ಕ್ಷಿಪಣಿ ಛೇದಕ ವ್ಯವಸ್ಥೆ ಯಶಸ್ವಿ ಪರೀಕ್ಷೆ
Team Udayavani, Nov 2, 2022, 11:00 PM IST
ನವದೆಹಲಿ:ರಕ್ಷಣಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ (ಡಿಆರ್ಡಿಒ) ಅಭಿವೃದ್ಧಿಪಡಿಸಿದ ಖಂಡಾಂತರ ಕ್ಷಿಪಣಿಯ ಎರಡನೇ ಹಂತದ ಪರೀಕ್ಷೆಯನ್ನು ಬುಧವಾರ ಯಶಸ್ವಿಯಾಗಿ ನಡೆಸಲಾಗಿದೆ.
ಒಡಿಶಾದಲ್ಲಿ ಇರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ದ್ವೀಪದ ಕರಾವಳಿಯಲ್ಲಿ ಈ ಪರೀಕ್ಷೆಯಲ್ಲಿ ವಿವಿಧ ಭೌಗೋಳಿಕ ಹಂತದಲ್ಲಿ ಅಳವಡಿಸಲಾಗಿದ್ದ ಎಲ್ಲಾ ಖಂಡಾಂತರ ಕ್ಷಿಪಣಿ ವ್ಯವಸ್ಥೆಯನ್ನೂ ಸೇರ್ಪಡೆ ಮಾಡಲಾಗಿತ್ತು.
ಇದೊಂದು ಕ್ಷಿಪಣಿಗಳ ಛೇದಕ ವ್ಯವಸ್ಥೆ ಎಡಿ-1ರ ಪರೀಕ್ಷೆಯಾಗಿದೆ ಮತ್ತು 100 ಕಿಮೀ ದೂರದಲ್ಲಿ ಇರುವ ನೆಲೆಯನ್ನು ಯಶಸ್ವಿಯಾಗಿ ಛೇದಿಸಿದೆ.ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್ಡಿಒದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಇದೊಂದು ವಿಶೇಷ ರೀತಿಯಾಗಿರುವ ಕ್ಷಿಪಣಿ ಛೇದಕ ವ್ಯವಸ್ಥೆಯಾಗಿದೆ. ಜಗತ್ತಿನ ಕೆಲವೇ ಕೆಲವು ರಾಷ್ಟ್ರಗಳಿಗೆ ಇಂಥ ಸಾಧನೆ ಮಾಡಲು ಸಾಧ್ಯವಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.