India Canada Issue: ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಲು ಗಡುವು ನೀಡಿದ ಭಾರತ
Team Udayavani, Oct 3, 2023, 1:31 PM IST
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಸಂಬಂಧಿಸಿದಂತೆ ಭಾರತ ಮತ್ತು ಕೆನಡಾ ಉಭಯ ರಾಷ್ಟ್ರಗಳ ನಡುವೆ ಉದ್ವಿಗ್ನತೆ ಹೆಚ್ಚಿರುವ ಮಧ್ಯೆ ಭಾರತದಿಂದ ತನ್ನ 40 ರಾಜತಾಂತ್ರಿಕರನ್ನು ವಾಪಸ್ ಕರೆಸಿಕೊಳ್ಳಿ ಎಂದು ಕೆನಡಾಕ್ಕೆ ಭಾರತ ಹೇಳಿದೆ.
ಖಲಿಸ್ತಾನಿ ಭಯೋತ್ಪಾದಕನ ಹತ್ಯೆ ಹಿಂದೆ ಭಾರತ ಸರ್ಕಾರದ ಏಜೆಂಟ್ಗಳ ಕೈವಾಡ ಇದೆ ಎಂದು ಕೆನಡಾ ಆರೋಪಿಸಿದ ಬಳಿಕ ಉಂಟಾದ ರಾಜತಾಂತ್ರಿಕ ಬಿಕ್ಕಟ್ಟು ಸದ್ಯ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ ಕೆನಡಾ ನೀಡಿರುವ ಹೇಳಿಕೆಗೆ ಸರಿಯಾಗಿ ಪ್ರತಿಕ್ರಿಯೆ ನೀಡಿದ ಭಾರತ ಅಕ್ಟೋಬರ್ 10 ರೊಳಗೆ ಭಾರತದಲ್ಲಿರುವ 40 ಕೆನಡಾದ ರಾಜತಾಂತ್ರಿಕರನ್ನು ವಾಪಸ್ ಕಳುಹಿಸಬೇಕು ಎಂದು ಒಟ್ಟಾವಾಗೆ ತಿಳಿಸಿದೆ. ಈ ಹೇಳಿಕೆಯ ಬೆನ್ನಲ್ಲೇ ಕೆನಡಾ ಭಾರತ ತಮ್ಮ ಮೇಲೆ ಬೆದರಿಕೆ ಹಾಕುತ್ತಿದೆ ಎಂದು ಆರೋಪಿಸಿದೆ.
ಕೆನಡಾವು ಭಾರತದಲ್ಲಿ 62 ರಾಜತಾಂತ್ರಿಕರನ್ನು ಹೊಂದಿದ್ದು ಮತ್ತು ಈ ಮೊದಲು ಭಾರತವು ಒಟ್ಟು 41 ರಷ್ಟು ಕಡಿಮೆಗೊಳಿಸಬೇಕೆಂದು ಹೇಳಿದೆ ಎಂದು ಪತ್ರಿಕೆ ಹೇಳಿದೆ.
ಕೆನಡಾದ ನೆಲದಲ್ಲಿ ಖಲಿಸ್ತಾನಿ ಪ್ರತ್ಯೇಕತಾವಾದಿಯ ಹತ್ಯೆಯ ಕುರಿತು ಭಾರತ ವಿರುದ್ಧ ಒಟ್ಟಾವಾ ಆರೋಪಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಸಾರ್ವಕಾಲಿಕವಾಗಿ ಕೆಳಮಟ್ಟಕ್ಕೆ ಇಳಿದಿದ್ದರಿಂದ ಕೆನಡಾದಲ್ಲಿ ತನ್ನ ರಾಜತಾಂತ್ರಿಕ ಉಪಸ್ಥಿತಿಯನ್ನು ಕಡಿಮೆಗೊಳಿಸುವಂತೆ ಭಾರತವು ಈ ಹಿಂದೆ ಕೆನಡಾವನ್ನು ಕೇಳಿಕೊಂಡಿತ್ತು.
ಭಾರತ ಮತ್ತು ಕೆನಡಾದಲ್ಲಿ ನೇಮಕಗೊಂಡಿರುವ ರಾಜತಾಂತ್ರಿಕರ ಸಂಖ್ಯೆಯಲ್ಲಿ ‘ಸಮಾನತೆ’ ಬಯಸುವುದಾಗಿ ಭಾರತ ಸರ್ಕಾರ ಈ ಹಿಂದೆ ಹೇಳಿತ್ತು. ಒಟ್ಟಾವಾದಲ್ಲಿ ಭಾರತಕ್ಕೆ ಹೋಲಿಸಿದರೆ ಕೆನಡಾವು ದೆಹಲಿಯಲ್ಲಿರುವ ತನ್ನ ಹೈಕಮಿಷನ್‌ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಾಜತಾಂತ್ರಿಕರನ್ನು ಹೊಂದಿದೆ ಎನ್ನಲಾಗಿದೆ.
ಕಳೆದ ವಾರ ವಾಷಿಂಗ್ಟನ್ ಡಿಸಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವಿದೇಶಾಂಗ ವ್ಯವಹಾರಗಳ ಸಚಿವ ಡಾ ಎಸ್ ಜೈಶಂಕರ್ , ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯು “ನಮ್ಮ ನೀತಿಗೆ ಅನುಗುಣವಾಗಿಲ್ಲ” ಎಂದು ಹೇಳಿದ್ದಾರೆ. ಅಲ್ಲದೆ ಭಾರತದಲ್ಲಿ ಸ್ವತಂತ್ರ ರಾಜ್ಯವನ್ನು ಬಯಸುತ್ತಿರುವ ಖಲಿಸ್ತಾನಿ ಪರ ಅಂಶಗಳಲ್ಲಿ ಕೆನಡಾ ತೊಡಗಿಸಿಕೊಂಡಿದೆ ಎಂದು ಅವರು ಆರೋಪಿಸಿದರು. ಇದಲ್ಲದೆ, ನಿಜ್ಜರ್ ಹತ್ಯೆಯಲ್ಲಿ ಭಾರತವು ಭಾಗಿಯಾಗಿದೆ ಎಂದು ಟ್ರೂಡೊ ಆರೋಪಿಸಿದ ನಂತರ ಭಾರತವು ಕೆನಡಾಕ್ಕೆ ತನ್ನ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ. ಕೆನಡಾದಲ್ಲಿ “ಬೆಳೆಯುತ್ತಿರುವ ಭಾರತ-ವಿರೋಧಿ ಚಟುವಟಿಕೆಗಳು ಮತ್ತು ರಾಜಕೀಯವಾಗಿ ಮನ್ನಣೆ ಪಡೆದ ದ್ವೇಷದ ಅಪರಾಧಗಳು ಮತ್ತು ಕ್ರಿಮಿನಲ್ ಹಿಂಸಾಚಾರ” ದ ಹಿನ್ನೆಲೆಯಲ್ಲಿ ಭಾರತವು ತನ್ನ ನಾಗರಿಕರಿಗೆ ಮತ್ತು ಕೆನಡಾಕ್ಕೆ ಪ್ರಯಾಣಿಸುವವರಿಗೆ ಹೆಚ್ಚಿನ ಎಚ್ಚರಿಕೆಯನ್ನು ನೀಡುವಂತೆ ಸಲಹೆಯನ್ನು ನೀಡಿದೆ.
ಇದನ್ನೂ ಓದಿ: Child Marriage: ಬಾಲ್ಯವಿವಾಹದ ವಿರುದ್ಧ ಕಾರ್ಯಾಚರಣೆ… 800 ಕ್ಕೂ ಹೆಚ್ಚು ಮಂದಿ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.