ಭಾರತ ಪೂರ್ಣ ಶಟ್‌ಡೌನ್
Team Udayavani, Mar 24, 2020, 2:04 AM IST
ಹೊಸದಿಲ್ಲಿ: ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಎಲ್ಲ ರಾಜ್ಯಗಳು ಸೋಮವಾರ ಸಂಪೂರ್ಣ ಶಟ್‌ಡೌನ್ ಘೋಷಿಸಿವೆ. ಒಂದು ವೇಳೆ ಈ ಲಾಕ್‌ಡೌನ್ ಅನ್ನು ಉಲ್ಲಂಘಿಸಿದರೆ ಕಠಿನ ಶಿಕ್ಷೆ ಪಕ್ಕಾ ಎಂದು ಆಯಾ ರಾಜ್ಯ ಸರಕಾರಗಳು ಎಚ್ಚರಿಕೆ ನೀಡಿವೆ. ಪ್ರಧಾನಿ ಮೋದಿ ಅವರು ಜನರ ಎಗ್ಗಿಲ್ಲದ ಓಡಾಟದ ಬಗ್ಗೆ ಬೇಸರ ವ್ಯಕ್ತಪಡಿಸಿದ ಅನಂತರ ಕೇಂದ್ರ ಸರಕಾರ ರಾಜ್ಯ ಸರಕಾರಗಳಿಗೆ ಕಠಿನ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಿದ ಬೆನ್ನಲ್ಲೇ ವಿವಿಧ ರಾಜ್ಯಗಳು ಈ ಕ್ರಮ ತೆಗೆದುಕೊಂಡಿವೆ. ಶಟ್‌ಡೌನ್ ಉಲ್ಲಂಘಿಸಿದರೆ 6 ತಿಂಗಳು ಜೈಲುವಾಸ ಅಥವಾ 1 ಸಾವಿರ ರೂ. ದಂಡ ಅಥವಾ ಇವೆರಡೂ ಶಿಕ್ಷೆ ವಿಧಿಸಲಾಗುತ್ತದೆ. ಈ ಮಧ್ಯೆ ದೇಶಾದ್ಯಂತ ಕೋವಿಡ್-19ಗೆ ಸಾವನ್ನಪ್ಪಿದವರ ಸಂಖ್ಯೆ 9ಕ್ಕೆ ಏರಿಕೆಯಾಗಿದ್ದು, ಕೋಲ್ಕತಾ ಮತ್ತು ಹಿಮಾಚಲ ಪ್ರದೇಶದಲ್ಲಿ ಹೊಸದಾಗಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
490 ಪ್ರಕರಣ ದೃಢ
ದೇಶಾದ್ಯಂತ ಒಟ್ಟಾರೆಯಾಗಿ 490 ಪ್ರಕರಣಗಳು ದೃಢಪಟ್ಟಿವೆ. ಕೇರಳವೊಂದರಲ್ಲೇ ಸೋಮವಾರ 28 ಪ್ರಕರಣಗಳು ಪತ್ತೆಯಾಗಿವೆ. ಇಲ್ಲಿ ಒಟ್ಟಾರೆ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಅತ್ತ ಮಹಾರಾಷ್ಟ್ರದಲ್ಲೂ ಏರಿಕೆಯಾಗಿದ್ದು, ಒಟ್ಟಾರೆ ಸಂಖ್ಯೆ 97ಕ್ಕೆ ಏರಿದೆ. ರಾಜಸ್ಥಾನ, ಮಹಾರಾಷ್ಟ್ರ, ಗುಜರಾತ್‌ನಲ್ಲೂ ಸೋಂಕುಪೀಡಿತರ ಸಂಖ್ಯೆ ಹೆಚ್ಚಾಗಿದೆ.
ದೇಶೀಯ ವಿಮಾನಯಾನ ರದ್ದು
ದೇಶದಲ್ಲಿ ರೈಲು, ಸಾರಿಗೆ ವ್ಯವಸ್ಥೆ ರದ್ದುಗೊಂಡ ಬೆನ್ನಲ್ಲೇ ದೇಶೀಯ ವಿಮಾನಯಾನವನ್ನೂ
ಸಂಪೂರ್ಣವಾಗಿ ರದ್ದು ಮಾಡುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಘೋಷಣೆ ಮಾಡಿದೆ. ಮಾ. 25ರ ಮಧ್ಯರಾತ್ರಿ 12 ಗಂಟೆಯಿಂದ ಇದು ಜಾರಿಗೆ ಬರಲಿದೆ. ಕಾರ್ಗೋ ವಿಮಾನಗಳು ಕಾರ್ಯಾಚರಿಸಲಿವೆ.
ಗಂಭೀರವಾಗಿ ಪರಿಗಣಿಸಿ: ಮೋದಿ ಮನವಿ
ಜನತಾ ಕರ್ಫ್ಯೂ ಅನಂತರ, ದೇಶದ ಹಲವಾರು ರಾಜ್ಯಗಳು ಲಾಕ್‌ಡೌನ್ ಘೋಷಣೆ ಮಾಡಿದರೂ ಜನ ಓಡಾಡಿದ್ದರ ಬಗ್ಗೆ ಪ್ರಧಾನಿ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ. “ನಮ್ಮಲ್ಲಿ ಅನೇಕರು ಲಾಕ್‌ಡೌನ್ ಅನ್ನು ಗಂಭೀರವಾಗಿ ಪರಿಗಣಿಸಿಲ್ಲ. ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ, ನಿಮ್ಮ ಕುಟುಂಬವನ್ನು ಕಾಪಾಡಿ, ಸರಕಾರದ ಆದೇಶಗಳನ್ನು ಗಂಭೀರವಾಗಿ ತೆಗೆದುಕೊಳ್ಳಿ’ ಎಂದು ಮೋದಿ ಟ್ವೀಟ್‌ನಲ್ಲಿ ಮನವಿ ಮಾಡಿದ್ದಾರೆ.
ಸುಪ್ರೀಂ ಭಾಗಶಃ ಬಂದ್
ಕೊರೊನಾ ಬಿಸಿ ಸುಪ್ರೀಂ ಕೋರ್ಟ್‌ಗೂ ತಟ್ಟಿದೆ. ಮಂಗಳವಾರದಿಂದ ಕೇವಲ ದ್ವಿಸದಸ್ಯ ಪೀಠ ಮಾತ್ರ ಅತ್ಯಂತ ತುರ್ತು ಅರ್ಜಿಗಳ ವಿಚಾರಣೆ ನಡೆಸಲಿದೆ. ಉಳಿದಂತೆ ಆವರಣದ ವಕೀಲರ ಕಚೇರಿಯನ್ನು ಅನಿರ್ದಿಷ್ಟಾವಧಿಗೆ ಮುಚ್ಚಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಅವಧಿಯಲ್ಲಿ ಯಾವುದೇ ಮೊಕದ್ದಮೆಯ ವೈಯಕ್ತಿಕ ಮತ್ತು ನೇರ ವಿಚಾರಣೆಯನ್ನು ಮಾಡುವುದಿಲ್ಲ ಎಂದು ಕೋರ್ಟ್ ಹೇಳಿದೆ.
ತಿಹಾರ್ ಜೈಲಿನಿಂದ 3 ಸಾವಿರ ಕೈದಿಗಳ ಬಿಡುಗಡೆ
ಕೋವಿಡ್-19 ಹಿನ್ನೆಲೆಯಲ್ಲಿ ಹೊಸದಿಲ್ಲಿಯ ತಿಹಾರ್ ಜೈಲಿನಲ್ಲಿರುವ 3,000 ಕೈದಿಗಳನ್ನು ಬಿಡುಗಡೆ ಮಾಡಲು ದಿಲ್ಲಿ ಸರಕಾರ ನಿರ್ಧರಿಸಿದೆ. ಜೈಲಿನಲ್ಲಿ ವೈರಸ್ ವ್ಯಾಪಕವಾಗಿ ಹರಡಬಾರದು ಎಂಬ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. 1,500 ಅಪರಾಧಿಗಳನ್ನು ಪೆರೋಲ್, ಜಾಮೀನಿನಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ವಿಚಾರಣಾಧೀನ ಕೈದಿಗಳನ್ನು ಮಧ್ಯಾಂತರ ಜಾಮೀನಿನಲ್ಲಿ ಬಿಡುಗಡೆ ಮಾಡಲಾಗುತ್ತದೆ.
14 ಲಕ್ಷ ಕೋಟಿ ರೂಪಾಯಿ ನಷ್ಟ
ಕೋವಿಡ್-19 ಭೀತಿಯಿಂದಾಗಿ ಜಗತ್ತಿನ ನಾನಾ ಷೇರು ಮಾರುಕಟ್ಟೆಗಳು ಕುಸಿತ ಕಂಡಿದ್ದು, ಇದರ ಪರಿಣಾಮ ಮುಂಬಯಿ ಷೇರುಪೇಟೆ ಮೇಲೂ ಉಂಟಾಗಿದೆ. ಸೋಮವಾರ ಒಂದೇ ದಿನ 4,000 ಅಂಕಗಳಷ್ಟು ಕುಸಿತವಾಗಿದ್ದು, ಹೂಡಿಕೆದಾರರ ಸುಮಾರು 14 ಲಕ್ಷ ಕೋಟಿ ರೂ. ನಷ್ಟವಾಯಿತು. ನಿಫ್ಟಿ ಸೂಚ್ಯಂಕದಲ್ಲೂ ಭಾರೀ ಕುಸಿತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
HMPV ಸೋಂಕಿಗೆ ಆತಂಕ ಬೇಡ: ಐಸಿಎಂಆರ್
Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.