ಪ್ರತಿದಾಳಿ ನಡೆಸಿದ ಪಾಕ್ ನ 2 ಡ್ರೋಣ್ ಹೊಡೆದುರುಳಿಸಿದ ಭಾರತೀಯ ಸೇನೆ
Team Udayavani, Feb 26, 2019, 5:56 AM IST
ನವದೆಹಲಿ:ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ 40ಯೋಧರು ಹುತಾತ್ಮರಾದ ಘಟನೆಗೆ ಭಾರತೀಯ ಸೇನೆ ಮಂಗಳವಾರ ಮುಂಜಾನೆ ಪಾಕ್ ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಂಡಿದೆ. ಏತನ್ಮಧ್ಯೆ ಪಾಕಿಸ್ತಾನ ಕೂಡಾ ಭಾರತೀಯ ಸೇನಾಪಡೆಯ ದಾಳಿಗೆ ಪ್ರತಿದಾಳಿ ನಡೆಸಿ ಮುಖಭಂಗ ಅನುಭವಿಸಿರುವ ಮಾಹಿತಿ ಹೊರಬಿದ್ದಿದೆ.
ಮಂಗಳವಾರ ಮುಂಜಾನೆ ಭಾರತೀಯ ವಾಯುಸೇನೆ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ಪಾಕಿಸ್ತಾನ ಗುಜರಾತ್ ನ ಕಛ್ ಪ್ರದೇಶದತ್ತ ನಡೆಸಿದ್ದ ಡ್ರೋಣ್ ಅನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಬೆಳಗ್ಗೆ 6.30ರ ಸುಮಾರಿಗೆ ಕಛ್ ನತ್ತ ಬಂದಿದ್ದ ಡ್ರೋಣ್ ಅನ್ನು ಹೊಡೆದುರುಳಿಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇಂದು ಮುಂಜಾನೆ 3.30ರ ಹೊತ್ತಿಗೆ ಭಾರತೀಯ ವಾಯುಸೇನೆ ಗಡಿಯೊಳಗೆ ನುಗ್ಗಿ ದಾಳಿ ನಡೆಸುವ ಮೂಲಕ ಪಾಕ್ ನ ಉಗ್ರರ ಅಡಗುತಾಣ ಹಾಗೂ ಸುಮಾರು 300 ಉಗ್ರರನ್ನು ನಾಶ ಮಾಡಿದೆ. ಕೇವಲ 21 ನಿಮಿಷಗಳ ಕಾರ್ಯಾಚರಣೆ ನಡೆಸಿ ಗಡಿಯೊಳಗೆ ಇದ್ದ ಉಗ್ರರ ಅಡಗುತಾಣಗಳನ್ನು ನಾಶ ಮಾಡಿದೆ.
ಅಷ್ಟೇ ಅಲ್ಲ ಪಾಕಿಸ್ತಾನದ ಮತ್ತೊಂದು ಮಾನವ ರಹಿತ ವಿಮಾನವನ್ನೂ ಕೂಡಾ ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನ ಎರಡು ವಾಯುನೆಲೆಯನ್ನು ಬಳಸಿಕೊಂಡು ಭಾರತದ ಮೇಲೆ ದಾಳಿ ನಡೆಸಲು ನಡೆಸಿದ್ದ ಪ್ರಯತ್ನವನ್ನು ವಿಫಲಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ…? ಇಲ್ಲಿದೆ ನೋಡಿ ಮಾಹಿತಿ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
MUST WATCH
ಹೊಸ ಸೇರ್ಪಡೆ
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.