ಆಹಾರ ಉತ್ಪಾದನೆ ದಾಖಲೆ?
Team Udayavani, Dec 18, 2017, 6:55 AM IST
ಹೊಸದಿಲ್ಲಿ: ಕಳೆದ ವರ್ಷದಂತೆಯೇ ಪ್ರಸಕ್ತ ಸಾಲಿನಲ್ಲಿಯೂ ಆಹಾರ ಧಾನ್ಯಗಳ ಉತ್ಪಾದನೆ 275 ದಶಲಕ್ಷ ಟನ್ ತಲುಪುವ ನಿರೀಕ್ಷೆಯಿದೆ. ಉತ್ತಮ ಪ್ರಮಾಣದಲ್ಲಿ ಸುರಿದ ಮಳೆ ಕೂಡ ಇದಕ್ಕೆ ಕಾರಣ.
ಆದರೆ, ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಪ್ರಮಾಣದಲ್ಲಿ ಬೆಲೆ ಕುಸಿತವಾದೀತೇ ಎನ್ನುವುದು ರೈತರ ಆತಂಕವಾಗಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು 90 ಸಾವಿರ ಕೋಟಿ ರೂ.ಗಳಷ್ಟು ಸಾಲ ಮನ್ನಾ ಮಾಡುವ ಮೂಲಕ ತಮ್ಮ ತಮ್ಮ ರಾಜ್ಯಗಳಲ್ಲಿನ ರೈತರಿಗೆ ನೆರವಾಗಿವೆ ಎನ್ನುವುದು ಗಮನಾರ್ಹ. ಕಳೆದ 2 ವರ್ಷಗಳಿಂದ ಆಹಾರ ಉತ್ಪಾದನೆ ಪ್ರಮಾಣ ಗರಿಷ್ಠವಾಗಿದ್ದರೂ, ರೈತರ ಆದಾಯದಲ್ಲಿ ಸುಧಾರಣೆ ಕಂಡಿಲ್ಲ ಎನ್ನುತ್ತಾರೆ ತಜ್ಞರು.
ಕರ್ನಾಟಕ, ಛತ್ತೀಸ್‌ಗಢ ಮತ್ತು ತಮಿಳುನಾಡಿನ ಕೆಲ ಭಾಗಗಳಲ್ಲಿ ಕೊಂಚ ಬರದ ಛಾಯೆ ಕಂಡು ಬಂದಿದ್ದರೆ, ಅಸ್ಸಾಂ, ಬಿಹಾರ, ಗುಜರಾತ್ ಮತ್ತು ರಾಜಸ್ಥಾನಗಳಲ್ಲಿ ಧಾರಾಕಾರ ಮಳೆಯಾಗಿ ಪ್ರವಾಹ ಉಂಟಾಗಿತ್ತು. ಇದರ ಹೊರತಾಗಿಯೂ ದೇಶದಲ್ಲಿ ಆಹಾರ ಉತ್ಪಾದನೆ ಗರಿಷ್ಠ ಪ್ರಮಾಣದಲ್ಲಿತ್ತು. ಕೇಂದ್ರ ಕೃಷಿ ಖಾತೆ ಕಾರ್ಯದರ್ಶಿ ಶೋಭನಾ ಕೆ ಪಟ್ಟನಾಯಕ್ ಮಾತನಾಡಿ, 2018ನೇ ವರ್ಷ ಕೃಷಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚು ಆಶಾದಾಯಕ ವರ್ಷವಾಗಲಿದೆ. ಬೇಡಿಕೆ ಮತ್ತು ಬೆಲೆಯ ನಡುವೆ ಸಮಾನತೆ ಇರಲಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Human Error: ಮಾನವ ಲೋಪದಿಂದಲೇ CDS ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ: ವರದಿ
Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ
Burhan Wani; ಬುರ್ಹಾನ್ ವಾನಿ ಅನುಚರ ಸೇರಿ 5 ಉಗ್ರರ ಎನ್ಕೌಂಟರ್
IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.