ಮುಂದಿನ 10 ವರ್ಷಗಳಲ್ಲಿ ಭಾರತದಲ್ಲಿ ದಾಖಲೆ ಸಂಖ್ಯೆಯ ವೈದ್ಯರು ಲಭ್ಯ: ಪ್ರಧಾನಿ ಮೋದಿ
ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶ
Team Udayavani, Apr 15, 2022, 6:29 PM IST
ನವದೆಹಲಿ: ಮುಂದಿನ 10 ವರ್ಷಗಳಲ್ಲಿ ಭಾರತ ದಾಖಲೆ ಸಂಖ್ಯೆಯ ಹೊಸ ವೈದ್ಯರನ್ನು ಪಡೆಯಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ಎ.15) ಹೇಳಿದ್ದಾರೆ.
ಗುಜರಾತಿನ ಭುಜ್ ನಲ್ಲಿ 200 ಹಾಸಿಗೆಗಳ ಕೆ.ಕೆ ಪಟೇಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರದ ಹೊಸ ಯೋಜನೆಯಿಂದಾಗಿ ಪ್ರತಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಿದ್ದು ಇದರಿಂದ ಮುಂಬರುವ 10 ವರ್ಷಗಳಲ್ಲಿ ಭಾರತವು ದಾಖಲೆ ಸಂಖ್ಯೆಯ ಹೊಸ ವೈದ್ಯರನ್ನು ಪಡೆಯಲಿದೆ ಎಂದು ಹೇಳಿದರು.
ಭುಜ್ ನಲ್ಲಿರುವ ಆಸ್ಪತ್ರೆಯು ಜನರಿಗೆ ಕೈಗೆಟುವ ಬೆಲೆಯಲ್ಲಿ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯನ್ನು ಲಭ್ಯವಾಗುವಂತೆ ಮಾಡುತ್ತದೆ.
ಎರಡು ದಶಕಗಳ ಹಿಂದೆ ಗುಜರಾತ್ ನಲ್ಲಿ ಕೇವಲ 1,100 ಸೀಟುಗಳೊಂದಿಗೆ ಕೇವಲ 9 ವೈದ್ಯಕೀಯ ಕಾಲೇಜುಗಳು ಇದ್ದವು. ಆದರೆ ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಸಾಕಷ್ಟು ಸುಧಾರಣೆಯಾಗಿವೆ ಮಾತ್ರವಲ್ಲದೇ ಈಗ ರಾಜ್ಯದಲ್ಲಿ ಒಂದು ಏಮ್ಸ್ ಸೇರಿದಂತೆ 36ಕ್ಕೂ ಹೆಚ್ಚು ವೈದ್ಯಕೀಯ ಕಾಲೇಜುಗಳನ್ನು ಹೊಂದಿದ್ದೇವೆ .ಪ್ರತಿ ವರ್ಷ 6,000 ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಅಂಜನಾದ್ರಿ: ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಖಂಡಿಸಿ ಮನವಿ ಸಲ್ಲಿಕೆ
ಉತ್ತಮ ಆರೋಗ್ಯ ಸೌಲಭ್ಯಗಳು ಕೇವಲ ರೋಗಗಳ ಚಿಕಿತ್ಸೆಗೆ ಸೀಮಿತವಾಗಿಲ್ಲ ಅವು ಸಾಮಾಜಿಕ ನ್ಯಾಯವನ್ನು
ಉತ್ತೇಜಿಸುತ್ತವೆ. ಬಡವರು ಅಗ್ಗದ ಮತ್ತು ಉತ್ತಮ ಚಿಕಿತ್ಸೆಗೆ ಪಡೆದಾಗ ವ್ಯವಸ್ಥೆಯಲ್ಲಿ ಅವರ ನಂಬಿಕೆ ಬಲಗೊಳ್ಳುತ್ತದೆ ಎಂದು ಅವರು ಹೇಳಿದರು.
2001ರಲ್ಲಿ ಭೂಕಂಪದಿಂದ ಉಂಟಾದ ವಿನಾಶವನ್ನು ನೆನಪಿಕೊಂಡ ಮೋದಿ,ಭುಜ್ ಮತ್ತು ಕಚ್ ನ ಜನರು ಈಗ ತಮ್ಮ ಕಠಿಣ ಪರಿಶ್ರಮದಿಂದ ಈ ಪ್ರದೇಶದ ಹೊಸ ಭವಿಷ್ಯವನ್ನು ಬರೆಯುತ್ತಿದ್ದಾರೆ ಎಂದು ಹೇಳಿದರು.
Hospital in Bhuj will make good quality healthcare accessible to people at affordable price. https://t.co/ip4Y9sNVyz
— Narendra Modi (@narendramodi) April 15, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.