26/11 ದಾಳಿ; ಹಫೀಜ್ ಸಯೀದ್ ನನ್ನು ಹಸ್ತಾಂತರಿಸಲು ಪಾಕ್ ಗೆ ಭಾರತ ಮನವಿ
ಭಾರತದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬ
Team Udayavani, Dec 29, 2023, 7:28 PM IST
ಹೊಸದಿಲ್ಲಿ: 26/11ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಪಾಕಿಸ್ಥಾನಕ್ಕೆ ಭಾರತ ಸರಕಾರ ಮನವಿ ಕಳುಹಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಶುಕ್ರವಾರ ಹೇಳಿದ್ದಾರೆ.
ವಿಚಾರಣೆ ಎದುರಿಸಲು ಉಗ್ರನನ್ನು ಹಸ್ತಾಂತರಿಸುವಂತೆ ಪಾಕಿಸ್ಥಾನಕ್ಕೆ ಇದು ಇತ್ತೀಚಿನ ಮನವಿಯಾಗಿದ್ದು, ಸಯೀದ್ ಭಾರತದಲ್ಲಿ ಹಲವಾರು ಪ್ರಕರಣಗಳಿಗೆ ಸಂಬಂಧಿಸಿ ಬೇಕಾಗಿದ್ದಾನೆ ಎಂದು ಬಾಗ್ಚಿ ಹೇಳಿದರು.
ಸಯೀದ್ ಭಾರತಕ್ಕೆ ಬೇಕಾದ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನೆಂದು ಪಟ್ಟಿಮಾಡಲ್ಪಟ್ಟಿದ್ದು, 26/11 ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಅಮೆರಿಕ ಈತನ ತಲೆಗೆ 10 ಮಿಲಿಯನ್ ಡಾಲರ್ ಇನಾಮು ಘೋಷಿಸಿದೆ.
2008 ನವೆಂಬರ್ 26 ರಿಂದ ನಾಲ್ಕು ದಿನಗಳ ಅವಧಿಯಲ್ಲಿ ನಡೆಸಿದ ಭೀಕರ ದಾಳಿಗಳಲ್ಲಿ 166 ಮಂದಿ ಬಲಿಯಾಗಿದ್ದರು. 300 ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.