ಹೊಸ ನೇಮಕಾತಿಗೆ ರೈಲ್ವೆ ರೆಡ್‌ಸಿಗ್ನಲ್
Team Udayavani, Jun 23, 2020, 6:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಕೋವಿಡ್ 19 ಸೃಷ್ಟಿಸಿರುವ ಆರ್ಥಿಕ ಬಿಕ್ಕಟ್ಟಿನ ಬಿಸಿ ರೈಲ್ವೇ ಇಲಾಖೆಗೂ ತಟ್ಟಿದೆ. ವೆಚ್ಚಗಳಿಗೆ ನಿಯಂತ್ರಣ ಹೇರಿ, ಗಳಿಕೆಯ ವರ್ಧನೆಗೆ ಹೊಸ ದಾರಿ ಕಂಡುಕೊಳ್ಳಲು ರೈಲ್ವೆ ಇಲಾಖೆ ಹಲವು ಕಠಿನ ಕ್ರಮಗಳಿಗೆ ಮುಂದಾಗಿದೆ.
ಹೊಸ ಹುದ್ದೆಗಳ ರಚನೆ ಹಾಗೂ ನೇಮಕಾತಿಯನ್ನು ಸದ್ಯದ ಮಟ್ಟಿಗೆ ನಿಲ್ಲಿಸಿ, ಲಭ್ಯವಿರುವ ಸಿಬ್ಬಂದಿಯಿಂದಲೇ ಕೆಲಸ ಮಾಡಿಸಿಕೊಳ್ಳುವಂತೆ ಸೂಚಿಸಿ ರೈಲ್ವೆ ಹಣಕಾಸು ಆಯುಕ್ತರು ಎಲ್ಲ ವಲಯಗಳ ಪ್ರಧಾನ ವ್ಯವಸ್ಥಾಪಕರಿಗೆ ಪತ್ರ ಬರೆದಿದ್ದಾರೆ.
‘ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಮೇ ಅಂತ್ಯದ ಸಾರಿಗೆ ಆದಾಯ ಶೇ.58ರಷ್ಟು ಕುಸಿದಿದೆ. ಮಾನವ ಶಕ್ತಿಯ ಸದ್ಬಳಕೆಗೆ ಕಾರ್ಯಾಗಾರ, ಹೊರಗುತ್ತಿಗೆಯ ಕೆಲಸ ಸಿಎಸ್‌ಆರ್‌ಗೆ ವರ್ಗಾವಣೆ, ಎಲ್ಲ ದಾಖಲೆಗಳ ಡಿಜಿಟಲೀಕರಣ ಮುಂತಾದ ಕಾರ್ಯತಂತ್ರಗಳನ್ನು ರೂಪಿಸಬೇಕಿದೆ.
ಸುರಕ್ಷಿತ ಸಂಬಂಧಿತ ಹುದ್ದೆಗಳನ್ನು ಹೊರತುಪಡಿಸಿ, ಬೇರಾವುದೇ ನೇಮಕಾತಿ ಮಾಡಿಕೊಳ್ಳುವಂತಿಲ್ಲ. ಇಂಧನ ಬಳಕೆ ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
GST: ಜೊಮ್ಯಾಟೊ, ಸ್ವಿಗ್ಗಿ ತಾಣಗಳ ಮೇಲೆ ಶೇ.5 ಜಿಎಸ್‌ಟಿ ಕಡಿತ?
Ambedkar Remarks: ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.