ದೇಶದಲ್ಲಿ 277 ನಕಲಿ ಇಂಜಿನಿಯರಿಂಗ್ ಕಾಲೇಜು..ಕರ್ನಾಟಕದಲ್ಲಿ ಎಷ್ಟಿದೆ?
Team Udayavani, Jul 31, 2018, 6:27 PM IST
ನವದೆಹಲಿ: ಕರ್ನಾಟಕ ಸೇರಿದಂತೆ ದೇಶಾದ್ಯಂತ ಸುಮಾರು 277 ನಕಲಿ ಇಂಜಿನಿಯರಿಂಗ್ ಕಾಲೇಜುಗಳು ನಡೆಯುತ್ತಿದ್ದು, ಇದರಲ್ಲಿ ರಾಜಧಾನಿ ದೆಹಲಿಯೊಂದರಲ್ಲಿಯೇ 66 ಇಂತಹ ನಕಲಿ ಇಂಜಿನಿಯರಿಂಗ್ ಕಾಲೇಜು ಕಾರ್ಯ ನಿರ್ವಹಿಸುತ್ತಿರುವ ಅಂಶ ಬೆಳಕಿಗೆ ಬಂದಿದೆ!
ರಾಜ್ಯ ಮಾನವ ಸಂಪನ್ಮೂಲ ಅಭಿವೃದ್ಧಿ ಖಾತೆ ಸಚಿವ ಸತ್ಯಪಾಲ್ ಸಿಂಗ್ ಮಂಗಳವಾರ ಲೋಕಸಭೆಗೆ ನೀಡಿದ ಅಂಕಿ ಅಂಶದಲ್ಲಿ ಈ ವಿವರ ದಾಖಲಾಗಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ದೇಶದ ರಾಜಧಾನಿಯಲ್ಲಿ 66 ನಕಲಿ ಇಂಜಿನಿಯರಿಂಗ್ ಕಾಲೇಜು ಇದ್ದರೆ, ತೆಲಂಗಾಣದಲ್ಲಿ 35 ಹಾಗೂ ಪಶ್ಚಿಮ ಬಂಗಾಳದಲ್ಲಿ 27 ನಕಲಿ ಕಾಲೇಜುಗಳು ಇದ್ದಿರುವುದಾಗಿ ವಿವರಿಸಿದೆ.
ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ಕೂಡಾ ಸ್ಥಾನ ಪಡೆದುಕೊಂಡಿದ್ದು, ರಾಜ್ಯದಲ್ಲಿ 23 ನಕಲಿ ಇಂಜಿನಿಯರಿಂಗ್ ಕಾಲೇಜುಗಳಿವೆ. ಹೀಗೆಯೇ ಉತ್ತರಪ್ರದೇಶದಲ್ಲಿ 22, ಹರ್ಯಾಣದಲ್ಲಿ 18, ಮಹಾರಾಷ್ಟ್ರದಲ್ಲಿ 16 ಹಾಗೂ ತಮಿಳುನಾಡಿನಲ್ಲಿ 11 ನಕಲಿ ಕಾಲೇಜುಗಳು ಇವೆ ಎಂದು ತಿಳಿಸಿದೆ.
ಆಲ್ ಇಂಡಿಯಾ ಕೌನ್ಸಿಲ್ ಫಾರ್ ಟೆಕ್ನಿಲ್ ಎಜುಕೇಶನ್ (ಎಐಸಿಟಿಇ)ನ ಅನುಮತಿ ಇಲ್ಲದೆ ಈ ಇಂಜಿನಿಯರಿಂಗ್ ಕಾಲೇಜು ಕಾರ್ಯನಿರ್ವಹಿಸುತ್ತಿದೆ ಎಂದು ಲೋಕಸಭೆಗೆ ಸಿಂಗ್ ಅವರು ಲಿಖಿತ ಉತ್ತರ ನೀಡಿದ್ದಾರೆ. ಈ ನಕಲಿ ಕಾಲೇಜುಗಳು ಎಐಸಿಟಿಇಯ ಅನುಮತಿ ಪಡೆಯುವಂತೆ ನಿರ್ದೇಶನ ನೀಡಲಾಗಿದೆ. ಇಲ್ಲದಿದ್ದರೆ ಕಾಲೇಜನ್ನು ಮುಚ್ಚಲಾಗುವುದು ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.