ಭಾರತೀಯ ಮಾಧ್ಯಮ ನನಗಿಷ್ಟ: ಟ್ರಂಪ್ ಜೂನಿಯರ್
Team Udayavani, Feb 25, 2018, 8:15 AM IST
ಹೊಸದಿಲ್ಲಿ: “ನಾನು ಭಾರತೀಯ ಮಾಧ್ಯಮಗಳನ್ನು ಇಷ್ಟಪಡುತ್ತೇನೆ. ಏಕೆಂದರೆ, ಅಮೆರಿಕದ ಆಕ್ರಮಣಕಾರಿ ಹಾಗೂ ಒರಟು ಮಾಧ್ಯಮ ಗಳಿಗೆ ಹೋಲಿಸಿದರೆ ಭಾರತೀಯ ಮಾಧ್ಯಮಗಳು ಸೌಮ್ಯ ಮತ್ತು ಸ್ನೇಹಪರ ವಾಗಿವೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪುತ್ರ ಡೊನಾಲ್ಡ್ ಟ್ರಂಪ್ ಜೂನಿಯರ್ ತಿಳಿಸಿದ್ದಾರೆ. ಭಾರತ ಪ್ರವಾಸದಲ್ಲಿರುವ ಅವರು ಶನಿವಾರ ಜಾಗತಿಕ ಉದ್ದಿಮೆ ಶೃಂಗದಲ್ಲಿ ಮಾತನಾಡಿ, ಭಾರತೀಯರಿಗೆ ಎಷ್ಟೇ ಕಷ್ಟವಿದ್ದರೂ ಅವರ ಮೊಗದಲ್ಲಿ ಮಂದಹಾಸವಿರುತ್ತದೆ ಎಂದಿದ್ದಾರೆ. ಇದೇ ವೇಳೆ, ಹಿಂದಿನ ಘಟನೆಯೊಂದನ್ನು ಸ್ಮರಿಸಿ ಕೊಂಡ ಅವರು, “ನಾನು 10 ವರ್ಷಗಳ ಹಿಂದೆಯೂ ಇಲ್ಲಿಗೆ ಬಂದಿದ್ದೆ. ಭಾರತೀಯರ ನಗುವಿನ ಬಗ್ಗೆ ಮಾತನಾಡಿದ್ದೆ. ನನ್ನ ಹೇಳಿಕೆ ಎಲ್ಲರಿಗೂ ಅರ್ಥವಾಗಿತ್ತು. ಆದರೆ, ಮಾರನೇ ದಿನ ವಾಷಿಂಗ್ಟನ್ ಪೋಸ್ಟ್ ಪತ್ರಿಕೆಯು- “ಡೊನಾಲ್ಡ್ ಟ್ರಂಪ್ ಜೂನಿಯರ್ ಭಾರತದ ಬಡವರು ನಗುತ್ತಾರೆಂದು ಅವರನ್ನು ಇಷ್ಟಪಡುತ್ತಾರೆ’ ಎಂದು ಬರೆದಿತ್ತು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.