ಕೋವಿಡ್ ಸೋಂಕಿನಲ್ಲಿ ಮತ್ತೆ ಏರಿಕೆ : ಕಳೆದ 24 ಗಂಟೆಯಲ್ಲಿ 39,070 ಹೊಸ ಕೋವಿಡ್ ಸೋಂಕು ಪತ್ತೆ
Team Udayavani, Aug 8, 2021, 11:07 AM IST
ನವ ದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 39,070 ಕೋವಿಡ್ 19 ಪ್ರಕರಣಗಳು ವರದಿಯಾಗಿದ್ದು, 491 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಆದಿತ್ಯವಾರ (ಆಗಸ್ಟ್, 08) ಬಿಡುಗಡೆಗೊಳಿಸಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿನ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 4,06,822ಕ್ಕೆ ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 491 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದು, ಇದರೊಂದಿಗೆ ದೇಶದಲ್ಲಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,27, 862 ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ : ಸರ್ಕಾರಿ ಕಾರ್ಯಕ್ರಮ ನಿರೂಪಕರು, ಗಾಯಕರ ಬದಲಾವಣೆಗೆ ಒತ್ತಾಯಿಸಿ ಸಿಎಂ ಮನೆ ಮುಂದೆ ಪ್ರತಿಭಟನೆ
ಕಳೆದ 24 ಗಂಟೆಯಲ್ಲಿ 40,017 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶಾದ್ಯಂತ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 3,19,34,455, ಕ್ಕೆ ಏರಿಕೆಯಾಗಿದೆ.
ಕಳೆದ 42 ದಿನಗಳಲ್ಲಿ 50,000ಕ್ಕಿಂತ ಕಡಿಮೆ ಪ್ರಮಾಣದ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದ್ದು, ವಾರದ ಪಾಸಿಟಿವಿಟಿ ದರ 2.39ರಷ್ಟಿದ್ದು, ದಿನದ ಪಾಸಿಟಿವಿಟಿ ದರ ಶೇ.2.27ರಷ್ಟಿದೆ ಎಂದು ವರದಿ ತಿಳಿಸಿದೆ.
ಇನ್ನು, ಭಾರತದಲ್ಲಿ ಕೋವಿಡ್ -19 ಲಸಿಕೆ ಅಭಿಯಾನದಲ್ಲಿ ಒಟ್ಟು 50.68 ಕೋಟಿ ಮೀರಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 55,91,657 ಲಸಿಕೆ ಡೋಸ್ ಗಳನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇದನ್ನೂ ಓದಿ : ಬಿಗ್ ಬಾಸ್ : ಪ್ರಶಾಂತ್ ಸಂಬರಗಿ- ವೈಷ್ಣವಿ ಗೌಡ ಔಟ್ : ಇರುವ ಮೂವರಲ್ಲಿ ಗೆಲ್ಲೋರ್ಯಾರು..?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.