ಜಾಗತಿಕ ನಾಯಕರಿಗೆ ಮಾಹಿತಿ ; ಎನ್‌ಆರ್‌ಸಿ, ಸಿಎಎ ಕುರಿತ ಗೊಂದಲ ಬಗೆಹರಿಸಿದ ಕೇಂದ್ರ

Team Udayavani, Jan 3, 2020, 2:13 AM IST

Raveesh-Kumar-Spokesperson-MEA-730

ಹೊಸದಿಲ್ಲಿ: ಪೌರತ್ವ ತಿದ್ದುಪಡಿ ಕಾಯ್ದೆಗೆ ದೇಶಾದ್ಯಂತ ಭಾರೀ ವಿರೋಧ ವ್ಯಕ್ತವಾಗಿರುವ ಬೆನ್ನಲ್ಲೇ ಜಾಗತಿಕ ನಾಯಕರಿಗೆ ಆ ಕಾಯ್ದೆಯ ಕುರಿತು ಸಮರ್ಪಕ ಮಾಹಿತಿಯನ್ನು ನೀಡುವ ಕೆಲಸವನ್ನು ಕೇಂದ್ರ ಸರಕಾರ ಮಾಡಿದೆ.

ಜಗತ್ತಿನ ಪ್ರಮುಖ ನಾಯಕರನ್ನು ಸಂಪರ್ಕಿಸಿರುವ ವಿದೇಶಾಂಗ ಇಲಾಖೆ, ಹೊಸ ಪೌರತ್ವ ಕಾಯ್ದೆ ಮತ್ತು ಪ್ರಸ್ತಾವಿತ ರಾಷ್ಟ್ರೀಯ ಪೌರತ್ವ ನೋಂದಣಿ ಕುರಿತು ಸೂಕ್ತ ವಿವರಣೆಯನ್ನು ನೀಡಿದೆ. ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಎನ್ನುವುದು ಧರ್ಮದ ಕಾರಣಕ್ಕಾಗಿ ದೇಶದಿಂದ ಹೊರದಬ್ಬಲ್ಪಟ್ಟ ಅಲ್ಪಸಂಖ್ಯಾಕರಿಗೆ ಪೌರತ್ವ ನೀಡುವಂಥ ಕಾಯ್ದೆಯಾಗಿದೆ. ಇದರಿಂದ ಸಂವಿಧಾನದ ಆಶಯಕ್ಕೆ ಯಾವುದೇ ಧಕ್ಕೆ ಆಗುವುದಿಲ್ಲ.

ಅಲ್ಲದೆ, ಸಿಎಎ ಮತ್ತು ಎನ್‌ಆರ್‌ಸಿ ದೇಶದ ಆಂತರಿಕ ಪ್ರಕ್ರಿಯೆ. ಯಾರ ಪೌರತ್ವವನ್ನೂ ಇದು ಕಿತ್ತು ಕೊಳ್ಳುವುದಿಲ್ಲ ಎಂದು ವಿವಿಧ ದೇಶಗಳಿಗೆ ವಿವರಿಸಿರುವುದಾಗಿ ವಿದೇಶಾಂಗ ಇಲಾಖೆ ವಕ್ತಾರ ರವೀಶ್‌ ಕುಮಾರ್‌ ತಿಳಿಸಿದ್ದಾರೆ. ಜತೆಗೆ, ಈ ಕುರಿತು ಸಮರ್ಪಕ ಮಾಹಿತಿ ನೀಡುವಂತೆ ಎಲ್ಲ ದೇಶಗಳಲ್ಲಿರುವ ರಾಯಭಾರ ಕಚೇರಿಗಳಿಗೂ ಸೂಚಿಸಲಾಗಿದೆ ಎಂದಿದ್ದಾರೆ.

ಪಿಎಫ್ಐ ರ್ಯಾಲಿಗೆ ಟಿಎಂಸಿಗೆ ಆಹ್ವಾನ: ಗಲಭೆಗೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾ (ಪಿಎಫ್ಐ) ನಿಷೇಧದ ಕುರಿತು ಚರ್ಚೆ ನಡೆಯು ತ್ತಿರು ವಾಗಲೇ, ಪಶ್ಚಿಮ ಬಂಗಾಲದಲ್ಲಿ ಇದೇ 5ರಂದು ಸಿಎಎ ವಿರೋಧಿ ರ್ಯಾಲಿಯನ್ನು ಪಿಎಫ್ಐ ಆಯೋ ಜಿಸಿದೆ. ಅಷ್ಟೇ ಅಲ್ಲ, ಈ ರ್ಯಾಲಿಯಲ್ಲಿ ಭಾಗವಹಿಸುವಂತೆ ಟಿಎಂಸಿ ಸಂಸದ ಅಬು ತಾಹೇರ್‌ ಖಾನ್‌ ಅವರಿಗೆ ಆಹ್ವಾನವನ್ನು ನೀಡಿದೆ.

ಸಾಂವಿಧಾನಿಕ ಮಾನ್ಯತೆ ಇಲ್ಲ: ವಿವಾದಾತ್ಮಕ ಪೌರತ್ವ ಕಾಯ್ದೆಯನ್ನು ವಜಾ ಮಾಡುವಂತೆ ಕೇರಳ ವಿಧಾನಸಭೆ ಕೈಗೊಂಡಿರುವ ನಿರ್ಣಯಕ್ಕೆ ಸಾಂವಿಧಾನಿಕ ಹಾಗೂ ಕಾನೂನಾತ್ಮಕ ಮಾನ್ಯತೆ ಇಲ್ಲ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್‌ ಹೇಳಿದ್ದಾರೆ. ಪೌರತ್ವ ಎನ್ನುವುದು ರಾಜ್ಯದ ವ್ಯಾಪ್ತಿಗೆ ಬರುವುದಿಲ್ಲ. ಅಲ್ಲದೆ ಕೇರಳದಲ್ಲಿ ಅಕ್ರಮ ವಲಸಿಗರೂ ಇಲ್ಲ. ಆದರೂ ತಮಗೆ ಸಂಬಂಧಿಸಿಯೇ ಇಲ್ಲದ ವಿಚಾರಗಳ ಕುರಿತು ಯಾಕೆ ಇವರೆಲ್ಲ ತಲೆಕೆಡಿಸಿಕೊಂಡಿದ್ದಾರೆ ಎಂದು ಅರ್ಥವಾಗುತ್ತಿಲ್ಲ ಎಂದಿದ್ದಾರೆ ಖಾನ್‌.

ಪೊಲೀಸರ ಎಡವಟ್ಟು: ಉತ್ತರಪ್ರದೇಶದ ಫಿರೋಜಾಬಾದ್‌ ಪೊಲೀಸರಿಗೆ ಅತಿದೊಡ್ಡ ಮುಖಭಂಗವಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಬಳಿಕ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿಗೆ ಭಂಗ ತರುವವರ ಪಟ್ಟಿಯೊಂದನ್ನು ಪೊಲೀಸರು ಸಿದ್ಧಪಡಿಸಿದ್ದಾರೆ. ಆ ಪಟ್ಟಿಯಲ್ಲಿ 200 ಮಂದಿಯ ಹೆಸರಿದೆ.

ಅಚ್ಚರಿಯೆಂದರೆ, 6 ವರ್ಷಗಳ ಹಿಂದೆಯೇ ಮೃತಪಟ್ಟಿರುವ ವ್ಯಕ್ತಿ, ಅನಾರೋಗ್ಯಪೀಡಿತರಾಗಿ ಹಾಸಿಗೆ ಹಿಡಿದಿರುವ 93ರ ವೃದ್ಧ, 90 ವರ್ಷ ವಯಸ್ಸಿನ ಮತ್ತೂಬ್ಬ ಹಿರಿಯ ವ್ಯಕ್ತಿಯ ಹೆಸರುಗಳೂ ಈ ಪಟ್ಟಿಯಲ್ಲಿವೆ. ಇವರ ಮನೆಗಳಿಗೆ ನೋಟಿಸ್‌ ಹೋಗಿದ್ದು, 10 ಲಕ್ಷ ರೂ. ಬಾಂಡ್‌ಗೆ ಸಹಿ ಮಾಡುವಂತೆ, ಮ್ಯಾಜಿಸ್ಟ್ರೇಟ್‌ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

58 ಮಂದಿಗೆ ಜಾಮೀನು: ಸಿಎಎ ವಿರುದ್ಧ ಪ್ರತಿಭಟಿಸಿ ಬಂಧನಕ್ಕೊಳಗಾಗಿದ್ದ 58 ಮಂದಿಗೆ ಉತ್ತರಪ್ರದೇಶದ ಕೋರ್ಟ್‌ ಜಾಮೀನು ನೀಡಿದ್ದು, ಗುರುವಾರ ಅವರು ಬಿಡುಗಡೆಗೊಂಡಿದ್ದಾರೆ. ಈ ಪೈಕಿ ಎನ್‌ಜಿಒವೊಂದನ್ನು ನಡೆಸುತ್ತಿರುವ ಏಕ್ತಾ ಮತ್ತು ರವಿಶೇಖರ್‌ ದಂಪತಿಯೂ ಸೇರಿದ್ದು, ಇವರು ತಮ್ಮ 14 ತಿಂಗಳ ಕೂಸನ್ನು ಮತ್ತೆ ಸೇರಿದ್ದಾರೆ. ಹೆತ್ತವರ ಬಂಧನದಿಂದಾಗಿ ಕೂಸು ಏಕಾಂಗಿಯಾಗಿದ್ದರ ಕುರಿತು ಭಾರೀ ಸುದ್ದಿಯಾಗಿತ್ತು.

ಇಂದು ಟೋಲ್‌ ಫ್ರೀ ಸಂಖ್ಯೆಗೆ ಚಾಲನೆ
ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದೇಶಾದ್ಯಂತ ಜ. 5ರಿಂದ ಜನಜಾಗೃತಿ ಅಭಿಯಾನ ಆರಂಭಿಸಲಿರುವ ಬಿಜೆಪಿ, ಅದರ ಭಾಗವಾಗಿ ಟೋಲ್‌ ಫ್ರೀ ಸಂಖ್ಯೆಯೊಂದನ್ನು ಪರಿಚಯಿಸಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಶುಕ್ರವಾರ ಈ ಟೋಲ್‌ ಫ್ರೀ ಸಂಖ್ಯೆಗೆ ಚಾಲನೆ ನೀಡಲಿದ್ದಾರೆ.

ಈ ಸಂಖ್ಯೆಗೆ ಮಿಸ್ಡ್ ಕಾಲ್‌ ನೀಡುವ ಮೂಲಕ ಸಾರ್ವಜನಿಕರು, ಪೌರತ್ವ ತಿದ್ದುಪಡಿ ಕಾಯ್ದೆಗೆ ತಮ್ಮ ಬೆಂಬಲ ಸೂಚಿಸಬಹುದಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್‌ ಜೈನ್‌ ತಿಳಿಸಿದ್ದಾರೆ. ಮುಂದಿನ ರವಿವಾರ ಅಮಿತ್‌ ಶಾ ಅವರು ದಿಲ್ಲಿಯ ಕೆಲ ಮನೆಗಳಿಗೆ ಭೇಟಿ ನೀಡಿ, 10 ದಿನಗಳ ಜನಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ. ಕೇಂದ್ರ ಸಚಿವರಿಂದ ಹಿಡಿದು ಸಂಘಟನಾತ್ಮಕ ಮಟ್ಟದ ನಾಯಕರವರೆಗೆ ಎಲ್ಲರೂ ದೇಶದ ಮೂಲೆಮೂಲೆಗಳಿಗೆ ತೆರಳಿ ಜ.5ರಿಂದ 15ರವರೆಗೆ ಸಿಎಎ ಬಗ್ಗೆ ಜಾಗೃತಿ ಮೂಡಿಸಲಿದ್ದಾರೆ.

ಗೋವಾದಲ್ಲಿ ಕಾಂಗ್ರೆಸ್‌ಗೆ ಆಘಾತ
ಪೌರತ್ವ ಕಾಯ್ದೆ ವಿಚಾರಕ್ಕೆ ಸಂಬಂಧಿಸಿ ಗೋವಾದಲ್ಲಿ ಕಾಂಗ್ರೆಸ್‌ಗೆ ಮಹಾ ಆಘಾತ ಎದುರಾಗಿದೆ. ಕಾಯ್ದೆ ಕುರಿತ ಪಕ್ಷದ ನಿಲುವನ್ನು ಖಂಡಿಸಿ ನಾಲ್ವರು ಕಾಂಗ್ರೆಸ್‌ ನಾಯಕರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ. ಈ ಪೈಕಿ ಮೂವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಣಜಿ ಕಾಂಗ್ರೆಸ್‌ ಬ್ಲಾಕ್‌ ಸಮಿತಿ ಅಧ್ಯಕ್ಷ ಪ್ರಸಾದ್‌ ಅಮೋನ್ಕರ್‌, ಬ್ಲಾಕ್‌ ಸಮಿತಿ ಮಾಜಿ ಕಾರ್ಯದರ್ಶಿ ದಿನೇಶ್‌ ಕುಬಾಲ್‌, ಮಾಜಿ ಯುವ ನಾಯಕ ಶಿವರಾಜ್‌ ಟಾರ್ಕರ್‌, ಉತ್ತರ ಗೋವಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಜಾವೇದ್‌ ಶೇಖ್‌ ರಾಜೀನಾಮೆ ಸಲ್ಲಿಸಿದವರು. ಇವರಲ್ಲಿ ಅಮೋನ್ಕರ್‌, ಕುಬಾಲ್‌, ಟಾರ್ಕರ್‌ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಟಾಪ್ ನ್ಯೂಸ್

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.