ಇನ್ನು ರೈಲಿನಲ್ಲೂ ತಲೆ ಮಸಾಜ್ ಮಾಡಿಸಿಕೊಳ್ಳಿ!
Team Udayavani, Jun 9, 2019, 6:00 AM IST
ನವದೆಹಲಿ: ರೈಲು ಪ್ರಯಾಣಿಕರಿಗೊಂದು ಸಿಹಿಸುದ್ದಿ. ಇನ್ನು ಮುಂದೆ ನೀವು ರೈಲಲ್ಲಿ ಪ್ರಯಾಣಿಸುತ್ತಿರುವಂತೆಯೇ ಹಾಯಾಗಿ ಕುಳಿತುಕೊಂಡು ಮಸಾಜ್ ಮಾಡಿಸಿಕೊಳ್ಳಬಹುದು!
ಭಾರತೀಯ ರೈಲ್ವೆಯ ಇತಿಹಾಸದಲ್ಲೇ ಮೊದಲ ಬಾರಿಗೆ ರೈಲಿನಲ್ಲಿ ಪ್ರಯಾಣಿಕರಿಗೆ ಅಂಗಮರ್ದನ(ಮಸಾಜ್) ಸೌಲಭ್ಯ ಕಲ್ಪಿಸಲು ಇಲಾಖೆ ನಿರ್ಧರಿಸಿದೆ. ಅದರಂತೆ, ಇಂದೋರ್‌ನಿಂದ ಹೊರಡುವ 39 ರೈಲುಗಳಲ್ಲಿ ಈ ಸೇವೆಯನ್ನು ಕಲ್ಪಿಸಲಾಗಿದೆ.
ಆದಾಯದ ಉದ್ದೇಶ: ಹೆಚ್ಚುವರಿ ಆದಾಯ ಗಳಿಕೆ ಹಾಗೂ ಪ್ರಯಾಣಿಕರ ಸಂಖ್ಯೆಯನ್ನೂ ಹೆಚ್ಚಿಸುವುದು ಈ ಯೋಜನೆಯ ಉದ್ದೇಶ. ಇದರಿಂದಾಗಿ ವಾರ್ಷಿಕವಾಗಿ ರೈಲ್ವೆಗೆ ಹೆಚ್ಚುವರಿ 20 ಲಕ್ಷ ರೂ. ಆದಾಯ ಬರಲಿದೆ. ಜತೆಗೆ, ಸುಮಾರು 20 ಸಾವಿರ ಹೆಚ್ಚುವರಿ ಟಿಕೆಟ್‌ಗಳ ಮಾರಾಟದಿಂದಾಗಿ 90 ಲಕ್ಷ ರೂ. ಆದಾಯ ಪಡೆಯುವ ಸಾಧ್ಯತೆಯಿದೆ ಎಂದು ರೈಲ್ವೆ ಮಂಡಳಿ ತಿಳಿಸಿದೆ.
ಶೀಘ್ರವೇ ಆರಂಭ: ಮುಂದಿನ 15-20 ದಿನಗಳಲ್ಲೇ ಈ ಸೇವೆ ಆರಂಭವಾಗಲಿದ್ದು, ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಸೇವೆ ನೀಡಲಾಗುತ್ತದೆ. ತಲೆ ಮಸಾಜ್ ಮತ್ತು ಪಾದದ ಮಸಾಜ್‌ಗೆ ತಲಾ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಪ್ರತಿ ರೈಲಲ್ಲೂ 3-5 ಮಸಾಜ್ ಸೇವಾದಾರರು ಲಭ್ಯವಿರಲಿದ್ದಾರೆ. ರೈಲ್ವೆಯು ಇವರಿಗೆ ಗುರುತಿನ ಚೀಟಿ ಒದಗಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.