By polls ಇಂಡಿಯಾ ಮೈತ್ರಿಕೂಟಕ್ಕೆ ಉತ್ತೇಜನ ; ವಿಪಕ್ಷಗಳಿಗೆ 4, ಬಿಜೆಪಿಗೆ 3
ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳ ಫಲಿತಾಂಶ; ಯುಪಿಯಲ್ಲಿ ಬಿಜೆಪಿಗೆ ಶಾಕ್
Team Udayavani, Sep 8, 2023, 9:13 PM IST
ಹೊಸದಿಲ್ಲಿ: ಆರು ರಾಜ್ಯಗಳ ಏಳು ವಿಧಾನಸಭಾ ಸ್ಥಾನಗಳಿಗೆ ಸೆಪ್ಟೆಂಬರ್ 5 ರಂದು ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಶುಕ್ರವಾರ ನಡೆಯಿತುದ್ದು, ದೊಡ್ಡ ಉತ್ತೇಜನ ಎಂಬಂತೆ ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಮೇಲುಗೈ ಸಾಧಿಸಿದ್ದು, ಬಿಜೆಪಿ 3 ಸ್ಥಾನಗಳನ್ನು ಮಾತ್ರ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ತ್ರಿಪುರಾದ ಬೊಕ್ಸಾನಗರ ಮತ್ತು ಧನ್‌ಪುರ ಕ್ಷೇತ್ರಗಳಲ್ಲಿ ಬಿಜೆಪಿ ಜಯಗಳಿಸಿದ್ದು, ಅಭ್ಯರ್ಥಿಗಳಾದ ತಫಜ್ಜಲ್ ಹೊಸೈನ್ ಮತ್ತು ಬಿಂದು ದೇಬನಾಥ್ ಅವರು ಕ್ರಮವಾಗಿ 30,237 ಮತ್ತು 18,871 ಮತಗಳ ಅಂತರದಿಂದ ಜಯಗಳಿಸಿದರು. ಉತ್ತರಾಖಂಡದ ಬಾಗೇಶ್ವರ ಕ್ಷೇತ್ರವನ್ನು ಬಿಜೆಪಿ ಉಳಿಸಿಕೊಂಡಿದ್ದು, ಅಭ್ಯರ್ಥಿ ಪಾರ್ವತಿ ದಾಸ್ ಕಾಂಗ್ರೆಸ್ ಅಭ್ಯರ್ಥಿ ಬಸಂತ್ ಕುಮಾರ್ ಅವರನ್ನು 2,400 ಮತಗಳಿಂದ ಸೋಲಿಸಿದ್ದಾರೆ.
ಕೇರಳದಲ್ಲಿ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ 50 ವರ್ಷಗಳ ಕಾಲ ಪ್ರತಿನಿಧಿಸಿದ್ದ ಪುತ್ತುಪ್ಪಲ್ಲಿ ಕ್ಷೇತ್ರವನ್ನು ಕಾಂಗ್ರೆಸ್ ಉಳಿಸಿಕೊಂಡಿದೆ. ಉಮ್ಮನ್ ಚಾಂಡಿ ಅವರ ಪುತ್ರ 37ರ ಹರೆಯದ ಚಾಂಡಿ ಉಮ್ಮನ್ ಆಡಳಿತಾರೂಢ ಸಿಪಿಐ(ಎಂ) ಅಭ್ಯರ್ಥಿ ಜೈಕ್ ಸಿ ಥಾಮಸ್ ಅವರನ್ನು 36,000 ಮತಗಳಿಂದ ಸೋಲಿಸಿದ್ದಾರೆ. ಜುಲೈನಲ್ಲಿ ಉಮ್ಮನ್ ಚಾಂಡಿ ನಿಧನ ಹೊಂದಿದ್ದರು. ಇಲ್ಲಿ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಡುವೆಯೇ ಸ್ಪರ್ಧೆ ನಡೆದಿದೆ. ಬಿಜೆಪಿ ಅಭ್ಯರ್ಥಿ ಲಿಜಿನ್ ಲಾಲ್ 6558 ಮತಗಳನ್ನು ಪಡೆದಿದ್ದಾರೆ.
ಜಾರ್ಖಂಡ್ ನಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರ ಪಕ್ಷವಾಗಿರುವ ಜಾರ್ಖಂಡ್ ಮುಕ್ತಿ ಮೋರ್ಚಾದ ಬೇಬಿ ದೇವಿ ಅವರು ಡುಮ್ರಿ ಉಪಚುನಾವಣೆಯಲ್ಲಿ 17,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದಿದ್ದಾರೆ, ಹತ್ತಿರದ ಪ್ರತಿಸ್ಪರ್ಧಿ AJSU ನ ಯಶೋದಾ ದೇವಿ ಅವರನ್ನು ಸೋಲಿಸಿದರು.
ಕೇರಳ ದಂತೇ ಇಂಡಿಯಾ ಮೈತ್ರಿಕೂಟಕ್ಕೆ ಸಂದಿಗ್ಧವಾಗಿದ್ದ ಪಶ್ಚಿಮ ಬಂಗಾಳದ ಧುಪ್ಗುರಿ ಕ್ಷೇತ್ರವನ್ನು ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಬಿಜೆಪಿಯಿಂದ ವಶಪಡಿಸಿಕೊಂಡಿದೆ. 4,300 ಮತಗಳಿಂದ ಸೋಲಿಸಿದೆ. ಕಾಂಗ್ರೆಸ್ ಸ್ಪರ್ಧಿಸಿರಲಿಲ್ಲ. ಸಿಪಿಐ(ಎಂ) ಅಭ್ಯರ್ಥಿ ಕಣದಲ್ಲಿದ್ದರು.
ಉತ್ತರ ಪ್ರದೇಶದ ಘೋಸಿ ಕ್ಷೇತ್ರದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷವು ಇಂಡಿಯಾ ಮೈತ್ರಿಕೂಟದ ಪಾಲುದಾರರ ಬೆಂಬಲದೊಂದಿಗೆ ಗೆಲುವು ಸಾಧಿಸಿದೆ. ಬಿಜೆಪಿಯನ್ನು 42,000 ಕ್ಕೂ ಹೆಚ್ಚು ಮತಗಳಿಂದ ಸೋಲಿಸಿ ಸಂಭ್ರಮಿಸಿದೆ.
ಈ ವರ್ಷಾಂತ್ಯದಲ್ಲಿ ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು, 2024ರಲ್ಲಿ ನಡೆಯಲಿರುವ ನಿರ್ಣಾಯಕ ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧ ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಮೈತ್ರಿಕೂಟ (ಇಂಡಿಯಾ) ಬಣಕ್ಕೆ ಉಪಚುನಾವಣೆ ಫಲಿತಾಂಶ ಪರೀಕ್ಷೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.