ಹೆತ್ತವರ ಇಚ್ಛೆಗೆ ವಿರುದ್ಧ ಮದುವೆ: ಮಗಳನ್ನು ಸುಟ್ಟು ಕೊಂದ ಅಪ್ಪ
Team Udayavani, Jun 24, 2017, 12:13 PM IST
ಮೊರಾದಾಬಾದ್, ಉತ್ತರ ಪ್ರದೇಶ : ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ನಿನ್ನೆ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ವ್ಯಕ್ತಿ ಹಾಗೂ ಆತನ ಮನೆಯವರು ಆತನ 22 ವರ್ಷ ಪ್ರಾಯದ ಮಗಳನ್ನು ಮಂಚಕ್ಕೆ ಬಿಗಿದು ಸೀಮೆ ಎಣ್ಣೆ ಸುರಿದ ಜೀವಂತ ಸುಟ್ಟು ಹಾಕಿದ ಘಟನೆ ನಡೆದಿದೆ. ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಆಕೆ ಮದುವೆಯಾದದ್ದೇ ಈ ಮರ್ಯಾದೆಗೇಡು ಹತ್ಯೆಗೆ ಕಾರಣವೆಂದು ಗೊತ್ತಾಗಿದೆ.
ಶುಕ್ರವಾರ ಮಧ್ಯಾಹ್ನ ಗುಲ್‌ಫಾಶಾ ಬೀ, ಆಕೆಯ ಎರಡು ವರ್ಷ ಪ್ರಾಯದ ಪುತ್ರ ಮತ್ತು ಕುಟುಂಬ ಸಂಬಂಧಿ ಮಹಿಳೆಯೋರ್ವರು ಮನೆಯಲ್ಲಿದ್ದರು. ಆಗ ಆಕೆಯ ತಂದೆ, ಇತರ ಕೆಲವರೊಂದಿಗೆ ಮನೆಗೆ ಬಂದು ಮಗಳನ್ನು ಹೊಡೆದು ಮಂಚಕ್ಕೆ ಬಿಗಿದು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಆಕೆಯನ್ನು ಜೀವಂತ ಕೊಂದರು. ಈ ಕಟುಕರು ಆಕೆಯ ಮಗನಿಗೆ ಯಾವುದೇ ಹಾನಿ ಮಾಡದೇ ಬಿಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.
ಮನೆಯ ಉಳಿದ ಸದಸ್ಯರು ಆ ಹೊತ್ತಿಗೆ ಅಂತ್ಯಕ್ರಿಯೆಗೆಂದು ಹೊರಗೆ ಹೋಗಿದ್ದರು. ಮಂಚಕ್ಕೆ ಬಿಗಿದು ಬೆಂಕಿ ಹಚ್ಚಲ್ಪಟ್ಟಿದ್ದ ಗುಲ್‌ಫಾಶಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ಪೊಲೀಸ್ ಸುಪರಿಂಟೆಂಡೆಂಟ್ ಆಶಿಶ್ ಶ್ರೀವಾಸ್ತವ ತಿಳಿಸಿದ್ದಾರೆ.
ಘಟನೆಯ ಸುದ್ದಿ ತಿಳಿದು ಮಧ್ಯಾಹ್ನ 3 ಗಂಟೆಯ ಹೊತ್ತಿಗೆ ಧಾವಿಸಿ ಬಂದ ಪೊಲೀಸರು ಸಾಕ್ಷ್ಯಗಳನ್ನು, ದೇಹದ ಸುಟ್ಟ ಭಾಗಗಳನ್ನು ಸಂಗ್ರಹಿಸಿದರು, ಅನಂತರ ಅಳಿದುಳಿದ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು.
ಗುಲ್‌ಫಾಶಾ ಅವರ ಅತ್ತೆ ಮಾವ ಪೊಲೀಸರಿಗೆ ತಿಳಿಸಿರುವ ಪ್ರಕಾರ ಆಕೆ ಮೂರು ವರ್ಷಗಳ ಹಿಂದೆ ಸಾಜದ್ ಅಲಿ ಎಂಬಾತನನ್ನು, ಹೆತ್ತವರ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಳು. ಇವರ ಮದುವೆಯನ್ನು ಗುಲ್‌ಫಾಶಾಳ ತಂದೆ ಮತ್ತು ಇತರರು ಒಪ್ಪಲು ನಿರಾಕರಿಸಿದ್ದರು.
ಸಾಜದ್‌ನ ತಂದೆ ಪೊಲàಸರಲ್ಲಿ ಐಪಿಸಿ ಸೆ.302ರ ಪ್ರಕಾರ ಮುಶ್‌ರಫ್ ರಝಾ ಖಾನ್ ಸಹಿತ 1ಮಂದಿಯ ವಿರುದ್ಧ ಕೊಲೆ ಕೇಸನ್ನು ದಾಖಲಿಸಿದ್ದಾರೆ. ಈ ಪೈಕಿ ಒಬ್ಟಾತನನ್ನು ಬಂಧಿಸಲಾಗಿದ್ದು ಇತರರಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Junior Doctor: ಮಾತನಾಡಲು ಕರೆಸಿ ಕಿರಿಯ ವೈದ್ಯೆ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.