ಧೂಳಿನ ಬಿರುಗಾಳಿಗೆ 109 ಮಂದಿ ಸಾವು
Team Udayavani, May 4, 2018, 5:40 AM IST
ಹೊಸದಿಲ್ಲಿ: ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳ ಹಲವು ಭಾಗಗಳಲ್ಲಿ ಬುಧವಾರ ಸಂಜೆಯಿಂದ ಬೀಸಿದ ಧೂಳುಮಿಶ್ರಿತ ಬಿರುಗಾಳಿಯಲ್ಲಿ ಕನಿಷ್ಠ 109 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಿರುಗಾಳಿಯ ತೀವ್ರತೆಗೆ ಎರಡೂ ರಾಜ್ಯಗಳಲ್ಲಿ ಮನೆ, ಕಟ್ಟಡಗಳು ಕುಸಿದು ಬಿದ್ದಿದ್ದು, ನೂರಾರು ಮರಗಳು ಧರೆಗುರುಳಿವೆ. ವಿದ್ಯುತ್, ದೂರವಾಣಿ ಕಂಬಗಳು ಮುರಿದು ಬಿದ್ದಿವೆ. ಇದರಿಂದ ಪಂಜಾಬ್, ಹರಿಯಾಣ, ಮಧ್ಯಪ್ರದೇಶಗಳ ಕೆಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಗೆ ತೊಂದರೆಯಾಗಿದೆ.
ಉತ್ತರ ಪ್ರದೇಶದ ಪಶ್ಚಿಮ ಭಾಗದಲ್ಲಿ ಬುಧವಾರ ಸಂಜೆ 6.30ರ ಬಳಿಕ ಬಿರುಗಾಳಿ ಬೀಸಲಾರಂಭಿಸಿತು. ಆರಂಭದಲ್ಲಿ ಅದು ಅಷ್ಟೊಂದು ತೀವ್ರವಾಗಿರಲಿಲ್ಲ. ಸಮಯ ಕಳೆದಂತೆ ಅದು ಬಿರುಸಾಗತೊಡಗಿತು. ಗಾಳಿಯ ಜತೆಗೆ ಕೆಲವು ಸ್ಥಳಗಳಲ್ಲಿ ಗುಡುಗು ಸಿಡಿಲಿನಿಂದ ಕೂಡಿ ಧಾರಾಕಾರ ಮಳೆಯೂ ಸುರಿದಿದೆ. ಇದರ ಜತೆಗೆ ಆಲಿಕಲ್ಲು ಮಳೆಯೂ ಆಗಿದೆ. ಹೀಗಾಗಿ 10 ಜಿಲ್ಲೆಗಳಲ್ಲಿ ಒಟ್ಟು 64 ಮಂದಿ ಅಸುನೀಗಿದ್ದರೆ, 47 ಮಂದಿ ಗಾಯಗೊಂಡಿದ್ದಾರೆ. ಆಗ್ರಾ ಜಿಲ್ಲೆಯಲ್ಲಿಯೇ ಅತ್ಯಂತ ಹೆಚ್ಚು ಅಂದರೆ 36 ಮಂದಿ ಅಸುನೀಗಿ, 35 ಮಂದಿ ಗಾಯಗೊಂಡಿದ್ದಾರೆ. ಇದರ ಜತೆಗೆ ಇತರ 9 ಜಿಲ್ಲೆಗಳಲ್ಲಿ ಕೂಡ ಗಮನಾರ್ಹ ಹಾನಿ ಉಂಟಾಗಿದೆ. ಕರ್ನಾಟಕ ಚುನಾವಣ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮುಖ್ಯ ಕಾರ್ಯದರ್ಶಿ ಜತೆ ಮಾತನಾಡಿ ಮಾಹಿತಿ ಪಡೆದುಕೊಂಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲಿ ಕೂಡ ಬಿರುಗಾಳಿ ಆರ್ಭಟಿಸಿದೆ. ಮನೆಗಳ ಛಾವಣಿ ಹಾರಿಹೋಗಿವೆ. ಹಲವು ಮನೆಗಳು ಕುಸಿದು ಬಿದ್ದಿವೆ.
ರಾಜಸ್ಥಾನ 33 ಮಂದಿ ಸಾವು
ರಾಜಸ್ಥಾನದ ಮೂರು ಜಿಲ್ಲೆಗಳಲ್ಲಿ ಬೀಸಿದ ಗಾಳಿಯಿಂದಾಗಿ 33 ಮಂದಿ ಅಸುನೀಗಿ, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಧೋಲ್ಪುರ, ಭರತ್‌ಪುರ, ಅಲ್ವಾರ್ ಹಾನಿಗೀಡಾದ ಜಿಲ್ಲೆಗಳು. ಮುಖ್ಯಮಂತ್ರಿ ವಸುಂಧರಾ ರಾಜೆ ಟ್ವೀಟ್ ಮಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಚುರುಕುಗೊಳಿಸಲು ಸೂಚನೆ ನೀಡಿದ್ದಾರೆ. ಭರತ್‌ಪುರದಲ್ಲಿ 12 ಮಂದಿ ಸಾವಿಗೀಡಾಗಿದ್ದಾರೆ.
ಮತ್ತೂಂದು ಬಿರುಗಾಳಿ?
ಭಾರತೀಯ ಹವಾಮಾನ ಇಲಾಖೆ ಗುರುವಾರ ಹೊರಡಿಸಿರುವ ಮತ್ತೂಂದು ಎಚ್ಚರಿಕೆಯ ಪ್ರಕಾರ, ಮುಂದಿನ 48 ಗಂಟೆಗಳ ಒಳಗಾಗಿ ಉತ್ತರ ಪ್ರದೇಶ, ರಾಜಸ್ಥಾನಗಳಲ್ಲಿ ಮತ್ತೂಂದು ಧೂಳಿನ ಬಿರುಗಾಳಿ ಬೀಸಲಿದೆ. ಉ.ಪ್ರ., ರಾಜಸ್ಥಾನದ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಪ್ರಧಾನಿ ಸಂತಾಪ
ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಧೂಳಿನ ಬಿರುಗಾಳಿಯಿಂದ 109 ಮಂದಿ ಅಸುನೀಗಿದ ಬಗ್ಗೆ ಪ್ರಧಾನಿ ಮೋದಿ ಶೋಕ ವ್ಯಕ್ತಪಡಿಸಿದ್ದಾರೆ. ದೇಶದ ಹಲವು ಭಾಗಗಳಲ್ಲಿ ಧೂಳಿನ ಬಿರುಗಾಳಿಯಿಂದ ಸಾವು ನೋಟು ಉಂಟಾದ ಬಗ್ಗೆ ದುಃಖವಿದೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ. ಅಗಲಿದ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ.
ಕಾರಣವೇನು?
– ಅತ್ಯಂತ ಹೆಚ್ಚಿನ ಪ್ರಮಾಣದ ತಾಪಮಾನ ಹಾಗೂ ಪಶ್ಚಿಮ ಭಾಗದಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದ ಉಂಟಾದ ಬಿರುಗಾಳಿ, ತೇವಾಂಶ ಧೂಳಿನ ಬಿರುಗಾಳಿಗೆ ಕಾರಣವಾಗಿದೆ ಎನ್ನುತ್ತಾರೆ ಭಾರತೀಯ ಹವಾಮಾನ ಇಲಾಖೆಯ ಹಿರಿಯ ಅಧಿಕಾರಿ ಕುಲದೀಪ್ ಶ್ರೀವಾಸ್ತವ
– ರಾಜಸ್ಥಾನದ ಕೆಲ ಭಾಗಗಳಲ್ಲಿನ ಗರಿಷ್ಠ ಉಷ್ಣತೆ 45 ಡಿಗ್ರಿ ಸೆಲ್ಷಿಯಸ್ ವರೆಗೆ ತಲುಪಿತ್ತು. ಹೀಗಾಗಿ ಅಲ್ಲಿನ ಉತ್ತರ ಭಾಗದಲ್ಲಿ ಒಂದು ರೀತಿಯ ಒತ್ತಡದ ವಾತಾವರಣ ಕಂಡುಬಂದಿತ್ತು.
– ಹೆಚ್ಚಿನ ಪ್ರಮಾಣದ ತಾಪಮಾನ ತೇವಾಂಶ ಹೆಚ್ಚಾಗುವಂತೆ ಮಾಡುತ್ತದೆ. ಇದರ ಜತೆಗೆ ಮೋಡಗಳಿಂದಾಗಿ ಧಾರಾಕಾರ ಮಳೆ ಮತ್ತು ಬಿರುಗಾಳಿ ಉಂಟಾಗುತ್ತವೆ.
– ಏಕಾಏಕಿ ಈ ರೀತಿ ಉಂಟಾಗುತ್ತದೆ ಎನ್ನುತ್ತಾರೆ ಸ್ಕೈಮೆಟ್ ಹವಾಮಾನ ಸಂಸ್ಥೆಯ ಮುಖ್ಯ ಹವಾಮಾನ ತಜ್ಞ ಮಹೇಶ್ ಪಲಾವಟ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.