ಗೋಗ್ರಾ- ಹಾಟ್‌ಸ್ಪ್ರಿಂಗ್ಸ್‌ನಿಂದ ಸೇನೆ ವಾಪಸ್
Team Udayavani, Sep 9, 2022, 6:58 AM IST
ಹೊಸದಿಲ್ಲಿ: ಪೂರ್ವ ಲಡಾಖ್‌ನ ಗೋಗ್ರಾ- ಹಾಟ್‌ಸ್ಪ್ರಿಂಗ್ಸ್ ಪ್ರದೇಶದಿಂದ ಭಾರತ- ಚೀನ ಹಿಂದೆ ಸರಿಯುವ ಪ್ರಕ್ರಿಯೆ ಆರಂಭಿಸಿವೆ. ಈ ಮೂಲಕ ಗಸ್ತು ಕೇಂದ್ರ 15ರಲ್ಲಿ 2 ವರ್ಷಗಳಿಂದಲೂ ಮುಂದುವರಿದಿದ್ದ ಸಂಘರ್ಷಕ್ಕೆ ಅಂತ್ಯ ಹಾಡಿದಂತಾಗಿದೆ.
ಜುಲೈಯಲ್ಲಿ ಎರಡೂ ದೇಶಗಳ ಮಧ್ಯೆ ನಡೆದಿದ್ದ 16ನೇ ಸುತ್ತಿನ ಮಾತುಕತೆಯ ಫಲವೆಂಬಂತೆ ಸೆ. 8ರಿಂದ ಉಭಯ ಪಡೆಗಳೂ ಗೋಗ್ರಾ-ಹಾಟ್‌ಸ್ಪ್ರಿಂಗ್ಸ್‌ನಿಂದ ಯೋಜನಾಬದ್ಧವಾಗಿ ವಾಪಸಾಗಲು ಆರಂಭಿಸಿವೆ ಎಂದು ಉಭಯ ಸೇನೆಗಳು ಗುರುವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ತಿಳಿಸಿವೆ.
ಉಜ್ಬೇಕಿಸ್ಥಾನದಲ್ಲಿ ಶಾಂಘೈ ಸಹಕಾರ ಸಂಘ(ಎಸ್‌ಸಿಒ)ದ ಶೃಂಗಸಭೆಗೆ ಒಂದು ವಾರ ಬಾಕಿಯಿರುವಾಗ ಈ ಘೋಷಣೆ ಹೊರಬಿದ್ದಿದೆ. ಶೃಂಗದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗಿಯಾಗುವರು. ಅಂದು ಉಭಯ ನಾಯಕರ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯುವ ಸಾಧ್ಯತೆಯೂ ಇದೆ. ಈ ಹಿಂದೆಯೇ ಲಡಾಖ್‌ನ ಗಾಲ್ವಾನ್‌ಪ್ರದೇಶ, ಪಾಂಗಾಂಗ್ ಸರೋವರ ಪ್ರದೇಶದಿಂದ ಎರಡೂ ಸೇನೆಗಳು ವಾಪಸಾಗಿವೆ. ಡೆಪ್ಸಾಂಗ್ ಪ್ರದೇಶದ ಉತ್ತರ ಭಾಗದಿಂದ ಮಾತ್ರ ಚೀನ ಸೇನೆ ಇನ್ನೂ ಹಿಂದೆಸರಿದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Narendra Modi: 43 ವರ್ಷದ ಬಳಿಕ ಭಾರತ ಪ್ರಧಾನಿ ಕುವೈಟ್ ಭೇಟಿ: 21ರಿಂದ ಮೋದಿ ಪ್ರವಾಸ
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
MUST WATCH
ಹೊಸ ಸೇರ್ಪಡೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Mumbai Coast: ಗೇಟ್‌ವೇ ಆಫ್ ಇಂಡಿಯಾ ಬಳಿ ದೋಣಿ ದುರಂತ: 13 ಮಂದಿ ದುರ್ಮರಣ!
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.