ವಿಶ್ವ ಹಸಿವು ಸೂಚ್ಯಂಕ: ಪಾಕ್, ಬಾಂಗ್ಲಾಕ್ಕಿಂತಲೂ ಕೆಳಗಿನ ಸ್ಥಾನಕ್ಕೆ ಕುಸಿದ ಭಾರತ
Team Udayavani, Oct 16, 2019, 2:23 PM IST
ಹೊಸದಿಲ್ಲಿ: 2019ರ ಜಾಗತಿಕ ಹಸಿವಿನ ಸೂಚ್ಯಂಕ ಪ್ರಕಟವಾಗಿದ್ದು, ಅತಿಹೆಚ್ಚು ಹಸಿವಿನಿಂದ ಬಳಲುತ್ತಿರುವ 45 ದೇಶಗಳ ಪೈಕಿ ಭಾರತವೂ ಒಂದು ಎಂದು ಸಮೀಕ್ಷೆಯ ವರದಿ ತಿಳಿಸಿದೆ.
ಜರ್ಮನಿಯ ಸ್ವಯಂಸೇವಾ ಸಂಸ್ಥೆ “ವೆಲ್ ತ್ಹಂಗರ್ ಲೈಫ್’ ಮತ್ತು ಐರ್ಲೆಂಡ್‌ನ “ಕನ್ಸರ್ನ್ ವರ್ಲ್ಡ್ ವೈಡ್ ಜಂಟಿಯಾಗಿ ಸಮೀಕ್ಷೆಯನ್ನು ನಡೆಸಿದ್ದು, ಒಟ್ಟು 117 ರಾಷ್ಟ್ರಗಳನ್ನು ಸಮೀಕ್ಷೆಗೆ ಒಳಪಡಿಸಿದೆ.
ಸಮೀಕ್ಷೆಯ ಏನೆಲ್ಲಾ ಪ್ರಮುಖ ವಿಷಯಗಳನ್ನು ಒಳಗೊಂಡಿದೆ ಎಂಬುದರ ಮಾಹಿತಿ ಇಲ್ಲಿದೆ.
ಕನಿಷ್ಠ ಸೂಚ್ಯಂಕ ದಾಖಲೆ
ಸಮೀಕ್ಷೆಯಲ್ಲಿ ಒಟ್ಟು 117 ದೇಶಗಳ ಪಾಲ್ಗೊಂಡಿದ್ದು, 102ನೇ ಸ್ಥಾನಕ್ಕೆ ಕುಸಿದಿರುವ ಭಾರತ ದಕ್ಷಿಣ ಏಷ್ಯಾ ಮತ್ತು ಬ್ರಿಕ್ಸ್ ದೇಶಗಳ ಪೈಕಿ ಕನಿಷ್ಠ ಸೂಚ್ಯಂಕ ಪಡೆದು ಕೊಂಡಿದೆ.
ಅಪೌಷ್ಠಿಕತೆಯ ಸಮಸ್ಯೆಯ ಸುಳಿಯಲ್ಲಿರುವ ದೇಶಗಳಿಗಿಂತ ಹಿಂದುಳಿದಿದೆ.
ಜಾಗತಿಕ ಹಸಿವು ಸೂಚ್ಯಂಕದಲ್ಲಿ 102ನೇ ಸ್ಥಾನ ಪಡೆದುಕೊಂಡಿರುವ ಭಾರತ ಗಂಭೀರ ಹಸಿವಿನ ಸಮಸ್ಯೆ ಮತ್ತು ಅಪೌಷ್ಠಿಕತೆಯ ಸಮಸ್ಯೆಯ ಸುಳಿಯಲ್ಲಿರುವ ದೇಶಗಳಾದ ಚೀನಾ, ಬಾಂಗ್ಲಾ, ನೇಪಾಳ ಮತ್ತು ಶ್ರೀಲಂಕಾ ದೇಶಗಳಿಗಿಂತ ಹಿಂದುಳಿದಿದೆ.
ಪಾಕಿಸ್ತಾನಕ್ಕೆ 98ನೇ ಸ್ಥಾನ
ಜಾಗತಿಕ ಹಸಿವು ಸೂಚ್ಯಂಕದಲ್ಲಿ ಪಾಕಿಸ್ತಾನಕ್ಕೆ 98ನೇ ಸ್ಥಾನ ಲಭಿಸಿದ್ದು, ಭಾರತ ಪಾಕಿಸ್ತಾನದ ಎದುರು ಸ್ಥಾನ 4 ಸ್ಥಾನಗಳ ಕುಸಿತ ಕಂಡಿದೆ.
822 ದಶಲಕ್ಷ
ವಿಶ್ವಾದ್ಯಂತ, ಅಪೌಷ್ಟಿಕತೆಯಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದ್ದು, 785 ದಶಲಕ್ಷದಿಂದ 822 ದಶಲಕ್ಷಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Jagdeep Dhankhar; ರಾಜ್ಯಸಭಾ ಸಭಾಪತಿ ವಿರುದ್ದದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕೃತ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.