ಅಪ್ರಾಪ್ತೆ ಮೇಲೆ ಅತ್ಯಾಚಾರ: ಗರ್ಭಿಣಿಯಾದ 2 ತಿಂಗಳ ಬಳಿಕ ಪ್ರಕರಣ ಬೆಳಕಿಗೆ
Team Udayavani, Mar 13, 2021, 3:45 PM IST
ನವದೆಹಲಿ: 16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಕಳೆದ 6 ತಿಂಗಳಿನಿಂದ ನಿರಂತರವಾಗಿ ಅತ್ಯಾಚಾರವೆಸಗಲಾಗಿದ್ದು ಇದೀಗ ಬಾಲಕಿ 2 ತಿಂಗಳ ಗರ್ಭಿಣಿಯಾಗಿರುವ ಘಟನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಬಾಲಕಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದ್ದು, ಈಕೆ ಮೇಲೆ ಕಳೆದ 6 ತಿಂಗಳಿನಿಂದ 7 ಜನರು ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಈ ವಿಷಯ ಯಾರಿಗಾದರೂ ತಿಳಿಸಿದರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.
ಇದನ್ನೂ ಓದಿ:ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ದರ್ಶನ ಬಲಿ, ಬಟ್ಟಲು ಕಾಣಿಕೆ
ಘಟನೆಯ ವಿವರ:
16 ವರ್ಷದ ಬಾಲಕಿ ತನ್ನ ಮನೆಗೆ ಬೇಕಾಗುವ ದಿನಸಿ ಸಾಮಾನುಗಳನ್ನು ತರುವ ಉದ್ದೇಶದಿಂದ ಅಂಗಡಿಗೆ ಹೋದಾಗ ಅಲ್ಲಿದ್ದ ವ್ಯಕ್ತಿ ಈಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ನೆಡೆಸಿದ್ದಾನೆ ಎಂದು ತಿಳಿದು ಬಂದಿದ್ದು, ಆ ನಂತರ ಆತನ ಸಹಚರರೂ ಕೂಡಾ ಆಕೆಯ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸಿದ್ದಾರೆ ಎನ್ನಲಾಗಿದೆ. ಈ ವಿಚಾರ ಯಾರಲ್ಲಾದರೂ ತಿಳಿಸಿದರೆ ಜೀವ ತೆಗೆಯುವುದಾಗಿ ಹೆದರಿಸಿರುವ ಆರೋಪಿಗಳು ಆಕೆ ಅವರ ಮಾತಿನಿಂದ ಭಯಗೊಂಡಿರುವುದನ್ನು ಅರಿತು ಕಳೆದ 6 ತಿಂಗಳಿನಿಂದ ಆಕೆಗೆ ಹಿಂಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಮೌಢ್ಯ ನಿವಾರಣೆಗಾಗಿ ವಿಜಯಪುರ ಜಿ.ಪಂ. ಅಧ್ಯಕ್ಷೆ ಸುಜಾತಾರಿಂದ ಸ್ಮಶಾನ ವಾಸ್ತವ್ಯ
ಇದೀಗ ಆಕೆ ಗರ್ಭಿಣಿಯಾದ ಬಳಿಕ ವಿಚಾರ ತಿಳಿದ ಬಾಲಕಿಯ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳನ್ನು ರಕ್ಷಣೆ ಮಾಡುವ (POCSO) ಕಾಯ್ದೆಯ ಅಡಿಯಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ
Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
MUST WATCH
ಹೊಸ ಸೇರ್ಪಡೆ
Birla Opus Paints: ಚಾಮರಾಜನಗರದಲ್ಲಿ ಬಿರ್ಲಾ ಒಪಸ್ ಪೇಂಟ್ಸ್ 4ನೇ ಕಾರ್ಖಾನೆ ಆರಂಭ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
Mahaveera Hanuma: ಆಲ್ಬಂನಲ್ಲಿ ಹನುಮ ಗಾನ
Tribanadhari Barbarik: ತ್ರಿಬಾಣಧಾರಿ ಬಾರ್ಬರಿಕದಲ್ಲಿ ವಸಿಷ್ಠ
Naxal: ಸರ್ಕಾರಿ ಬಸ್ ಅಡ್ಡ ಹಾಕಿ ಬೆಂಕಿ ಹಚ್ಚಿ ಕರಪತ್ರ ಹಂಚಿದ್ದ ವಿಕ್ರಂಗೌಡ ಮತ್ತು ತಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.