ಕೋವಿಡ್ 19: ಕ್ವಾರಂಟೈನ್, ಐಸೋಲೇಶನ್ ಗಾಗಿ ರೈಲ್ವೆ ಇಲಾಖೆಯಿಂದ 20 ಸಾವಿರ ಕೋಚ್ ಬಳಕೆ
20 ಸಾವಿರ ಕೋಚ್ ಗಳನ್ನು ಕೋವಿಡ್ ಸೋಂಕಿತರಿಗೆ ಕ್ವಾರಂಟೈನ್ ಮತ್ತು ಐಸೋಲೇಶನ್ ಗಾಗಿ ಬಳಸುವಂತೆ ಮಾಡಲು ಬದಲಾವಣೆ
Team Udayavani, Mar 31, 2020, 5:11 PM IST
Representative Image
ನವದೆಹಲಿ: ಮಾರಣಾಂತಿಕ ಕೋವಿಡ್ 19 ವೈರಸ್ ಜಗತ್ತಿನಾದ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ ರೈಲ್ವೆ ಇಲಾಖೆ ಸುಮಾರು 20 ಸಾವಿರ ಕೋಚ್ ಗಳನ್ನು ಕೋವಿಡ್ ಸೋಂಕಿತರಿಗೆ ಕ್ವಾರಂಟೈನ್ ಮತ್ತು ಐಸೋಲೇಶನ್ ಗಾಗಿ ಬಳಸುವಂತೆ ಮಾಡಲು ಬದಲಾವಣೆ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಮುಂಜಾಗ್ರತಾ ಕ್ರಮವಾಗಿ 3.2 ಲಕ್ಷಕ್ಕೂ ಅಧಿಕ ಕೋವಿಡ್ ಸೋಂಕಿತರಿಗೆ ಅನುಕೂಲವಾಗುವಂತೆ ಕೋಚ್ ಗಳನ್ನು ಮಾರ್ಪಡಿಸಲಾಗುತ್ತಿದೆ. ಐಸೋಲೇಶನ್ ಗೆ ಬೇಕಾದ ಬೆಡ್ಸ್ ಗಳನ್ನು ಹಾಕಬೇಕಾಗುತ್ತದೆ. 5000 ಕೋಚ್ ಗಳನ್ನು ಮಾರ್ಪಡಿಸಲಾಗುತ್ತಿದ್ದು, ಪ್ರಾಥಮಿಕವಾಗಿ ಕ್ವಾರಂಟೈನ್ ಮತ್ತು ಐಸೋಲೇಶನ್ ಗಾಗಿ ಬಳಸಲು ಅನುಕೂಲವಾಗುವಂತೆ
ಸಿದ್ದಪಡಿಸಲಾಗುತ್ತಿದೆ.
5000 ಕೋಚ್ ಗಳಲ್ಲಿ 80 ಸಾವಿರ ಬೆಡ್ ಗಳನ್ನು ಹಾಕುವಷ್ಟು ಸಾಮರ್ಥ್ಯ ಹೊಂದಿದೆ. ಒಂದು ಕೋಚ್ ನಲ್ಲಿ 16 ಬೆಡ್ ಗಳನ್ನು ಹಾಕಿ ಐಸೋಲೇಶನ್ ಗೆ ಬಳಸುವ ನಿರೀಕ್ಷೆ ಇದೆ ಎಂದು ವರದಿ ಹೇಳಿದೆ. ಪ್ರಸ್ತುತ ಹವಾನಿಯಂತ್ರಣ ರಹಿತ ಕೋಚ್ ಗಳನ್ನು ಕ್ವಾರಂಟೈನ್ ಮತ್ತು ಐಸೋಲೇಶನ್ ಗೆ ಬಳಸಲು ಸಿದ್ಧತೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.