ದೇಶದಲ್ಲಿ ಮತ್ತೆ ಹೆಚ್ಚಿದ ಕೋವಿಡ್ 19 ಹೊಸ ಪ್ರಕರಣಗಳ ಸಂಖ್ಯೆ!
Team Udayavani, Nov 28, 2021, 11:01 AM IST
ಹೊಸದಿಲ್ಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 8,774 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಶನಿವಾರದ ವರದಿಗಿಂತ ಶೇ.5.5ರಷ್ಟು ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇದರೊಂದಿಗೆ ದೇಶದಲ್ಲಿ ಇದುವರೆಗೆ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 3,45,72,523 ಗೆ ಏರಿಕೆಯಾಗಿದೆ. ಇವರಲ್ಲಿ ಇದುವರೆಗೆ 3,39,98,278 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ 9,481 ಮಂದಿ ಸೋಂಕಿತರು ಸೋಂಕಿನಿಂದ ಗುಣಮುಖ ಹೊಂದಿದ್ದಾರೆ. ಸದ್ಯ ದೇಶದ ರಿಕವರಿ ರೇಟ್ 98.34 ಇದೆ.
ಹೆಚ್ಚು ಸೋಂಕು ಪತ್ತೆಯಲ್ಲಿ ಕೇರಳ ಮತ್ತೆ ಮೊದಲ ಸ್ಥಾನದಲ್ಲಿದೆ. ಕೇರಳದಲ್ಲಿ ಕಳೆದ 24 ಗಂಟೆಯಲ್ಲಿ 4,741 ಸೋಂಕು ಪ್ರಕರಣಗಳು ಪತ್ತೆಯಾಗಿದ್ದರೆ, ತಮಿಳುನಾಡು ರಾಜ್ಯದಲ್ಲಿ 740, ಪಶ್ಚಿಮ ಬಂಗಾಳದಲ್ಲಿ 701 ಪ್ರಕರಣಗಳು, ಮಹಾರಾಷ್ಟ್ರದಲ್ಲಿ 507 ಪ್ರಕರಣಗಳು ಮತ್ತು ಮಿಜೋರಾಂ ರಾಜ್ಯದಲ್ಲಿ 358 ಕೋವಿಡ್ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇದನ್ನೂ ಓದಿ:ಹಿಂದೂಗಳು ಹಿಂದೂಗಳಾಗಿ ಉಳಿಯಲು ‘ಅಖಂಡ’ ರಾಷ್ಟ್ರ ಮಾಡಬೇಕು: ಭಾಗವತ್
ಈ ಐದು ರಾಜ್ಯಗಳಲ್ಲೇ ದೇಶದ ಶೇ.80.31 ರಷ್ಟು ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿದೆ. ಅದರಲ್ಲೂ ಕೇರಳ ರಾಜ್ಯವೊಂದೇ ಶೇ 54.03 ಸೋಂಕು ಪ್ರಕರಣಗಳಿಗೆ ಕಾರಣವಾಗಿದೆ.
ಒಮಿಕ್ರಾನ್ ತಡೆಗೆ ಭಾರೀ ಕಟ್ಟೆಚ್ಚರ: ಕೊರೊನಾ ವೈರಾಣುವಿನ ಹೊಸ ರೂಪಾಂತರಿ ಯಾದ ಒಮಿಕ್ರಾನ್, ಅತ್ಯಂತ ಆತಂಕಕಾರಿ ರೂಪಾಂತರಿ ಪಟ್ಟ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯು ಎಚ್ ಒ) ಘೋಷಿಸಿರುವ ಹಿನ್ನೆಲೆಯಲ್ಲಿ, ಆ ರೂಪಾಂತರಿ ಭಾರತವನ್ನು ಪ್ರವೇಶಿಸದಂತೆ ತಡೆಯಲು ಭಾರತದಾದ್ಯಂತ ಕಟ್ಟುನಿಟ್ಟಿನ ಕ್ರಮಗಳು ಜಾರಿಯಾಗಿವೆ.
ವಿದೇಶಿಗರು ಭಾರತಕ್ಕೆ ಬರುವ ಪ್ರವೇಶ ಮಾರ್ಗಗಳಾದ (ಎಂಟ್ರಿ ಪಾಯಿಂಟ್) ವಿಮಾನ ನಿಲ್ದಾಣಗಳು, ಬಂದರುಗಳು ಮುಂತಾದೆಡೆ ಕಟ್ಟುನಿಟ್ಟಿನ ತಪಾಸಣೆ ನಡೆಸಲು ಕೇಂದ್ರ ಸರಕಾರ ಆದೇಶಿಸಿದೆ. ಜತೆಗೆ ಎಲ್ಲ ರಾಜ್ಯಗಳಲ್ಲಿ ಇತ್ತೀಚೆಗೆ ಕಾರಣಾಂತರಗಳಿಂದ ಆಗಮಿ ಸಿರುವ ವಿದೇಶಿಗರನ್ನು ತಪಾಸಣೆಗೊಳಪಡಿಸುವಂತೆ, ಎಲ್ಲೆಡೆ ವೈಯಕ್ತಿಕ ಅಂತರ, ಮಾಸ್ಕ್ ಕಡ್ಡಾಯದಂಥ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.