ಕೋವಿಡ್-19: ಒಂದೇ ದಿನ 14,199 ಹೊಸ ಪ್ರಕರಣ, ಹಲವು ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ದ್ವಿಗುಣ
Team Udayavani, Feb 22, 2021, 10:03 AM IST
ನವದೆಹಲಿ: ದೇಶದಲ್ಲಿ ಕೋವಿಡ್ 2ನೇ ಅಲೆ ಭೀತಿ ಆರಂಭವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರೀಯ ಪ್ರಕರಣಗಳ ಸಂಖ್ಯೆ ಕೂಡ 1,50,055ಕ್ಕೆ ಹೆಚ್ಚಳವಾಗಿದೆ.
ಕಳೆದ 5 ದಿನಕ್ಕೆ ಹೋಲಿಸಿದರೆ ಭಾನುವಾರ ಒಂದೇ ದಿನ (ಫೆ.21) ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ವರದಿಗಳ ಪ್ರಕಾರ 22 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶನಿವಾರ (ಫೆ.20) ಯಾವುದೇ ಕೋವಿಡ್ ಸಂಬಂಧಿತ ಸಾವು ಕಂಡುಬಂದಿಲ್ಲ. ಕೇರಳ ಮತ್ತು ಮಹಾರಾಷ್ಟ್ರದಲ್ಲೇ ಅತೀ ಹೆಚ್ಚು ಪ್ರಮಾಣದಲ್ಲಿ (72%) ಸಕ್ರೀಯ ಪ್ರಕರಣಗಳಿವೆ.
ಇದನ್ನೂ ಓದಿ: ಮಧ್ಯಪ್ರದೇಶ: 10 ಅಡಿ ಕೆಳಕ್ಕೆ ಬಿದ್ದ ಮಾಜಿ ಸಿಎಂ ಕಮಲ್ ನಾಥ್ ಪ್ರಯಾಣಿಸುತ್ತಿದ್ದ ಲಿಫ್ಟ್
ಕಳೆದ 24 ಗಂಟೆಗಳಲ್ಲಿ 14,199 ಹೊಸ ಪ್ರಕರಣ ಕಂಡುಬಂದರೆ, 9,695 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 83 ಮಂದಿ ಕೋವಿಡ್ ವೈರಸ್ ಕಾರಣದಿಂದ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,10, 05,850ಕ್ಕೆ ಏರಿಕೆಯಾಗಿದೆ. ಒಟ್ಟು 1,06,99,410 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಮೃತರ ಸಂಖ್ಯೆ 1,56,385. ಸದ್ಯ ದೇಶದಲ್ಲಿರುವ ಸಕ್ರಿಯ ಪ್ರಕರಣಗಳ ಸಂಖ್ಯೆ 1,50,055.
ಮಹಾರಾಷ್ಟ್ರ, ಕೇರಳ ಮಾತ್ರವಲ್ಲದೆ ಮಧ್ಯಪ್ರದೇಶ, ಚತ್ತಿಸ್ ಗಡದಲ್ಲೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಪಂಜಾಬ್ ಮತ್ತು ಜಮ್ಮಕಾಶ್ಮೀರದಲ್ಲೂ ಹೊಸ ಪ್ರಕರಣಗಳ ಸಂಖ್ಯೆ ದ್ವಿಗುಣಗೊಂಡಿದೆ.
ಇದನ್ನೂ ಓದಿ: ಫೇಸ್ ಬುಕ್ ಲೈವ್ ಮಾಡುತ್ತಲೇ ಮೈಮರೆತ ಯುವಕರು; ಬೋಟ್ ಮಗುಚಿ ಇಬ್ಬರು ಸಾವು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.