25 ಲಕ್ಷ ರೂ. ನಷ್ಟ
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.