2021ರಲ್ಲೂ ಮುಂದುವರಿಯಲಿದೆ ಕೋವಿಡ್, ಎರಡನೇ ಹಂತದಲ್ಲಿ ಅಪ್ಪಳಿಸಲಿದೆ ಸೋಂಕು: ತಜ್ಞರ ವರದಿ
Team Udayavani, Sep 5, 2020, 12:08 PM IST
ಹೊಸದಿಲ್ಲಿ: ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಪ್ರತಿ ದಿನ 60 ಸಾವಿರಕ್ಕ ಹೆಚ್ಚು ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಸೋಂಕಿತರ ಮರಣ ಪ್ರಮಾಣವೂ ಏರಿಕೆ ಕಾಣುತ್ತಿದೆ. ಇದರ ಮಧ್ಯೆಯೇ ಕೋವಿಡ್ -19 ಸೋಂಕಿನ ಉಪಟಳ ಮುಂದಿನ ವರ್ಷವೂ ಮುಂದುವರಿಯಲಿದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ.
ಎಐಐಎಂ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಅವರು ಈ ಮಾಹಿತಿ ನೀಡಿದ್ದು, 2021ರಲ್ಲಿ ದೇಶದ ಕೆಲವು ಕಡೆ ಎರಡನೇ ಹಂತದಲ್ಲಿ ಕೋವಿಡ್-19 ಅಪ್ಪಳಿಸಲಿದೆ ಎಂದು ಹೇಳಿದ್ದಾರೆ. 2021ರಲ್ಲೂ ಕೋವಿಡ್-19 ಸೋಂಕು ಯಾಕೆ ಕಡಿಮೆ ಆಗುವುದಿಲ್ಲ ಎನ್ನುವುದಕ್ಕೆ ಕಾರಣ ನೀಡಿರುವ ಡಾ. ರಣದೀಪ್ ಗುಲೇರಿಯಾ, ಸೋಂಕು ಹರಡುವಿಕೆ ಮೊದಲು ದೊಡ್ಡ ನಗರಗಳಲ್ಲಿ ಮಾತ್ರ ಇತ್ತು. ಈಗ ಅದು ಚಿಕ್ಕ ಪಟ್ಟಣ ಮತ್ತು ಗ್ರಾಮಗಳಿಗೂ ವಿಸ್ತರಿಸಿದೆ. ಅಲ್ಲದೆ ನಮ್ಮ ದೇಶದಲ್ಲಿ ಜನಸಂಖ್ಯೆ ಕೂಡ ಹೆಚ್ಚಾಗಿದೆ. ಆದುದರಿಂದ ಸೋಂಕಿತರ ಹೆಚ್ಚುತ್ತಲೇ ಇರುತ್ತದೆ. ಕೋವಿಡ್ ಕಂಟಕ ಯಾವಾಗ ಮುಗಿಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ
ದೇಶದಲ್ಲಿ ಮೊದಲ ಕೋವಿಡ್ ಪ್ರಕರಣ ಕಂಡು ಬಂದಿದ್ದು ಜನವರಿ 30ರಂದು. ಮೊದಲ ಪ್ರಕರಣದಿಂದ 10 ಲಕ್ಷ ಸೋಂಕು ಪೀಡಿತರು ದೇಶದಲ್ಲಿ ಪತ್ತೆಯಾಗಲು 168 ದಿನ ಬೇಕಾಯಿತು. ಆದರೆ 10 ಲಕ್ಷದಿಂದ 40 ಲಕ್ಷ ಆಗಿದ್ದು ಕೇವಲ 50 ದಿನದಲ್ಲಿ. ಇದು ಆಘಾತಕಾರಿಯಾಗಿದೆ.
ದೇಶದಲ್ಲಿ ಶುಕ್ರವಾರ ಒಂದೇ ದಿನ 86,432 ಪ್ರಕರಣಗಳು ಪತ್ತೆಯಾಗಿದೆ. ಇದರಿಂಧ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 40,23,179ಕ್ಕೆ ಏರಿಕೆಯಾಗಿದೆ. ಅದಲ್ಲದೆ ಕಳೆದ 24 ಗಂಟೆಯ ಅವಧಿಯಲ್ಲಿ 1089 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.