35 ಸಾವಿರ ಯೋಧರ ಜಮೆ: ಎಲ್‌ಎಸಿಯಿಂದ ಚೀನ ವಾಪಸಾತಿ ಸುಳ್ಳು: ಭಾರತ
Team Udayavani, Jul 31, 2020, 6:17 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ರಫೇಲ್ ಸಮರ ವಿಮಾನಗಳ ಆಗಮನದ ಬೆನ್ನಲ್ಲೇ ವಾಸ್ತವ ನಿಯಂತ್ರಣ ರೇಖೆಯಲ್ಲಿ (ಎಲ್‌ಎಸಿ) ಇನ್ನೂ 35 ಸಾವಿರ ಯೋಧರನ್ನು ಭಾರತ ನಿಯೋಜಿಸಿದೆ.
ಎರಡು ದೇಶಗಳ ನಡುವಿನ ಉದ್ವಿಗ್ನ ಸ್ಥಿತಿ ಇನ್ನೂ ಸುಧಾರಣೆಯಾಗದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸರಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಈ ಬಗ್ಗೆ ಸೇನೆ ಯಾವುದೇ ಮಾಹಿತಿ ನೀಡಿಲ್ಲ.
ಕಾರ್ಪ್ಸ್ ಕಮಾಂಡರ್‌ಗಳ ಮಟ್ಟದ ಹಲವಾರು ಸುತ್ತಿನ ಮಾತುಕತೆಯ ಅನಂತರ ಎಲ್‌ಎಸಿಯಿಂದ ಸೇನೆಯನ್ನು ವಾಪಸ್ ಕರೆಸಿಕೊಳ್ಳುವುದಕ್ಕೆ ಎರಡೂ ದೇಶಗಳು ನಿರ್ಧರಿಸಿದ್ದವು.
ಮುಂದಿನ ವಾರ ಮತ್ತೂಂದು ಸುತ್ತಿನ ಕಾರ್ಪ್ಸ್ ಕಮಾಂಡರ್ ಮಟ್ಟದ ಮಾತು ಕತೆ ಇದೆ. ಒಂದು ವೇಳೆ ಇದು ವಿಫಲವಾದರೆ ಉದ್ಭವಿಸಬಹುದಾದ ಯಾವುದೇ ಪರಿಸ್ಥಿತಿ ಎದುರಿಸಲು ಭಾರತ ಈ ಹೆಜ್ಜೆ ಇರಿಸಿದೆ ಎಂದು ಮೂಲಗಳು ತಿಳಿಸಿವೆ.
ಗಡಿ ಬದಲು ಮಾಡುವಂತಿಲ್ಲ: ಆಸ್ಟ್ರೇಲಿಯಾ
ಈ ಬೆಳವಣಿಗೆಗಳ ಮಧ್ಯೆ ಆಸ್ಟ್ರೇಲಿಯಾ ಮತ್ತೂಮ್ಮೆ ಭಾರತದ ಬೆಂಬಲಕ್ಕೆ ನಿಂತಿದ್ದು, ಎಲ್‌ಎಸಿಯಲ್ಲಿ ಯಥಾಸ್ಥಿತಿ ಬದಲಾವಣೆ ಮಾಡಲು ಚೀನ ಯತ್ನಿಸಬಾರದು ಎಂದು ಸೂಚಿಸಿದೆ. ಗಡಿಯಲ್ಲಿ ಯಥಾಸ್ಥಿತಿ ಬದಲಾವಣೆಯನ್ನು ನಾವು ವಿರೋಧಿಸುತ್ತೇವೆ ಎಂದು ಭಾರತದಲ್ಲಿರುವ ಆಸ್ಟ್ರೇಲಿಯಾದ ಹೈಕಮಿಷನರ್ ಹೇಳಿದ್ದಾರೆ.
ಚೀನ ಹೇಳಿಕೆ ತಿರಸ್ಕರಿಸಿದ ಭಾರತ
ಎಲ್‌ಎಸಿಯುದ್ದಕ್ಕೂ ಸೇನೆಯನ್ನು ವಾಪಸ್ ಕರೆಸಿ ಕೊಳ್ಳ ಲಾಗಿದೆ ಎಂದು ಚೀನ ಬುಧವಾರ ನೀಡಿದ್ದ ಹೇಳಿಕೆ ಯನ್ನೂ ಕೇಂದ್ರ ಸರಕಾರ ತಿರಸ್ಕರಿಸಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಅದು, ಎಲ್‌ಎಸಿಯ ಕೆಲವು ಕಡೆ ಗಳಲ್ಲಿ ಚೀನದ ಸೈನಿಕರು ಇನ್ನೂ ಇದ್ದಾರೆ, ಚೀನ ಸುಳ್ಳು ಹೇಳು ತ್ತಿದೆ ಎಂದಿದೆ. ಪಾಂಗೋಂಗ್ ತ್ಸೊ ಮತ್ತು ಗೋಗ್ರಾದ 17 ಎ ಗಸ್ತು ಪಾಯಿಂಟ್‌ನಿಂದ ಚೀನ ಕಾಲ್ತೆಗೆದಿಲ್ಲ ಎಂದೂ ತಿಳಿಸಿದೆ.
ಸ್ಮಾರಕದಲ್ಲಿ ಗಾಲ್ವಾನ್ ಹುತಾತ್ಮರ ಹೆಸರು
ಗಾಲ್ವಾನ್ ಕಣಿವೆಯಲ್ಲಿ ಚೀನದ ಸೈನಿಕರ ಜತೆಗೆ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ವೀರಯೋಧರ ಹೆಸರುಗಳನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಉಲ್ಲೇಖಿಸಲಾಗುವುದು ಎಂಬುದಾಗಿ ಕೇಂದ್ರ ಸರಕಾರ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.