ಬ್ಲೂವೇಲ್ ತಡೆಗೆ ಸರಕಾರದ ಗೇಮ್!
Team Udayavani, Sep 24, 2018, 12:37 PM IST
ಹೊಸದಿಲ್ಲಿ: ಮಾರಣಾಂತಿಕ ಬ್ಲೂವೇಲ್ ಹಾಗೂ ಮೋಮೋ ಚಾಲೆಂಜ್ ಅಪ್ಲಿಕೇಶನ್ಗಳಿಗೆ ಮಕ್ಕಳು ಮರುಳಾಗುತ್ತಿರುವುದನ್ನು ತಡೆಯಲು ಕೇಂದ್ರ ಸರಕಾರ ಮಕ್ಕಳಿಗಾಗಿ ಗೇಮ್ ಅಪ್ಲಿಕೇಶನ್ ಒಂದನ್ನು ಬಿಡುಗಡೆ ಮಾಡಿದೆ. ಇದನ್ನು ಸೈಬರ್ ಟ್ರಿವಿಯಾ ಎಂದು ಕರೆಯಲಾಗಿದ್ದು, ಬಹು ಆಯ್ಕೆ ಪ್ರಶ್ನೆ ಗಳನ್ನು ಇದು ಹೊಂದಿರುತ್ತದೆ. ಸರಿ ಉತ್ತರ ನೀಡಿದರೆ ಪಾಯಿಂಟ್ಗಳನ್ನು ನೀಡಲಾಗುತ್ತದೆ ಎಂದು ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗ ವಿವರಿಸಿದೆ.
ಮಕ್ಕಳು ಈಗ ಪಾಲಕರಿಗಿಂತ ಚುರುಕಾಗಿರುತ್ತಾರೆ. ಪಾಲಕರಿಗೆ ಗೊತ್ತಿಲ್ಲದಂತೆಯೇ ಇಂತಹ ಗೇಮ್ಗಳಿಗೆ ದಾಸರಾಗುತ್ತಾರೆ. ಪಾಲಕರ ಕಿವಿಮಾತನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಮಕ್ಕಳು ಇರುವುದಿಲ್ಲ. ಹೀಗಾಗಿ ಇಂಥದ್ದೊಂದು ಗೇಮ್ ಅಭಿವೃದ್ಧಿಪಡಿಸಲು ನಿರ್ಧರಿಸಿದೆವು ಎಂದು ಎನ್ಸಿಪಿಸಿಆರ್ ಸದಸ್ಯ ಯಶವಂತ ಜೈನ್ ಹೇಳಿದ್ದಾರೆ. ಶೀಘ್ರದಲ್ಲೇ ಇದು ಆ್ಯಪ್ಸ್ಟೋರ್ಗಳಲ್ಲಿ ಲಭ್ಯವಿರಲಿದೆ. ಇದನ್ನು ವರ್ತನೆ ಬದಲಾವಣೆ ತಂತ್ರವನ್ನು ಆಧರಿಸಿ ಅಭಿವೃದ್ಧಿಪಡಿಸಲಾಗಿದೆ. ಧನಾತ್ಮಕ ವರ್ತನೆಗೆ ಪ್ರೋತ್ಸಾಹ ನೀಡಿ, ಋಣಾತ್ಮಕ ವರ್ತನೆಯ ಬಗ್ಗೆ ನಿರುತ್ಸಾಹ ಮೂಡಿಸುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.