ಬಡರಾಷ್ಟ್ರಗಳಿಗೆ ಭಾರತ ಲಸಿಕೆ ಸಂಗ್ರಾಹಕ ಗಿಫ್ಟ್
Team Udayavani, Nov 30, 2020, 11:52 PM IST
ಸಾಂದರ್ಭಿಕ ಚಿತ್ರ
ನವದೆಹಲಿ: ಕೋವಿಡ್ ಕಾಲಿಟ್ಟ ಆರಂಭದಲ್ಲಿ ಬಡರಾಷ್ಟ್ರಗಳಿಗೆ ಮಲೇರಿಯಾ ಗುಳಿಗೆ ರವಾನಿಸಿ ಭಾರತ ಮಾನವೀಯತೆ ಮೆರೆದಿತ್ತು. ಪ್ರಸ್ತುತ ಕನಿಷ್ಠ ಅಭಿವೃದ್ಧಿ ಹೊಂದಿದ ಜಗತ್ತಿನ 47 ರಾಷ್ಟ್ರಗಳಿಗೆ ಸೋಲಾರ್ ಆಧಾರಿತ, ಕೊರೊನಾ ಲಸಿಕೆ ಸಂಗ್ರಾಹಕ ಪೂರೈಸಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ.
ಕನಿಷ್ಠ ಅಭಿವೃದ್ಧಿ ಹೊಂದಿದ 47 ರಾಷ್ಟ್ರಗಳ 500 ಆಸ್ಪತ್ರೆಗಳಲ್ಲಿ ಇಂಥದ್ದೊಂದು ಯೋಜನೆ ರೂಪಿಸಲು ಗುರುಗ್ರಾಮದ “ಅಂತಾರಾಷ್ಟ್ರೀಯ ಸೋಲಾರ್ ಕೂಟ’ (ಐಎಸ್‌ಎ) ನಿರ್ಧರಿಸಿದೆ. ಪ್ಯಾರಿಸ್ ಒಪ್ಪಂದದ ಭಾಗವಾಗಿ ಪ್ರಧಾನಿ ಮೋದಿ ಮುಂದಾಳತ್ವದಲ್ಲಿ ಸ್ಥಾಪಿಸಿರುವ ಈ ಕೂಟ, ಉದ್ದೇಶಿತ ಯೋಜನೆಗೆ “ಐಎಸ್‌ಎ ಕೇರ್’ ಎಂದು ಹೆಸರಿಟ್ಟಿದೆ. ಆಫ್ರಿಕಾದ ಬಡರಾಷ್ಟ್ರಗಳು, ದ್ವೀಪರಾಷ್ಟ್ರಗಳು ಇದರ ಪ್ರಯೋಜನ ಪಡೆಯಲಿವೆ.
ಏನಿದು ಯೋಜನೆ?: ಕೋವಿಡ್ ಲಸಿಕೆ ಸುರಕ್ಷಿತವಾಗಿ ಸಂಗ್ರಹಿಸಿಡಲು 24/7 ವಿದ್ಯುತ್ತಿನ ಅವಶ್ಯಕತೆ ಇದೆ. ಆದರೆ, ತೀವ್ರ ವಿದ್ಯುತ್ತಿನ ಕೊರತೆ ಅನುಭವಿಸುತ್ತಿರುವ ಕನಿಷ್ಠ ಅಭಿವೃದ್ಧಿ ಹೊಂದಿದ ಬಡರಾಷ್ಟ್ರಗಳಲ್ಲಿ ಇದು ನಿಜಕ್ಕೂ ಸವಾಲು. ಇಂಥ ಪ್ರದೇಶಗಳ ಪ್ರತಿ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಸೋಲಾರ್ ಆಧಾರಿತ ಲಸಿಕೆ ಸಂಗ್ರಾಹಕ ಘಟಕವನ್ನು ಐಎಸ್‌ಎ ಸ್ಥಾಪಿಸಲಿದೆ. “ಅಗತ್ಯವಿರುವ ರಾಷ್ಟ್ರಗಳಿಗೆ ಲಸಿಕೆ ಸರಬರಾಜಿಗೆ ಅನುಕೂಲವಾಗುವಂಥ ಕೋಲ್ಡ್ ಚೈನ್ ಮತ್ತು ಸಂಗ್ರಾಹಕ ಸಾಮರ್ಥ್ಯ ವ್ಯವಸ್ಥೆ ಹೆಚ್ಚಿಸಲು ಭಾರತ ನೆರವಾಗಲಿದೆ’ ಎಂದು ಪ್ರಧಾನಿ ಮೋದಿ ಇತ್ತೀಚೆಗಷ್ಟೇ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.