Diplomatic crisis: ಕೆನಡಾ ಪ್ರಜೆಗಳಿಗೆ ಭಾರತೀಯ ವೀಸಾ ಸ್ಥಗಿತಗೊಳಿಸಿದ ಸರ್ಕಾರ
Team Udayavani, Sep 21, 2023, 12:53 PM IST
ಹೊಸದಿಲ್ಲಿ: ಜೂನ್ ನಲ್ಲಿ ಕೆನಡಾದಲ್ಲಿ ನಡೆದ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಗೆ ಭಾರತೀಯ ಸರ್ಕಾರಿ ಏಜೆಂಟರನ್ನು ಸಂಪರ್ಕಿಸಲಾಗಿದೆ ಎಂಬ ಆರೋಪದ ಮೇಲೆ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ವಿವಾದದ ನಡುವೆ ಭಾರತವು ಮುಂದಿನ ಸೂಚನೆ ಬರುವವರೆಗೆ ಕೆನಡಾದ ಪ್ರಜೆಗಳಿಗೆ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಿದೆ.
ವೀಸಾ ಸಲಹಾ ಸೇವೆಗಳನ್ನು ಒದಗಿಸುವ ಭಾರತದಲ್ಲಿನ ಆನ್‌ಲೈನ್ ವೀಸಾ ಅರ್ಜಿ ಕೇಂದ್ರವಾದ ಬಿಎಲ್ಎಸ್ ಇಂಟರ್ ನ್ಯಾಷನಲ್ ನ ಸೂಚನೆಯು ತನ್ನ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿದೆ, “ಭಾರತೀಯ ಮಿಷನ್‌ನಿಂದ ಪ್ರಮುಖ ಸೂಚನೆ: ಕಾರ್ಯಾಚರಣೆಯ ಕಾರಣಗಳಿಂದಾಗಿ, 21 ಸೆಪ್ಟೆಂಬರ್ 2023 ರಿಂದ ಜಾರಿಗೆ ಬರುವಂತೆ ಮುಂದಿನ ಸೂಚನೆ ತನಕ, ಭಾರತೀಯ ವೀಸಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಬರೆಯಲಾಗಿದೆ.
ಖಲಿಸ್ತಾನಿ ನಾಯಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯೊಂದಿಗೆ ಕೆನಡಾದ ಪ್ರಧಾನ ಮಂತ್ರಿಯ ಸಂಭಾವ್ಯ ಸಂಪರ್ಕದ ಬಗ್ಗೆ ಭಾರತದ ವಿರುದ್ಧ ಆರೋಪ ಮಾಡಿದ ಮೂರು ದಿನಗಳ ನಂತರ ಈ ಬೆಳವಣಿಗೆಗಳು ನಡೆದಿದೆ.
ಕೆನಡಾದ ಪ್ರಧಾನಿ ಟ್ರುಡೊ ಅವರು ಸೋಮವಾರ ಸಂಸತ್ತಿನಲ್ಲಿ ಮಾತನಾಡುತ್ತಾ, ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ಹರ್ದೀಪ್ ಸಿಂಗ್ ನಿಜ್ಜರ್ ಅವರ ಮಾರಣಾಂತಿಕ ಗುಂಡಿನ ದಾಳಿಯ ಹಿಂದೆ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದರು.
ಸರ್ರೆಯ ಗುರು ನಾನಕ್ ಸಿಖ್ ಗುರುದ್ವಾರದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಕೆನಡಾದ ಪ್ರಜೆಯ ಹತ್ಯೆಯನ್ನು “ಭಾರತ ಸರ್ಕಾರದ ಏಜೆಂಟರು” ನಡೆಸಿದ್ದಾರೆ ಎನ್ನಲು ತನ್ನ ದೇಶದ ರಾಷ್ಟ್ರೀಯ ಭದ್ರತಾ ಅಧಿಕಾರಿಗಳು ಕಾರಣಗಳನ್ನು ಹೊಂದಿದ್ದಾರೆ ಎಂದು ಟ್ರೂಡೊ ಹೇಳಿದ್ದಾರೆ.
ಭಾರತ ಸರ್ಕಾರ ಈ ಆರೋಪವನ್ನು ತಳ್ಳಿ ಹಾಕಿದ್ದು, ಅಧಿಕೃತ ಹೇಳಿಕೆಯಲ್ಲಿ, ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) “ನಾವು ತಮ್ಮ ಸಂಸತ್ತಿನಲ್ಲಿ ಕೆನಡಾದ ಪ್ರಧಾನಿಯವರ ಹೇಳಿಕೆಯನ್ನು ನೋಡಿದ್ದೇವೆ ಮತ್ತು ತಿರಸ್ಕರಿಸಿದ್ದೇವೆ ಮತ್ತು ಅವರ ವಿದೇಶಾಂಗ ಸಚಿವರ ಹೇಳಿಕೆಯನ್ನು ಸಹ ತಿರಸ್ಕರಿಸಿದ್ದೇವೆ” ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು
NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ
Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ
Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ
Congress: ಜಮೀರ್ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.