Bangla; ಭಾರತೀಯ ಬಸ್‌ ಮೇಲೆ ಬಾಂಗ್ಲಾದಲ್ಲಿ ದಾಳಿ; ಭಾರತ ವಿರೋಧಿ ಘೋಷಣೆ ಕೂಗಿದ ಸ್ಥಳೀಯರು


Team Udayavani, Dec 1, 2024, 3:46 PM IST

baga

ಕೋಲ್ಕತ್ತಾ: ಅಗರ್ತಲಾದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಬಸ್ ಮೇಲೆ ಬಾಂಗ್ಲಾದೇಶದಲ್ಲಿ ದಾಳಿ ನಡೆದಿದೆ ಎಂದು ತ್ರಿಪುರ ಸಾರಿಗೆ ಸಚಿವ ಸುಶಾಂತ ಚೌಧರಿ ಹೇಳಿದ್ದಾರೆ. ಸಚಿವರ ಹೇಳಿಕೆ ಪ್ರಕಾರ, ಬಾಂಗ್ಲಾದೇಶದ ಬ್ರಹ್ಮನ್‌ಬಾರಿಯಾ ಜಿಲ್ಲೆಯ ಬಿಶ್ವಾ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಮುಖ್ಯಮಂತ್ರಿ ಮಾಣಿಕ್ ಸಹಾ ಅವರು ಈ ವಿಷಯದ ಬಗ್ಗೆ ಮಾಹಿತಿ ಕೇಳಿದ್ದು, ನೆರೆಯ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಶಾಂತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳು ಹೇಗೆ ದಬ್ಬಾಳಿಕೆ ಎದುರಿಸುತ್ತಿದ್ದಾರೆ ಎಂಬುದನ್ನು ಇಡೀ ಜಗತ್ತು ನೋಡುತ್ತಿದೆ ಎಂದು ಹೇಳಿದರು.

“ನಮ್ಮ ರಾಜ್ಯವು ಮೂರು ಕಡೆ ಬಾಂಗ್ಲಾದೇಶದಿಂದ ಸುತ್ತುವರಿದಿರುವುದರಿಂದ, ಅಂತಾರಾಷ್ಟ್ರೀಯ ಗಡಿಯಲ್ಲಿ ಕಟ್ಟುನಿಟ್ಟಾದ ಜಾಗರೂಕತೆಯನ್ನು ಕಾಪಾಡಿಕೊಳ್ಳಲು ನಾನು ಬಿಎಸ್ಎಫ್ ಮತ್ತು ಪೊಲೀಸರನ್ನು ಕೇಳಿದ್ದೇನೆ” ಎಂದು ಸಹಾ ಸೇರಿಸಿದ್ದಾರೆ.

“ತ್ರಿಪುರಾದಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಸಹ್ಯಮೊಲಿ ಪರಿಬಾಹನ್ ಬಸ್ ಮೇಲೆ ಬಾಂಗ್ಲಾದೇಶದ ಬ್ರಾಹ್ಮಣಬಾರಿಯಾ ಬಿಶ್ವಾ ರಸ್ತೆಯಲ್ಲಿ ದಾಳಿ ನಡೆಸಲಾಯಿತು. ಈ ಘಟನೆಯು ಬಸ್‌ ನಲ್ಲಿದ್ದ ಭಾರತೀಯ ಪ್ರಯಾಣಿಕರನ್ನು ಭಯಭೀತಗೊಳಿಸಿದೆ. ಬಸ್ ತನ್ನ ಮಾರ್ಗದಲ್ಲೇ ಸಾಗುತ್ತಿತ್ತು, ಆದರೆ ಟ್ರಕ್ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದಿದೆ. ಈ ಸಮಯದಲ್ಲಿ ಆಟೋ ರಿಕ್ಷಾವೊಂದು ಬಸ್ಸಿನ ಮುಂಭಾಗ ಬಂದ ಕಾರಣ ಬಸ್ ಮತ್ತು ಆಟೋ-ರಿಕ್ಷಾ ಡಿಕ್ಕಿ ಹೊಡೆದವು,” ಎಂದು ಚೌಧರಿ ಫೇಸ್‌ಬುಕ್ ಪೋಸ್ಟ್‌ ನಲ್ಲಿ ಬಸ್‌ನ ಫೋಟೋಗಳನ್ನು ಹಂಚಿಕೊಂಡು ವಿವರಿಸಿದ್ದಾರೆ.

ಘಟನೆಯ ನಂತರ, ಸ್ಥಳೀಯರು ಬಸ್‌ನಲ್ಲಿದ್ದ ಭಾರತೀಯ ಪ್ರಯಾಣಿಕರಿಗೆ ಬೆದರಿಕೆ ಹಾಕಲು ಪ್ರಾರಂಭಿಸಿದರು ಎಂದು ಚೌಧರಿ ಹೇಳಿದ್ದಾರೆ. ಅವರು ಭಾರತ ವಿರೋಧಿ ಘೋಷಣೆಗಳನ್ನು ಕೂಗಿದರು, ನಿಂದನೀಯ ಪದಗಳನ್ನು ಬಳಸಿದರು ಮತ್ತು ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದರು. ಈ ಕೃತ್ಯವನ್ನು ಖಂಡಿಸಿದ ಚೌಧರಿ ಭಾರತೀಯ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳನ್ನು ಒತ್ತಾಯಿಸಿದರು.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-dee

Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ

army

Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ಶಿಕ್ಷೆ ಪ್ರಕಟ

RG ಕರ್‌ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್‌ ರಾಯ್ ಗೆ ಜೀವಾವಧಿ ಶಿಕ್ಷೆ

ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.