Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ಸಂಜೆಯೊಳಗೆ ಪೂರ್ಣ ಪ್ರಮಾಣದ ಫಲಿತಾಂಶ ಹೊರಬೀಳಲಿದೆ

Team Udayavani, Jul 13, 2024, 3:56 PM IST

Bypoll: ಏಳು ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ; INDIA ಮೈತ್ರಿಕೂಟಕ್ಕೆ ಮೇಲುಗೈ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಪ್ರಬಲ ಪೈಪೋಟಿ ನೀಡಿದ್ದ INDIA ಮೈತ್ರಿಕೂಟ ಇದೀಗ ಏಳು ರಾಜ್ಯಗಳಲ್ಲಿನ 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಜಯಸಾಧಿಸಿದ್ದು, ಆರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವುದಾಗಿ ವರದಿ ತಿಳಿಸಿದೆ.

ಏಳು ರಾಜ್ಯಗಳಲ್ಲಿ ತೆರವಾಗಿದ್ದ 13 ವಿಧಾನಸಭಾ ಕ್ಷೇತ್ರಗಳಿಗೆ ಇತ್ತೀಚೆಗೆ ಚುನಾವಣೆ ನಡೆದಿತ್ತು. ಶನಿವಾರ (ಜುಲೈ13) ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ನಡೆಯುತ್ತಿದ್ದು, ಸಂಜೆಯೊಳಗೆ ಪೂರ್ಣ ಪ್ರಮಾಣದ ಫಲಿತಾಂಶ ಹೊರಬೀಳಲಿದೆ ಎಂದು ವರದಿ ವಿವರಿಸಿದೆ.

ಬುಧವಾರ ಪಂಜಾಬ್‌, ಹಿಮಾಚಲ್‌ ಪ್ರದೇಶ, ಉತ್ತರಾಖಂಡ್‌, ಪಶ್ಚಿಮಬಂಗಾಳ, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನಲ್ಲಿ ಉಪಚುನಾವಣೆ ನಡೆದಿದ್ದು, ಕಾಂಗ್ರೆಸ್‌, ತೃಣಮೂಲ ಕಾಂಗ್ರೆಸ್‌, ಆಪ್‌ ಮತ್ತು ದ್ರಾವಿಡ ಮುನ್ನೇತ್ರಾ ಕಳಗಂ(DMK) ಮೈತ್ರಿಕೂಟ ಇಂಡಿಯಾ ಒಕ್ಕೂಟ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್‌ ಪಶ್ಚಿಲಬಂಗಾಳದ ಉಪಚುನಾವಣೆಯಲ್ಲಿ ಎಲ್ಲಾ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಹಿಮಾಚಲ್‌ ಪ್ರದೇಶದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಎರಡು ಸ್ಥಾನಗಳಲ್ಲಿ ಜಯಗಳಿಸಿದೆ. ಹಿಮಾಚಲದಲ್ಲಿ ಮುಖ್ಯಮಂತ್ರಿ ಸುಖ್ವಿಂದರ್‌ ಸುಕು ಅವರ ಪತ್ನಿ ಕಮಲೇಶ್‌ ಠಾಕೂರ್‌ ದೇಹ್ರಾ ಕ್ಷೇತ್ರದಲ್ಲಿ ಗೆಲುವಿನ ನಗು ಬೀರಿದ್ದಾರೆ.

ಆಮ್‌ ಆದ್ಮಿ ಪಕ್ಷ ಪಂಜಾಬ್‌ ನ ಜಲಂಧರ್‌ ಕ್ಷೇತ್ರದಲ್ಲಿ ವಿಜಯ ಸಾಧಿಸಿದೆ. ಪಂಜಾಬ್‌ ನ ಜಲಂಧರ್‌ ಕ್ಷೇತ್ರದಲ್ಲಿ ಆಮ್‌ ಆದ್ಮಿ ಪಕ್ಷದ ಮೋಹಿಂದರ್‌ ಭಗತ್‌ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಪಕ್ಷದ ಸುರೀಂದರ್‌ ಕೌರ್‌ ಅವರನ್ನು 35,325 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಹಿಮಾಚಲ್‌ ಪ್ರದೇಶದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಕಂಡಿದೆ. ಉಪಚುನಾವಣೆಯಲ್ಲಿನ ಎಲ್ಲಾ ಮೂರು ಕ್ಷೇತ್ರಗಳಲ್ಲೂ ಗೆಲುವು ಸಾಧಿಸಿದೆ. ಸಿಎಂ ಸುಖ್ವಿಂದರ್‌ ಸುಖು ಪತ್ನಿ ಕಮ್ಲೇಶ್‌ ಠಾಕೂರ್‌ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಹೋಶಿಯಾರ್‌ ಸಿಂಗ್‌ ಅವರನ್ನು 9,399 ಮತಗಳ ಅಂತರದಿಂದ ಪರಾಜಯಗೊಳಿಸಿದ್ದಾರೆ.

ತಮಿಳುನಾಡಿನಲ್ಲಿ ಡಿಎಂಕೆ ಅಣ್ಣಿಯೂರ್‌ ಶಿವ ವಿಕ್ರಾವಂಡಿ ವಿಧಾನಸಭಾ ಕ್ಷೇತ್ರದಲ್ಲಿ 59 ಸಾವಿರ ಮತಗಳ ಮುನ್ನಡೆಯಲ್ಲಿದ್ದಾರೆ. ಉತ್ತರಾಖಂಡ್‌ ನ ಬದರಿನಾಥ್‌ ಮತ್ತು ಮಂಗ್ಲೌರ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಮುನ್ನಡೆಯಲ್ಲಿದ್ದಾರೆ. ಬಿಹಾರದಲ್ಲಿ ರುಪಾಲಿ ಕ್ಷೇತ್ರದಲ್ಲಿ ಜೆಡಿಯುನ ಕಲಾಧರ್‌ ಪ್ರಸಾದ್‌ ಮಂಡಲ್‌ ಮುನ್ನಡೆಯಲ್ಲಿದ್ದಾರೆ.

ಟಾಪ್ ನ್ಯೂಸ್

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-wqeqwewqe

J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!

1-modi-BG

Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ

1-shah

J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

ಗಂಟಲಲ್ಲಿ ಇಡ್ಲಿ ಸಿಲುಕಿ ವ್ಯಕ್ತಿ ಮೃತ್ಯು… ಜೀವಕ್ಕೆ ಮುಳುವಾದ ಇಡ್ಲಿ ತಿನ್ನುವ ಸ್ಪರ್ಧೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.