ಐದು ದಿನಗಳ ನಂತರ ಕೋವಿಡ್ ಸೋಂಕಿನ ಪ್ರಮಾಣ ಕೊಂಚ ಇಳಿಕೆ..!
ಕಳೆದ 24 ಗಂಟೆಯಲ್ಲಿ 40,134 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆ
Team Udayavani, Aug 2, 2021, 11:13 AM IST
ಪ್ರಾತಿನಿಧಿಕ ಚಿತ್ರ
ನವ ದೆಹಲಿ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 40 ಸಾವಿರಕ್ಕಿಂತ ಅಧಿಕ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ (ಆಗಷ್ಟ್ 02) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ ಹೊಸ ಸೋಂಕಿನ ಪ್ರಮಾಣ ಹಾಗೂ ಸಾವಿನ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಒಟ್ಟು 40,134 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿವೆ. ಕಳೆದ ಐದು ದಿನಗಳಲ್ಲಿ ಇದ್ದ ಸೋಂಕಿನ ಏರಿಕೆಗೆ ಸ್ವಲ್ಪ ಬ್ರೇಕ್ ಬಿದ್ದಿದೆ.
ಇದನ್ನೂ ಓದಿ : ಮತ್ತೆ ವಾರಾಂತ್ಯ ಕರ್ಫ್ಯೂ?ಸೋಂಕು ಹೆಚ್ಚಾಗದಂತೆ ನಿಗಾ
ಏತನ್ಮಧ್ಯೆ ಕೋವಿಡ್ ಸೋಂಕಿನಿಂದ ಕಳೆದ 24ಗಂಟೆಗಳಲ್ಲಿ 422 ಮಂದಿ ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಒಟ್ಟು 31 695, 959ಕ್ಕೆ ಏರಿಕೆಯಾಗಿದೆ. ಅದೇ ರೀತಿ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,24,773ಕ್ಕೆ ಹೆಚ್ಚಳವಾಗಿದೆ.
ಇನ್ನು, ದೇಶಾದ್ಯಂತ ಪರೀಕ್ಷಾ ಸಾಮರ್ಥ್ಯವನ್ನು ಗಣನೀಯವಾಗಿ ಹೆಚ್ಚಿಸಿದೆ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 14,28,984 ಪರೀಕ್ಷೆಗಳನ್ನು ನಡೆಸಲಾಗಿದೆ. ಒಟ್ಟಾರೆಯಾಗಿ, ಭಾರತವು ಇಲ್ಲಿಯವರೆಗೆ 46.96 ಕೋಟಿ (46,96,45,494) ಪರೀಕ್ಷೆಗಳನ್ನು ನಡೆಸಿದೆ. ವಾರದ ಪಾಸಿಟಿವಿಟಿ ದರ ಪ್ರಸ್ತುತ 2.37% ರಷ್ಟಿದೆ ಮತ್ತು ದೈನಂದಿನ ಪಾಸಿಟಿವಿಟಿ ದರವು ಇಂದು 2.81% ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಇದನ್ನೂ ಓದಿ : ಮತ್ತೊಂದು ಹಾಕಿ ವಿಕ್ರಮ:ಆಸೀಸ್ ತಂಡವನ್ನು ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದ ಭಾರತ ವನಿತಾ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.