ಹೆಚ್ಚುತ್ತಿದೆ ರಸ್ತೆ ಅಪಘಾತಗಳು
ದ್ವಿಚಕ್ರ ವಾಹನಗಳ ಪ್ರಮಾಣವೇ ಅಧಿಕ
Team Udayavani, Nov 9, 2020, 1:11 AM IST
ಸಾಂದರ್ಭಿಕ ಚಿತ್ರ
ಮಣಿಪಾಲ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2019ರ ರಸ್ತೆ ಅಪಘಾತಗಳ ವರದಿ ಬಿಡುಗಡೆ ಮಾಡಿದೆ. ಭಾರತದಲ್ಲಿ ವರ್ಷಕ್ಕೆ ಸರಾಸರಿ 4.5 ಲಕ್ಷಕ್ಕೂ ಅಧಿಕ ಅಪಘಾತಗಳು ಸಂಭವಿಸುತ್ತಿವೆ. ಅತೀ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ದೇಶಗಳ ಪೈಕಿ ಭಾರತ ಮೂರನೇ ಸ್ಥಾನದಲ್ಲಿದ್ದು, ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರ ಪ್ರಮಾಣ ಮಾತ್ರ ಇತರೆಲ್ಲ ದೇಶಗಳಿಗಿಂತ ನಾಲ್ಕು ಪಟ್ಟು ಹೆಚ್ಚಾಗಿದ್ದು ವಿಶ್ವದಲ್ಲೇ ಗರಿಷ್ಠವಾಗಿದೆ.
ಪ್ರತೀ ಗಂಟೆಗೆ 17 ಸಾವು
ವಿಶ್ವದ ಇತರ ದೇಶಗಳಿಗೆ ಹೋಲಿಸಿದಲ್ಲಿ ಭಾರತದಲ್ಲಿನ ರಸ್ತೆಗಳು ಕಳಪೆ ಮಟ್ಟದ್ದಾಗಿವೆ. ರಸ್ತೆಗಳ ದುರವ ಸ್ಥೆಯಿಂದಾಗಿ ಪ್ರತೀ ಗಂಟೆಗೆ 17 ಮಂದಿ ಸಾವಿಗೀಡಾಗುತ್ತಿದ್ದಾರೆ. ದೇಶ ದಲ್ಲಿ ಪ್ರತೀ ದಿನ 1,230 ಅಪಘಾ ತಗಳು ಸಂಭವಿಸುತ್ತಿದ್ದು, ಅವು ಗಳಲ್ಲಿ 414 ಮಂದಿ ಸಾವನ್ನಪ್ಪುತ್ತಿದ್ದಾರೆ. ಈ ಪೈಕಿ ಪ್ರತೀ 5 ಮಂದಿಯಲ್ಲಿ ನಾಲ್ವರು ಪುರುಷರಾಗಿದ್ದಾರೆ.
4 ಪಟ್ಟು ಹೆಚ್ಚು
2019ರಲ್ಲಿ ಶೇ.71.1ರಷ್ಟು ಅಪಘಾತಗಳಿಗೆ ಅತಿಯಾದ ವೇಗ ಕಾರಣವಾಗಿದ್ದು, ಆ ಪೈಕಿ ಶೇ.67.3ರಷ್ಟು ಸಾವು ದಾಖಲಾಗಿದೆ. ಅಮೆರಿಕ ಮತ್ತು ಜಪಾನ್‌ಗಿಂತ ಭಾರತದಲ್ಲಿ ಅಪ ಘಾತ ಪ್ರಮಾಣ ಕಡಿಮೆ ಇದೆ. ಆದರೆ ಮರಣ ಪ್ರಮಾಣ ಮಾತ್ರ ನಾಲ್ಕು ಪಟ್ಟು ಹೆಚ್ಚಾಗಿದೆ. ಅತೀ ವೇಗ ಮತ್ತು ಚಾಲಕರು ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ್ ಬಳಸುತ್ತಿರುವುದು ಅತೀ ಹೆಚ್ಚು ಅಪಘಾತಗಳು ಸಂಭವಿಸಲು ಪ್ರಮುಖ ಕಾರಣಗಳಾಗಿವೆ. ಇಂಡೀಕೇಟರ್‌ಗಳನ್ನು ಬಳಸಿ ಹೆಚ್ಚುತ್ತಿರುವ ಅಪಘಾತಗಳಿಗೆ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸದೇ ಇರು ವುದು ಕಾರಣವಾಗಿದೆ. ಮುಖ್ಯವಾಗಿ ಇಂಡೀಕೇಟರ್‌ಗಳನ್ನು ಸರಿಯಾಗಿ ಬಳಸದೇ ಇರುವ ಕಾರಣ ಗೊಂದಲಗಳು ಉಂಟಾಗಿ ಅಪಘಾತಗಳಿಗೆ ಎಡೆಮಾಡಿಕೊಡುತ್ತಿವೆ. ಹೆದ್ದಾರಿಗಳಲ್ಲಿ ಮತ್ತು ಇತರ ರಸ್ತೆಗಳಲ್ಲಿ ಚಲಿಸುವ ಸಂದರ್ಭ ಇಂಡಿಕೇಟರ್‌ಗಳನ್ನು ತಪ್ಪದೇ ಬಳಸಿ. ಯಾಕೆಂದರೆ ಇತರ ವಾಹನಗ ಳಿಗೆ ನಿಮ್ಮ ಚಾಲನೆ ಗೊಂದಲವನ್ನುಂಟು ಮಾಡುತ್ತದೆ.
ನಿಯಂತ್ರಣಕ್ಕೆ ಏನು ಕ್ರಮ?
ವೇಗ ನಿಯಂತ್ರಣ, ಚಾಲನೆ ಸಂದರ್ಭ ಹೆಚ್ಚು ಲಕ್ಷ್ಯ ವಹಿಸುವುದು.
ನಿದ್ದೆಯ ಮಂಪರಿನಲ್ಲಿ ಡ್ರೈವಿಂಗ್ ಮಾಡದಿರುವುದು.
ಅಮಲು ಪದಾರ್ಥ ಸೇವಿಸಿ ಚಾಲನೆ ನಿಷೇಧ.
ವಾಹನಗಳನ್ನು ಸುಸ್ಥಿತಿ ಯಲ್ಲಿಟ್ಟುಕೊಳ್ಳುವುದು.
ರಸ್ತೆ ನಿಯಮಗಳನ್ನು ಪಾಲಿಸುವುದು.
ಸ್ಥಳೀಯಾಡಳಿತ ಸಂಸ್ಥೆಗಳು ಸೂಕ್ತ ಮೂಲ ಸೌಕರ್ಯ ಒದಗಿಸುವುದು.
ಪಾದಚಾರಿಗಳ ಬಗ್ಗೆ ಗಮನ.
ಪ್ರತಿಯೊಬ್ಬರ ಜೀವ ಅಮೂಲ್ಯ ಎಂಬ ಚಿಂತನೆ ಬೆಳೆಸಿಕೊಳ್ಳುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.