2017ರಲ್ಲಿ ಭಾರತ ಶೇ.7.7ರ ಆರ್ಥಿಕಾಭಿವೃದ್ಧಿ ಕಾಣಲಿದೆ: ವಿಶ್ವಸಂಸ್ಥೆ
Team Udayavani, Jan 18, 2017, 11:59 AM IST
ಹೊಸದಿಲ್ಲಿ : ನೋಟು ಅಪನಗದೀಕರಣ ಕ್ರಮದ ಹೊರತಾಗಿಯೂ ಭಾರತ ಅತ್ಯಂತ ವೇಗದಲ್ಲಿ ಅಭಿವೃದ್ಧಿ ಹೊಂದುತ್ತಿರುವ ವಿಶ್ವದ ಬೃಹತ್ ಆರ್ಥಿಕತೆಯಾಗಿದ್ದು 2017ರ ಹಣಕಾಸು ವರ್ಷದಲ್ಲಿ ಇದು ಶೇ.7.7ರ ಬೆಳವಣಿಗೆಯನ್ನು ಕಾಣಲಿದೆ ಎಂದು ವಿಶ್ವಸಂಸ್ಥೆಯ ವರದಿ ತಿಳಿಸಿದೆ.
ವಿಶ್ವಸಂಸ್ಥೆಯ ಜಾಗತಿಕ ಆರ್ಥಿಕ ಮತ್ತು ಭವಿಷ್ಯ ಕುರಿತಾದ 2017ರ ವರದಿಯನ್ನು ನಿನ್ನೆ ಮಂಗಳವಾರ ಬಿಡುಗಡೆ ಮಾಡಲಾಗಿದೆ. ಈ ವರದಿಯಲ್ಲಿ 2017ರ ಭಾರತದ ಆರ್ಥಿಕಾಭಿವೃದ್ಧಿಯು ಶೇ.7.7ರ ಬೆಳವಣಿಗೆಯನ್ನು ಕಾಣಲಿದೆ. ಇದರ ಪರಿಣಾಮವಾಗಿ ಖಾಸಗಿ ಬಳಕೆಯು ಬಲಗೊಳ್ಳಲಿದ್ದು ಆ ಮೂಲಕ ಗಮನಾರ್ಹ ಆಂತರಿಕ ಸುಧಾರಣೆಗಳು ಜಾರಿಗೆ ಬರುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.
2018ರ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು ಶೇ.7.6 ಪ್ರಮಾಣದಲ್ಲಿ ದಾಖಲಾಗಲಿದೆ ಎಂದು ವರದಿಯು ಅಂದಾಜು ಮಾಡಿದೆ.
ಎರಡು ದಿನಗಳ ಹಿಂದಷ್ಟೇ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಯು, ನೋಟು ಅಪನಗದೀಕರಣದ ಪರಿಣಾಮವಾಗಿ ಭಾರತದ ಆರ್ಥಿಕಾಭಿವೃದ್ಧಿಯನ್ನು ಶೇ.7.6ರಿಂದ ಶೇ.6.6 ಮಟ್ಟಕ್ಕೆ ಇಳಿಸಿತ್ತು. ಇದಕ್ಕೆ ವ್ಯತಿರಿಕ್ತವಾಗಿ ವಿಶ್ವಸಂಸ್ಥೆಯ ವರದಿಯು ಭಾರತದ ಆರ್ಥಿಕ ಪ್ರಗತಿ ಶೇ.7.7ರ ಪ್ರಮಾಣದಲ್ಲಿ 2017ರಲ್ಲಿ ದಾಖಲಾಗಲಿದೆ ಎಂದು ಹೇಳಿರುವುದು ಗಮನಾರ್ಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wikipedia: ಪಕ್ಷಪಾತ, ತಪ್ಪು ಮಾಹಿತಿ ದೂರು: ವಿಕಿಪೀಡಿಯಾಗೆ ಕೇಂದ್ರದಿಂದ ನೋಟಿಸ್
Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.