NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
Team Udayavani, Nov 17, 2024, 11:55 PM IST
ಹೊಸದಿಲ್ಲಿ: ಭಾರತದಲ್ಲಿ ಡ್ರಗ್ಸ್ ಕಳ್ಳಸಾಗಣೆಗೆ ಕಡಿವಾಣಹಾಕಲು ಮುಂದಾಗಿರುವ ಮೋದಿ ಸರಕಾರ ಈ ಮಾಫಿಯಾದ ಹಿಂದಿರುವ ಪಾಕ್ ಮೂಲದ ಡ್ರಗ್ಸ್ ದೊರೆ ಹಾಜಿ ಸಲೀಂ ದೇಶದಲ್ಲಿ ಹೊಂದಿರುವ ನೆಟ್ವರ್ಕ್ ಅನ್ನು ಚಿವುಟಿಹಾಕಲು ಪಣತೊಟ್ಟಿದೆ. ಈ ನಿಟ್ಟಿನಲ್ಲಿ “ಆಪರೇಷನ್ ಸಾಗರ ಮಂಥನ’ ಎಂಬ ಬಹುದೊಡ್ಡ ಕಾರ್ಯಾಚರಣೆಯನ್ನೂ ಆರಂಭಿಸಿದೆ.
ಒಂದು ತಿಂಗಳಲ್ಲಿ ಗುಜರಾತ್ನ ಕರಾ ವಳಿ ಭಾಗದಲ್ಲೇ ಸಾವಿರಾರು ಕೋಟಿ ರೂ ಮೌಲ್ಯದ ಮಾದಕವಸ್ತುವನ್ನು ಎನ್ಸಿಬಿ ವಶಪಡಿಸಿಕೊಂಡಿತ್ತು. ಇದು ಮಾತ್ರವಲ್ಲದೇ, ಸಾಗರ ಮಾರ್ಗದ ಮೂಲಕ ಭಾರತಕ್ಕೆ ಬರುತ್ತಿ ರುವ ಡ್ರಗ್ಸ್ ಕಳ್ಳಸಾಗಣೆಯ ಬೆನ್ನಟ್ಟಿದಾಗ ಅದರ ಮೂಲ “ಹಾಜಿ ಸಲೀಂ’ ಎಂಬ ಶಂಕೆಯೂ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಆತನ ಜಾಲವನ್ನೇ ಕತ್ತರಿಸಲು ಗೃಹ ಸಚಿವ ಅಮಿತ್ ಶಾ ಆದೇಶಿಸಿದ್ದು, ಅದಕ್ಕಾಗಿ ಎನ್ಸಿಬಿ ಸಾಗರ ಮಂಥನ ಕಾರ್ಯಾಚರಣೆಗೆ ಇಳಿದಿದೆ ಎನ್ನಲಾಗಿದೆ. ಈಗಾಗಲೇ 4000 ಕೆಜಿ ಡ್ರಗ್ಸ್ ವಶದ ಜತೆಗೆ ಹಲವು ಪಾಕಿಸ್ಥಾನಿಯರನ್ನೂ ಬಂಧಿಸಲಾಗಿದೆ ಎಂದು ಎನ್ಸಿಬಿ ಅಧಿಕಾರಿ ಹೇಳಿದ್ದಾರೆ. ಡ್ರಗ್ಸ್ ದೊರೆ ಹಾಜಿ ಸಲೀಂ ಪಾತಕಿ ದಾವೂದ್ ಇಬ್ರಾಹಿಂನ ನೆರೆಹೊರೆಯವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು
Kundapura: ಕಾರು ಢಿಕ್ಕಿ; ಸ್ಕೂಟರ್ ಸವಾರನಿಗೆ ಗಾಯ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.