ದೇಶದಲ್ಲಿ ಕೋವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬಳಸಲು ಅನುಮತಿ
Team Udayavani, Jan 3, 2021, 11:18 AM IST
ಹೊಸದಿಲ್ಲಿ: ಕೋವಿಡ್ 19 ಲಸಿಕೆ ಸಂಬಂಧ ಭಾರತೀಯ ಔಷಧ ಮಹಾನಿರ್ದೇಶನಾಲಯ (ಡಿಸಿಜಿಐ) ಅಧ್ಯಕ್ಷ ವಿ.ಜಿ ಸೊಮಾನಿ ಪ್ರಮುಖ ಘೋಷಣೆ ಮಾಡಿದ್ದು, ತುರ್ತು ಬಳಕೆಗೆ ಕೋವ್ಯಾಕ್ಸಿನ್ ಮತ್ತು ಕೊವಿಶೀಲ್ಡ್ ಲಸಿಕೆ ಬಳಸುವಂತೆ ಅನುಮತಿ ನೀಡಿದೆ.
ಹೊಸದಿಲ್ಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸೊಮಾನಿ ಭಾರತದ ಮೊದಲ ಕೋವಿಡ್ ಲಸಿಕೆಗೆ ಅನುಮತಿ ನೀಡಿರುವ ಕುರಿತು ಘೋಷಿಸಿದರು.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ನ ಕೋವ್ಯಾಕ್ಸಿನ್ ಮತ್ತು ಸೀರಮ್ ಇನ್ಸ್ಟಿಟ್ಯೂಟ್ ನ ಕೊವಿಶೀಲ್ಡ್ ಲಸಿಕೆಯನ್ನು ಬಳಸಬಹುದು ಎಂದು ಘೋಷಿಸಿದರು.
ಇದನ್ನೂ ಓದಿ:ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಕುಟುಂಬಗಳಿಂದ ಮಾತ್ರ ದೇಣಿಗೆಗೆ ಮನವಿ
ಕೇಂದ್ರ ಸರ್ಕಾರದ ತಜ್ಞರ ಸಮಿತಿ ಕೊವಿಶೀಲ್ಡ್ ಲಸಿಕೆಗೆ ಭಾರತದಲ್ಲಿ ತುರ್ತು ಅನುಮತಿ ನೀಡಬಹುದು ಎಂದು ಶಿಫಾರಸ್ಸು ಮಾಡಿತ್ತು. ಶನಿವಾರ ಭಾರತದ ದೇಸಿ ಲಸಿಕೆ ಕೋವ್ಯಾಕ್ಸಿನ್ ಗೂ ತುರ್ತು ಬಳಕೆಗೆ ಅನುಮತಿ ನೀಡಬಹುದು ಎಂದು ಶೀಫಾರಸ್ಸು ಮಾಡಿತ್ತು. ಸದ್ಯ ಭಾರತೀಯ ಔಷಧ ಮಹಾನಿರ್ದೇಶನಾಲಯ ಈ ಎರಡೂ ಲಸಿಕೆಗಳನ್ನು ಅಂಗೀಕರಿಸಿದ್ದು, ದೇಶದಲ್ಲಿ ಕೋವಿಡ್ ಲಸಿಕೆ ವಿತರಣೆ ಆರಂಭವಾಗಲಿದೆ.
ಶನಿವಾರ ದೇಶದ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕೋವಿಡ್ ಲಸಿಕೆ ನೀಡುವ ಅಣಕು ಅಭಿಯಾನ ನಡೆದಿತ್ತು. ರಾಜ್ಯದಲ್ಲೂ 16 ಆರೋಗ್ಯ ಕೇಂದ್ರಗಳಲ್ಲಿ ಈ ಅಣಕು ಲಸಿಕೆ ವಿತರಣೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್‌ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.