Covid: ದೇಶದಲ್ಲಿ 10 ಸಾವಿರ ಗಡಿದಾಟಿದ ಸೋಂಕು; ಏಕಾಏಕಿ ಕೋವಿಡ್ ಹೆಚ್ಚಳ
Team Udayavani, Apr 13, 2023, 9:53 AM IST
ನವದೆಹಲಿ: ದೇಶದಲ್ಲಿ ಗುರುವಾರ ಕೋವಿಡ್ ಪ್ರಕರಣ 10 ಸಾವಿರ ಗಡಿ ದಾಟಿದ್ದು, ಮತ್ತೆ ಕೋವಿಡ್ ಆತಂಕ ಎದುರಾಗಿದೆ.
ಕಳೆದ 24 ಗಂಟೆಯಲ್ಲಿ 10,158 ಜನರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ. ದೈನಂದಿನ ಪಾಸಿಟಿವ್ ದರ 4.42% ರಷ್ಟಿದೆ. ಇದು ಕಳೆದ 7 ತಿಂಗಳಿನಲ್ಲಿ ಕಂಡು ಬಂದ ಅತ್ಯಧಿಕ ಸೋಂಕುಗಳ ಸಂಖ್ಯೆ ಎನ್ನುವುದು ಭೀತಿಯ ಹುಟ್ಟಿಸುವ ಅಂಶವಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ಸಕ್ರಿಯ ಪ್ರಕರಣಗಳ ಸಂಖ್ಯೆ 44,998 ಕ್ಕೆ ಏರಿಕೆಯಾಗಿದೆ. ಬುಧವಾರ 7,830 ಪ್ರಕರಣಗಳು ಪತ್ತೆಯಾಗಿತ್ತು. ಒಟ್ಟು 16 ಮಂದಿ ಮೃತಪಟ್ಟಿದ್ದರು.
ಇಲ್ಲಿಯವರೆಗೆ ಒಟ್ಟು 92.34 ಕೋಟಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ಕಳೆದ 24 ಗಂಟೆಗಳಲ್ಲಿ 2,29,958 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಡೇಟಾ ತಿಳಿಸಿದೆ.
ಭಾರತದಲ್ಲಿ ಮುಂದಿನ 10-12 ದಿನಗಳವರೆಗೆ ಪ್ರಕರಣಗಳು ಹೆಚ್ಚಾಗುತ್ತವೆ, ನಂತರ ಸೋಂಕುಗಳು ಕಡಿಮೆಯಾಗುತ್ತವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಓಮಿಕ್ರಾನ್ ನ XBB.1.16 ಸಬ್‌ವೇರಿಯಂಟ್ ಬಗ್ಗೆ ಹೆಚ್ಚಾಗಿ ಆತಂಕ ಪಡಬೇಕಿಲ್ಲ. ಲಸಿಕೆಗಳು ಅದರ ವಿರುದ್ಧ ಪರಿಣಾಮಕಾರಿಯಾಗಿವೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
Jharkhand Polls: ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ… ಸೋರೆನ್ ಸರ್ಕಾರದ ವಿರುದ್ಧ ಕಿಡಿ
Tragedy: ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದು ನಾಲ್ವರು ಪೌರ ಕಾರ್ಮಿಕರ ದುರಂತ ಅಂತ್ಯ
MUST WATCH
ಹೊಸ ಸೇರ್ಪಡೆ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!
BBK11: ಬಿಗ್‌ಬಾಸ್ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.