ಹೆಚ್ಚು ಮಕ್ಕಳಿದ್ದರೆ ಆಂಧ್ರದಲ್ಲಿ ಪ್ರೋತ್ಸಾಹಧನ!
Team Udayavani, Dec 30, 2018, 12:30 AM IST
ಹೈದರಾಬಾದ್: ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದುವ ದಂಪತಿಗೆ ಪ್ರೋತ್ಸಾಹಧನ ನೀಡಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಧರಿಸಿದ್ದಾರೆ. ಅಷ್ಟೇ ಅಲ್ಲ, ಎರಡಕ್ಕಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ನಿಷೇಧವನ್ನೂ ತೆಗೆದುಹಾಕಲು ನಿರ್ಧರಿಸಿದ್ದಾರೆ. 10 ವರ್ಷದಲ್ಲಿ ರಾಜ್ಯದ ಜನಸಂಖ್ಯೆ ಶೇ. 1.6ರಷ್ಟು ಕುಸಿದಿದೆ. ಇದು ಭೌಗೋಳಿಕ ಅಸಮ ತೋಲನಕ್ಕೆ ಕಾರಣವಾಗುತ್ತಿದೆ. ಮುಂದಿನ ಎರಡು ದಶಕಗಳಲ್ಲಿ ರಾಜ್ಯದಲ್ಲಿ ಕೆಲಸ ಮಾಡಲು ಅರ್ಹ ಯುವ ಕರಿಗಿಂತ ವೃದ್ಧರ ಸಂಖ್ಯೆಯೇ ಹೆಚ್ಚಾಗುತ್ತದೆ ಎಂದು ನಾಯ್ಡು ಹೇಳಿದ್ದಾರೆ.
ರಾಜ್ಯದಲ್ಲಿ ಯುವಕರ ಸಂಖ್ಯೆ ಶೇ. 50 ಇದೆ. ಯುವಕರ ಸಂಖ್ಯೆ ಹೆಚ್ಚಲು ಮಕ್ಕಳ ಸಂಖ್ಯೆಯೂ ಹೆಚ್ಚಬೇಕಿದೆ ಎಂದು ಅವರುಹೇಳಿದ್ದಾರೆ. ಯುವಕರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದಕ್ಕೆ ಕುಟುಂಬ ಕಲ್ಯಾಣ ಯೋಜನೆಯ ಜಾರಿಯೇ ಕಾರಣವಾಗಿದೆ ಎಂಬುದು ನಾಯ್ಡು ಅಭಿಪ್ರಾಯವಾಗಿದೆ. 2011ರ ಜನಗಣತಿಯ ಪ್ರಕಾರ ಅವಿಭಜಿತ ಆಂಧ್ರಪ್ರದೇಶವು ದೇಶದಲ್ಲಿ 10ನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.