24 ಸಾವಿರ ಕೋಟಿ ವೆಚ್ಚ; 3 ವರ್ಷಗಳಲ್ಲಿ 75 ನೂತನ ಮೆಡಿಕಲ್ ಕಾಲೇಜುಗಳ ಸ್ಥಾಪನೆ
Team Udayavani, Aug 28, 2019, 7:19 PM IST
ನವದೆಹಲಿ:ಮುಂದಿನ ಮೂರು ವರ್ಷಗಳಲ್ಲಿ ಕೇಂದ್ರ ಸರಕಾರ ದೇಶಾದ್ಯಂತ 75 ಹೊಸ ಮೆಡಿಕಲ್ ಕಾಲೇಜುಗಳನ್ನು ನಿರ್ಮಿಸಲಿದ್ದು, ಇದಕ್ಕಾಗಿ 24, 375 ಕೋಟಿ ರೂಪಾಯಿ ವ್ಯಯಿಸಲಿದೆ ಎಂದು ವರದಿ ತಿಳಿಸಿದೆ.
ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನೂತನ ಮೆಡಿಕಲ್ ಕಾಲೇಜುಗಳನ್ನು ತೆರೆಯುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಪರಿಸರ, ಅರಣ್ಯ, ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಘೋಷಿಸಿದರು.
ಮೂರು ವರ್ಷಗಳಲ್ಲಿ 75 ನೂತನ ಮೆಡಿಕಲ್ ಕಾಲೇಜುಗಳನ್ನು ತೆರೆಯುವುದರಿಂದ ಸುಮಾರು 15,700ಕ್ಕೂ ಅಧಿಕ ಮೆಡಿಕಲ್ ಸೀಟುಗಳು ದೊರೆಯುತ್ತದೆ. ಆ ನಿಟ್ಟಿನಲ್ಲಿ ಮೆಡಿಕಲ್ ಶಿಕ್ಷಣದ ಅತೀ ದೊಡ್ಡ ವಿಸ್ತರಣೆ ಇದಾಗಿದೆ ಎಂದು ಜಾವ್ಡೇಕರ್ ವಿವರಿಸಿದರು.
2021-22ರಲ್ಲಿ ನೂತನ ಮೆಡಿಕಲ್ ಕಾಲೇಜು ನಿರ್ಮಾಣವಾಗುವ ಮೂಲಕ 15,700 ಎಂಬಿಬಿಎಸ್ ವೈದ್ಯರು ನಮಗೆ ಹೆಚ್ಚುವರಿ ಸಿಗಲಿದ್ದಾರೆ. ಇದರಿಂದ ಕನಿಷ್ಠ ಮಟ್ಟದ ಆರೋಗ್ಯ ಸೇವೆ ಇರುವಲ್ಲಿ ಉತ್ತಮ ಆರೋಗ್ಯ ಸೇವೆ ನೀಡಲು ಸಾಧ್ಯವಾಗಲಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.