ಲಲಿತ್ ಮೋದಿ, ಪತ್ನಿಯ ಸ್ವಿಸ್ ಬ್ಯಾಂಕ್ ವಿವರಕ್ಕೆ ಸೂಚನೆ
Team Udayavani, Oct 3, 2019, 5:56 AM IST
ಹೊಸದಿಲ್ಲಿ: ಐಪಿಎಲ್ ವಂಚನೆಗೆ ಸಂಬಂಧಿಸಿದಂತೆ ಮಾಜಿ ಆಯುಕ್ತ ಲಲಿತ್ ಮೋದಿ, ಪತ್ನಿ ಮಿನಾಲ್ ಹೊಂದಿರುವ ಬ್ಯಾಂಕ್ ವಿವರ ನೀಡುವಂತೆ ಸ್ವಿಜರ್ಲೆಂಡ್ ಸರಕಾರ ಸೂಚನೆ ನೀಡಿದೆ. ಉಭಯ ದೇಶಗಳ ಮಾಹಿತಿ ವರ್ಗಾವಣೆ ಒಪ್ಪಂದಕ್ಕೆ ಅನುಗುಣವಾಗಿ ಭಾರತವು ಸ್ವಿಜರ್ಲೆಂಡ್ ಸರಕಾರಕ್ಕೆ ಈ ಆಗ್ರಹ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಈ ಮಾಹಿತಿಯನ್ನು ನೀಡುವಂತೆ ಅ.1 ರಂದು ಸ್ವಿಜರ್ಲೆಂಡ್ ಸರಕಾರವು ಲಲಿತ್, ಮಿನಾಲ್‌ಗೆ ನೋಟಿಸ್ ನೀಡಿದ್ದು, 10 ದಿನಗಳಲ್ಲಿ ಮಾಹಿತಿ ನೀಡುವಂತೆ ಸೂಚಿಸಿದೆ. ಇದೇ ರೀತಿಯ ನೋಟಿಸ್ ಅನ್ನು 2016ರಲ್ಲೂ ಸ್ವಿಸ್ ಸರಕಾರ ಹೊರಡಿಸಿತ್ತಾದರೂ, ಆಗ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳಲಾಗಿದೆಯೇ ಎಂಬುದು ತಿಳಿದುಬಂದಿಲ್ಲ. ವಿದೇಶಗಳಲ್ಲಿ ಇರುವ ಕಪ್ಪು ಹಣ ಸಂಗ್ರಹಿಸುವುದನ್ನು ತಡೆಯುವ ನಿಟ್ಟಿನಲ್ಲಿ ಭಾರತವು ಕೈಗೊಂಡಿರುವ ಕಠಿಣ ಕ್ರಮಗಳಿಗೆ ಪೂರಕವಾಗಿ ಈ ಮನವಿ ಮಾಡಿಕೊಳ್ಳಲಾಗಿದೆ. 2010ರಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಲಲಿತ್ ಮೋದಿ ಲಂಡನ್‌ನಲ್ಲಿ ನೆಲೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
Maha Election: ಡಿಕೆಶಿ ಸೇರಿ ಕಾಂಗ್ರೆಸ್ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ
Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ
Jammu: ವೈಷ್ಣೋದೇವಿ ರೋಪ್‌ವೇ ವಿರೋಧಿ ಪ್ರತಿಭಟನೆ ವೇಳೆ ಭಾರೀ ಘರ್ಷಣೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.