ಕಚ್ಚಾ ತೈಲ ಆಮದು ಕಡಿತ?
Team Udayavani, Sep 26, 2018, 5:15 PM IST
ನವದೆಹಲಿ: ವರ್ಷಾಂತ್ಯದ ಅವಧಿಗೆ ಜಾಗತಿಕ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 100 ಡಾಲರ್ ತಲುಪುವ ಸಾಧ್ಯತೆ ಇದೆ. ಹೀಗಾಗಿ, ದೇಶದಲ್ಲಿರುವ ತೈಲೋತ್ಪನ್ನ ಕಂಪನಿಗಳು ಕಚ್ಚಾ ತೈಲ ಆಮದು ಪ್ರಮಾಣ ತಗ್ಗಿಸುವ ಬಗ್ಗೆ ಯೋಚನೆ ಮಾಡುತ್ತಿವೆ. 2014ರ ನ.21ರ ಬಳಿಕ ಕಚ್ಚಾ ತೈಲ ಪ್ರತಿ ಬ್ಯಾರೆಲ್‌ಗೆ 81.39 ಡಾಲರ್‌ಗೆ ತಲುಪಿರುವ ಹಿನ್ನೆಲೆಯಲ್ಲಿ ಈ ಚಿಂತನೆ ನಡೆದಿದೆ.
ಇದೇ ವೇಳೆ ಅಮೆರಿಕದ ಟೆಕ್ಸಾಸ್ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 1.30 ಅಮೆರಿಕನ್ ಡಾಲರ್‌ನಷ್ಟು ಏರಿಕೆಯಾಗಿದೆ. ಅದಕ್ಕೆ ಪೂರಕವಾಗಿ ಇರಾನ್‌ನಿಂದ ನ.4ರ ಬಳಿಕ ಕಚ್ಚಾ ತೈಲ ಆಮದು ಮಾಡಿಕೊಳ್ಳಬಾರದು ಎಂದು ಅಮೆರಿಕ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿರುವುದರಿಂದ ಅಲ್ಲಿಂದ ಸಂಪೂರ್ಣವಾಗಿ ಖರೀದಿ ಪ್ರಕ್ರಿಯೆ ನಿಲ್ಲಲಿದೆ. ಅದಕ್ಕೆ ಪೂರಕವಾಗಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿಯುತ್ತಿರುವ ಕಾರಣ, ಕಚ್ಚಾ ತೈಲ ಆಮದಿಗೆ ಆಗುತ್ತಿರುವ ವೆಚ್ಚವು ಶೇ.47ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಏಕೆಂದರೆ ಇರಾನ್‌ಗೆ ಸಂಬಂಧಿಸಿದಂತೆ ಭಾರತ ಸರ್ಕಾರ ರೂಪಾಯಿಯಲ್ಲಿಯೇ ಪಾವತಿ ಮಾಡುತ್ತಿದೆ. ಉಳಿದಂತೆ ಅದು ಡಾಲರ್‌ನಲ್ಲಿಯೇ ಪಾವತಿ ಮಾಡುವುದರಿಂದ ಕೇಂದ್ರದ ಬೊಕ್ಕಸಕ್ಕೆ ಹೊರೆಯಾಗಲಿದೆ. ಪರಿಸ್ಥಿತಿ ನಿಭಾಯಿಸಲು ಕಚ್ಚಾ ತೈಲ ಆಮದು ತಗ್ಗಿಸಿ, ಈಗಾಗಲೇ ಸಂಗ್ರಹಿಸಲಾಗಿರುವುದನ್ನು ಬಳಕೆ ಮಾಡಲು ಚಿಂತನೆ ನಡೆಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಅಧ್ಯಕ್ಷ ಸಂಜೀವ್ ಸಿಂಗ್ ಕೂಡ ಅದನ್ನು ಖಚಿತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.