ರೈಲಲ್ಲಿ ಲಗೇಜ್ ಮಿತಿ ಮೀರಿದರೆ ಭಾರೀ ದಂಡ
Team Udayavani, Jun 6, 2018, 7:45 AM IST
ಹೊಸದಿಲ್ಲಿ: ರೈಲು ಪ್ರಯಾಣಿಕರೇ ಸ್ವಲ್ಪ ಗಮನಕೊಡಿ. ವಿಮಾನದಲ್ಲಿ ಇರುವಂತೆಯೇ ಇನ್ನು ಮುಂದೆ ರೈಲು ಪ್ರಯಾಣದ ವೇಳೆಯೂ ಮಿತಿಗಿಂತ ಹೆಚ್ಚುವರಿ ಲಗೇಜ್ ಕೊಂಡೊಯ್ಯುವಂತಿಲ್ಲ. ಸುಮಾರು 30 ವರ್ಷಗಳ ಹಿಂದಿನ ಬ್ಯಾಗೇಜ್ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ರೈಲ್ವೇ ಇಲಾಖೆ ಈಗ ಮುಂದಾಗಿದೆ. ನಿಗದಿತ ಮಿತಿಗಿಂತ ಹೆಚ್ಚುವರಿ ಲಗೇಜ್ ಹೊಂದಿದ್ದರೆ ಅಂಥವರಿಗೆ ನಿಗದಿತ ಮೊತ್ತದ 6 ಪಟ್ಟು ದಂಡ ವಿಧಿಸಲು ನಿರ್ಧರಿಸಲಾಗಿದೆ. ಸ್ಲೀಪರ್ ದರ್ಜೆಯಲ್ಲಿ ಒಬ್ಬ ಪ್ರಯಾಣಿಕ ಗರಿಷ್ಠ 40 ಕೆ.ಜಿ.ಯಷ್ಟು ಲಗೇಜ್ ಉಚಿತವಾಗಿ ಕೊಂಡೊಯ್ಯಬಹುದಾಗಿದ್ದು, ಶುಲ್ಕ ಸಹಿತ ಗರಿಷ್ಠ 80 ಕೆ.ಜಿ.ಗಷ್ಟೇ ಅವಕಾಶವಿರಲಿದೆ. ಈಗಾಗಲೇ ಈ ನಿಯಮ ಚಾಲ್ತಿಯಲ್ಲಿದ್ದರೂ ಅದನ್ನು ಯಾರೂ ಪಾಲಿಸುತ್ತಿರಲಿಲ್ಲ. ಇನ್ನು ಮುಂದೆ ಎಲ್ಲರೂ ಪಾಲಿಸುವಂತೆ ಮಾಡುವುದೇ ಇದರ ಉದ್ದೇಶ ಎಂದು ರೈಲ್ವೇ ಮಂಡಳಿ ಮಾಹಿತಿ ಮತ್ತು ಪ್ರಚಾರ ವಿಭಾಗದ ನಿರ್ದೇಶಕ ವೇದ್ ಪ್ರಕಾಶ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.