ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ನೀಡುವ ಸಾಲ ಪ್ರಮಾಣ ಹೆಚ್ಚಳ
ಸಣ್ಣ ಕೈಗಾರಿಕಾ ಉದ್ದಿಮೆಗಳ ಅಭಿವೃದ್ಧಿಗೆ ಮುನ್ನುಡಿ
Team Udayavani, Feb 27, 2020, 7:24 PM IST
ಗುವಾಹಟಿ: ಬಜೆಟ್ ಮಂಡನೆ ಬಳಿಕ ಸಂವಾದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ವಸಹಾಯ ಸಂಘ, ಸಣ್ಣ ಉದ್ದಿಮೆದಾರ ಸಿಹಿ ಸುದ್ದಿ ನೀಡಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಮುಂಗಡ ಪತ್ರ 2020-21ರ ಕುರಿತು ದೇಶಾದ್ಯಂತ ಆಯ್ದ ನಗರಗಳಲ್ಲಿ ಉದ್ಯಮಿಗಳ ಜತೆ ಸಂವಾದ ಕಾರ್ಯಕ್ರಮ ನಡಿಸುತ್ತಿರುವ ವಿತ್ತ ಸಚಿವೆ ಸೀತಾರಾಮನ್ ಬಜೆಟ್ ಮಂಡನೆ ಬಳಿಕ ಸಣ್ಣ ಕೈಗಾರಿಕಾ ಉದ್ದಿಮೆ ಪ್ರತಿನಿಧಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಈಶಾನ್ಯ ಭಾರತದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿದ ಅವರು ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ಒದಗಿಸುವ ಸಾಲ ಪ್ರಮಾಣವನ್ನು ಹೆಚ್ಚಿಸುತ್ತೇವೆ ಎಂಬ ಘೋಷಣೆಯನ್ನು ಮಾಡಿದ್ದಾರೆ. ಇನ್ನೂ ಕಾರ್ಯಕ್ರಮದದಲ್ಲಿ ವ್ಯಾಪಾರ ಮತ್ತು ಕೈಗಾರಿಕಾ ಪ್ರತಿನಿಧಿಗಳು, ಅರ್ಥಶಾಸ್ತ್ರಜ್ಞರು ಮತ್ತು ನೀತಿ ತಜ್ಞರನ್ನು ಭೇ ಟಿಯಾಗಿದ್ದು, “ಈಶಾನ್ಯ ಭಾರತದ ಕೈಗಾರಿಕಾ ಅಭಿವೃದ್ಧಿಗೆ ಅಗತ್ಯವಾದ ಸಹಕಾರ ಒದಗಿಸುವುದಾಗಿ’ ಭರವಸೆ ನೀಡಿದ್ದಾರೆ.
ಸರಕಾರ ಆರ್ಥಿಕ ಹಿಂಜರಿತದ ನಡುವೆಯೂ ಸ್ಥಿರವಾಗಿ ಉತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. ಜತೆಗೆ ಮುಂಬರುವ ದಿನಗಳಲ್ಲಿ ತೆರಿಗೆಗೆ ಸಂಬಂಧಿಸಿದ ಎಲ್ಲ ವಿವಾದಗಳನ್ನು ಬಗೆಹರಿಸುವಲ್ಲಿ ಕಾರ್ಯಾಚಾರಿಸಲಿದೆ. ಜತೆಗೆ ಅಗತ್ಯವಿರುವ ಜನರಿಗೆ ಸಣ್ಣ ಉದ್ಯಮಗಳನ್ನು ಆರಂಭಿಸಲು ಅಥವಾ ಅವುಗಳನ್ನು ವಿಸ್ತರಿಸಲು ಸ್ಥಳೀಯ ಸ್ವ-ಸಹಾಯ ಗುಂಪುಗಳಿಗೆ ಸಾಲ ನೀಡುವಿಕೆ ಪ್ರಮಾಣವನ್ನು ಹೆಚ್ಚಿಸಲು ಅನುಮತಿ ನೀಡಲಾಗುವುದು. ಇದರಿಂದ ಆರ್ಥಿಕತೆಯ ಮೇಲೆ ಪೂರಕವಾದ ಪರಿಣಾಮ ಬೀರಲಿದೆ. ಈಶಾನ್ಯದ ರಾಜ್ಯಗಳು ತಮ್ಮ ಸಾಂಪ್ರದಾಯಿಕ ಕೈಗಾರಿಕೆಗಳಲ್ಲಿ ಉತ್ತಮ ಸಾಧನೆ ತೋರಲು ಸೌಲಭ್ಯಗಳು ಹೊಂದಿರಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.