ಹೆಸರು ಇರಿಸಿ ಅರುಣಾಚಲ ತನ್ನದೆನ್ನಲು ಸಾಧ್ಯವಿಲ್ಲ: ಚೀನಾ ಕ್ರಮಕ್ಕೆ ಕೇಂದ್ರ ಸರ್ಕಾರ ಆಕ್ರೋಶ
ಚೀನಾ ಕ್ರಮಕ್ಕೆ ಕೇಂದ್ರ ಸರ್ಕಾರ ಆಕ್ರೋಶ
Team Udayavani, Apr 3, 2024, 6:21 AM IST
ನವದೆಹಲಿ: ಅರುಣಾಚಲ ಪ್ರದೇಶದ ಕೆಲವು ಭಾಗಗಳಿಗೆ ಚೀನೀ ಹೆಸರುಗಳ ಪಟ್ಟಿ ಬಿಡುಗಡೆ ಮಾಡಿದ ಚೀನಾ ಕ್ರಮವನ್ನು ಕೇಂದ್ರ ಸರ್ಕಾರ ಖಂಡಿಸಿದೆ. ಜತೆಗೆ ಆ ಕ್ರಮ “ವಿವೇಚನೆಯಿಲ್ಲದ ಯತ್ನ’ ಎಂದು ದೂರಿದೆ.
ಈ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ಇಂಥ ಕ್ರಮದಿಂದ ಅರುಣಾಚಲ ಪ್ರದೇಶವನ್ನು ತನ್ನದಾಗಿಸಿಕೊಳ್ಳಲು ಚೀನಾಕ್ಕೆ ಸಾಧ್ಯವಿಲ್ಲ. ಅರುಣಾಚಲ ಪ್ರದೇಶವು ಈ ಹಿಂದೆಯೂ, ಇಂದೂ, ಮುಂದೆಯೂ ಭಾರತದ ಅವಿಭಾಜ್ಯ ಅಂಗವಾಗಿದೆ. ಚೀನಾದ ಇಂಥ ವ್ಯರ್ಥ ಪ್ರಯತ್ನಗಳಿಂದ ಈ ಸತ್ಯವನ್ನು ಮರೆಮಾಚಲು ಸಾಧ್ಯವಿಲ್ಲ’ ಎಂದು ಹೇಳಿದ್ದಾರೆ.
“ಅರುಣಾಚಲ ಪ್ರದೇಶದ ಸ್ಥಳಗಳ ಹೆಸರುಗಳನ್ನು ಬದಲಾಯಿಸಿದ ತಕ್ಷಣ ಅದು ಚೀನಾದಾಗುವುದಿಲ್ಲ. ಈ ರೀತಿಯ ಕ್ರಮಗಳನ್ನು ಭಾರತ ಖಂಡಿಸುತ್ತದೆ’ ಎಂದು ಹೇಳಿದ್ದಾರೆ.
ಶೀಘ್ರ ಶಾಶ್ವತ ಸ್ಥಾನ: “ಬೇರೆಯವರ ಮನೆಯ ಹೆಸರನ್ನು ನಾನು ಬದಲಿಸಿದ ತಕ್ಷಣ, ಆ ಮನೆಯು ನನ್ನದಾಗಲು ಸಾಧ್ಯವೆ?. ಇದು ಕೂಡ ಹಾಗೆಯೇ. ಅರಣಾಚಲ ಪ್ರದೇಶ ಯಾವಾಗಲೂ ಭಾರತದ ಭಾಗವಾಗಿಯೇ ಉಳಿಯಲಿದೆ. ಚೀನಾದ ಈ ರೀತಿಯ ಕ್ರಮಗಳಿಂದ ಯಾವುದೇ ಪರಿಣಾಮ ಬೀರುವುದಿಲ್ಲ’ ಎಂದು ವಿದೇಶಾಂಗ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.
ಇದೇ ವೇಳೆ ಅವರು, “ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‌ಎಸ್‌ಸಿ) ಭಾರತಕ್ಕೆ ಶಾಶ್ವತ ಸ್ಥಾನ ಸಿಗಲಿದೆ ಎಂಬ ಆಶಾವಾದ ನಮಗಿದೆ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳನ್ನು ನಾವು ತೀವ್ರವಾಗಿ ಮುಂದುವರಿಸಬೇಕಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್ ದಾಖಲು
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.