ಭಾರತ – ಜಪಾನ್ ಜಂಟಿ ಸಮರಾಭ್ಯಾಸ: ಪಾಕ್‌ಗೆ ಸಡ್ಡು
Team Udayavani, Oct 30, 2017, 11:30 AM IST
ಹೊಸದಿಲ್ಲಿ: ಭಾರತದ ವಿರುದ್ಧ ಚೀನ ಮತ್ತು ಪಾಕಿಸ್ಥಾನ ಪದೇ ಪದೆ ಕ್ಯಾತೆ ತೆಗೆಯುತ್ತಿರುವ ನಡುವೆಯೇ ಭಾರತ-ಜಪಾನ್ ಜಂಟಿ ಸಮರಾಭ್ಯಾಸ ಆರಂಭವಾಗಿದೆ. ಇತ್ತೀಚೆಗೆ ಜಪಾನ್ ಪ್ರಧಾನಿ ಬುಲೆಟ್ ಟ್ರೈನ್ ಯೋಜನೆಗೆ ಶಿಲಾನ್ಯಾಸ ನೆರವೇರಿಸಲು ಬಂದಿದ್ದ ವೇಳೆ ಎರಡೂ ದೇಶಗಳ ನಡುವೆ ರಕ್ಷಣಾ ಬಾಂಧವ್ಯ ವೃದ್ಧಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದಕ್ಕೆ ಪೂರಕವಾಗಿ ಜಪಾನ್‌ನ ಪಿ-3ಸಿ ಓರಿಯನ್ ವಿಮಾನಗಳು ಮತ್ತು ಭಾರತೀಯ ನೌಕಾಪಡೆಯ ಪಿ-18 ಐ ಹಡಗುಗಳು ಮೂರು ದಿನಗಳ ಸಮರಾಭ್ಯಾಸವನ್ನು ಭಾನುವಾರದಿಂದ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಆರಂಭಿಸಿವೆ.
ಶಾಂತಿಸಾಗರದ ಪ್ರದೇಶದಲ್ಲಿ ಚೀನ ತನ್ನ ಪ್ರಾಬಲ್ಯ ಹೆಚ್ಚಿಸಿಕೊಳ್ಳುತ್ತಿರುವ ಬೆನ್ನಲ್ಲೇ ಈ ಸಮರಾಭ್ಯಾಸ ನಡೆಯುತ್ತಿರುವುದು ಮಹತ್ವ ಪಡೆದಿದೆ. ಪಾಕಿಸ್ಥಾನ ನೌಕಾಪಡೆ ದಶಕಗಳಿಂದ ಬಳಕೆ ಮಾಡುತ್ತಿರುವ ಪಿ-3 ವಿಮಾನದ ಬಳಕೆಯನ್ನು ಪರೀಕ್ಷಿಸಿಕೊಳ್ಳುವ ನಿಟ್ಟಿನಲ್ಲೂ ಇದು ಮಹತ್ವದ್ದಾಗಿದೆ. ಅದಕ್ಕೆ ಪೂರಕವಾಗಿ ಭಾರತ, ಅಮೆರಿಕ ಮತ್ತು ಜಪಾನ್ ತ್ರಿಪಕ್ಷೀಯವಾಗಿ ಸಮರಾಭ್ಯಾಸ ನಡೆಸುತ್ತಿರುವುದು ಕೂಡ ದಕ್ಷಿಣ ಏಷ್ಯಾ ಪ್ರದೇಶದಲ್ಲಿ ಪ್ರಬಲ ಮೈತ್ರಿಕೂಟ ಸ್ಥಾಪಿಸುವ ನಿಟ್ಟಿನಲ್ಲಿಯೇ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ
NSE, BSE; ಷೇರು ಮಾರುಕಟ್ಟೆಗೆ ನವೆಂಬರ್ 20 ರಂದು ರಜೆ ಘೋಷಣೆ
Proposes: ಪುರುಷ ಟೈಲರ್ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.