3 ತಿಂಗಳ ಬಳಿಕ ಶ್ರೀನಗರ್-ಬಾರಾಮುಲ್ಲಾ ನಡುವೆ ನ.12ರಿಂದ ರೈಲು ಸಂಚಾರ ಪುನರಾರಂಭ
Team Udayavani, Nov 11, 2019, 3:28 PM IST
ಜಮ್ಮು-ಕಾಶ್ಮೀರ: ಶ್ರೀನಗರ್ ಮತ್ತು ಬಾರಾಮುಲ್ಲಾ ನಡುವೆ ಮಂಗಳವಾರದಿಂದ ರೈಲು ಸಂಚಾರ ಪುನರಾರಂಭಗೊಳ್ಳಲಿದ್ದು, ಸೋಮವಾರ ಭಾರತೀಯ ರೈಲ್ವೆ ಇಲಾಖೆ ಈ ಮಾರ್ಗದ ನಡುವೆ ಪ್ರಾಯೋಗಿಕ ರೈಲು ಸಂಚಾರ ನಡೆಸಿದೆ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಶ್ರೀನಗರ್-ಬಾರಾಮುಲ್ಲಾ ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಇಂದು ನಡೆದ ಪ್ರಾಯೋಗಿಕ ಸಂಚಾರದ ವೇಳೆ ರೈಲ್ವೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿಗಳು ಕೂಡಾ ಉಪಸ್ಥಿತರಿದ್ದರು.
ಸುಮಾರು ಮೂರು ತಿಂಗಳಿಗಿಂತಲೂ ಹೆಚ್ಚು ಸಮಯ ಈ ಮಾರ್ಗದಲ್ಲಿ ರೈಲ್ವೆ ಸಂಚಾರ ರದ್ದು ಮಾಡಲಾಗಿದ್ದು, ಇದೀಗ ಭಾರತೀಯ ರೈಲ್ವೆ ಇಲಾಖೆ ಮತ್ತೆ ರೈಲು ಸಂಚಾರ ಪುನರಾರಂಭಿಸುವ ಮೂಲಕ ಜನಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದೆ ಎಂದು ವರದಿ ವಿವರಿಸಿದೆ.
ಶ್ರೀನಗರ್-ಬಾರಾಮುಲ್ಲಾ ನಡುವಿನ ರೈಲು ಸಂಚಾರ ಸ್ಥಗಿತಗೊಳಿಸಿದ್ದರಿಂದ ರೈಲ್ವೆ ಇಲಾಖೆಗೆ ಕೋಟ್ಯಂತರ ರೂಪಾಯಿ ನಷ್ಟವಾಗಿತ್ತು. ಆದರೆ ಭದ್ರತಾ ದೃಷ್ಟಿಯಿಂದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ
Assembly Election: ಮಹಾರಾಷ್ಟ್ರಕ್ಕೆ ಫಡ್ನವೀಸ್ ಸಿಎಂ?: 2-3 ದಿನಗಳಲ್ಲೇ ಪ್ರಮಾಣವಚನ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಮೋಕ್ಷಿತಾ ಎರಡು ತಲೆ ನಾಗರಹಾವು ಎಂದ ತ್ರಿವಿಕ್ರಮ್; ನಾಮಿನೇಟ್ ವಿಚಾರವಾಗಿ ವಾಗ್ವಾದ
Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್‌ಗೆ ಬೆಂಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.