Anju: ಇಸ್ಲಾಂಗೆ ಮತಾಂತರವಾಗಿ ಪಾಕಿಸ್ತಾನದ ನಸ್ರುಲ್ಲಾ ಜೊತೆ ಮದುವೆಯಾದ ಭಾರತದ ಅಂಜು; ವರದಿ

ಫೇಸ್‌ ಬುಕ್‌ ನಿಂದ ಪರಿಚಯವಾಗಿದ್ದ ಗೆಳೆಯನನ್ನು ನೋಡಲು ಪಾಕ್‌ ಗೆ ತೆರಳಿದ್ದ ಅಂಜು

Team Udayavani, Jul 25, 2023, 4:57 PM IST

Anju: ಇಸ್ಲಾಂಗೆ ಮತಾಂತರವಾಗಿ ಪಾಕಿಸ್ತಾನದ ನಸ್ರುಲ್ಲಾ ಜೊತೆ ಮದುವೆಯಾದ ಭಾರತದ ಅಂಜು; ವರದಿ

ನವದೆಹಲಿ: ಫೇಸ್‌ಬುಕ್‌ನಿಂದ ಪರಿಚಯವಾದ ವ್ಯಕ್ತಿಯನ್ನು ಭೇಟಿಯಾಗಲು ಪಾಕಿಸ್ತಾನಕ್ಕೆ ತಲುಪಿದ್ದ ಭಾರತೀಯ ವಿವಾಹಿತ ಮಹಿಳೆ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ ವಿವಾಹವಾಗಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮ ವರದಿ ಮಾಡಿರುವುದಾಗಿ “ಇಂಡಿಯಾ ಟುಡೇ” ವರದಿ ಹೇಳಿದೆ.

ಘಟನೆ ಹಿನ್ನೆಲೆ:  ರಾಜಸ್ಥಾನದ ಭಿವಾಡಿ ಜಿಲ್ಲೆಯ ವಿವಾಹಿತ ಮಹಿಳೆ ಅಂಜು ಫೇಸ್‌ ಬುಕ್‌ ನಲ್ಲಿ ಪರಿಚಯವಾಗಿರುವ ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ನಸ್ರುಲ್ಲಾ ಅವರನ್ನು ಭೇಟಿಯಾಗಲು ಪಾಕ್‌ ಗೆ ತಲುಪಿದ್ದರು. ಆಕೆ ಪ್ರಯಾಣದ ಎಲ್ಲಾ ದಾಖಲೆಗಳನ್ನು ಹಿಡಿದುಕೊಂಡು ಪಾಕಿಸ್ತಾನಕ್ಕೆ ತಲುಪಿದ್ದಾಳೆ. ಅಂಜು ವಾಟ್ಸಾಪ್‌ ಮೂಲಕ ಕರೆ ಮಾಡಿ ನಾನು ಲಾಹೋರ್‌ ನಲ್ಲಿದ್ದೇನೆ. 3-4 ದಿನದಲ್ಲಿ ಬರುವುದಾಗಿ ಹೇಳಿದ್ದಳು ಎಂದು ಆಕೆಯ ಪತಿ ಅರವಿಂದ್‌ ಮಾಧ್ಯಮಕ್ಕೆ ತಿಳಿಸಿದ್ದರು.

ಇದಾದ ಬಳಿಕ ಅಂಜು ಶೀಘ್ರದಲ್ಲಿ ಭಾರತಕ್ಕೆ ಬರುತ್ತೇನೆ. ಇಲ್ಲಿ ಮದುವೆಯೊಂದರಲ್ಲಿ ಭಾಗಿಯಾಗಲು ಬಂದಿದ್ದೇನೆ ಎಂದು ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿತ್ತು.

ಆದರೆ ಇದೀಗ ಪಾಕ್‌ ಗೆ ತೆರಳಿದ್ದ ಅಂಜು ಇಸ್ಲಾಂ ಧರ್ಮಕ್ಕೆ ಮತಾಂತರವಾಗಿ “ಫಾತಿಮಾ” ಎಂದು ಬದಲಾಯಿಸಿಕೊಂಡು ನಸ್ರುಲ್ಲಾ ಅವರೊಂದಿಗೆ ವಿವಾಹವಾಗಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳು ವರದಿ ಮಾಡಿವೆ.

ಪಾಕಿಸ್ತಾನದ ಅಪ್ಪರ್ ದಿರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಇಬ್ಬರ ನಿಕಾಹ್ ಕುಟುಂಬದ ಸಮ್ಮುಖದಲ್ಲಿ ನಡೆದಿದೆ. ಮದುವೆಯ ಬಳಿಕ  ನವ ಜೋಡಿಯು’ಅಂಜು ವೆಡ್ಸ್ ನಸ್ರುಲ್ಲಾ’ ಶೀರ್ಷಿಕೆಯ ವಿಡಿಯೋವನ್ನು ಮಾಡಿದೆ. ಈ ವಿಡಿಯೋ ಟ್ವಿಟರ್‌ ನಲ್ಲಿ ಹರಿದಾಡುತ್ತಿದ್ದು ಭಾರೀ ವೈರಲ್‌ ಆಗುತ್ತಿದೆ. ಇದರಲ್ಲಿ ಅಂಜು ಹಾಗೂ ನಸ್ರುಲ್ಲಾ ಪತಿ – ಪತ್ನಿಯರಾಗಿ ಪರ್ವತ ತಾಣಗಳಲ್ಲಿ ಸುತ್ತಾಡುವ ದೃಶ್ಯವಿದೆ.

ಮಲಕಂದ್ ವಿಭಾಗದ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ನಾಸಿರ್ ಮೆಹಮೂದ್ ಸತ್ತಿ ಅವರು ಅಂಜು (35) ಮತ್ತು ನಸ್ರುಲ್ಲಾ (29) ಅವರ ನಿಕಾಹ್‌ ಆಗಿದ್ದು ನಿಜವೆಂದಿದ್ದಾರೆ.  ಅಂಜು ಇಸ್ಲಾಂಗೆ ಮತಾಂತರಗೊಂಡ ನಂತರ ಫಾತಿಮಾ ಎಂದು ಬದಲಾಯಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಕೋರ್ಟ್‌ ನಲ್ಲಿ ಮದುವೆಯಾದ ಬಳಿಕ ಪೊಲೀಸ್‌ ಭದ್ರತೆಯಲ್ಲಿ ಅಂಜು ಅವರನ್ನು ಗಂಡನ ಮನೆಗೆ ಕರೆದುಕೊಂಡು ಹೋಗಲಾಯಿತೆಂದು ವರದಿ ತಿಳಿಸಿದೆ.

ವೀಸಾ ಅವಧಿ ಮುಗಿದ ಬಳಿಕ ಆಗಸ್ಟ್‌ 20 ರ ರಂದು ನಾನು ಭಾರತಕ್ಕೆ ಬರುತ್ತೇನೆ. ನಸ್ರುಲ್ಲಾ ಅವರೊಂದಿಗೆ ವಿವಾಹವಾಗುವ ಯೋಜನೆ ಇಲ್ಲವೆಂದು ಮಾಧ್ಯಮಗಳಿಗೆ ಅಂಜು ಹೇಳಿದ್ದರು.

ನಸ್ರುಲ್ಲಾ ಅವರು ಕೂಡ ಅಂಜು ಜೊತೆ ವಿವಾಹವಾಗುವ ವಿಚಾರ ಸುಳ್ಳು. ನಾವು ಇಬ್ಬರು 2019 ರಿಂದ ಫೇಸ್‌ ಬುಕ್‌ ಸ್ನೇಹಿತರು ಅಷ್ಟೇ. ಅವರು ಶೀಘ್ರದಲ್ಲಿ ಅವರ ದೇಶಕ್ಕೆ ಹೋಗಲಿದ್ದಾರೆ. ನನ್ನ ಕುಟುಂಬದ ಇತರ ಮಹಿಳಾ ಸದಸ್ಯರೊಂದಿಗೆ ಅಂಜು ಅವರ ಮನೆಯ ಪ್ರತ್ಯೇಕ ಕೋಣೆಯಲ್ಲಿ ವಾಸಿಸುತ್ತಿದ್ದಾರೆ ಎಂದು ಫೋನಿನ ಮೂಲಕ ಪಿಟಿಐಗೆ ಹೇಳಿದ್ದರು.

 

ಟಾಪ್ ನ್ಯೂಸ್

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

suicide

Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-mn

Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ

Video: ಮನಮೋಹನ್ ಸಿಂಗ್ ನಿಧನ ಹೇಳುವ ಬದಲು ಮೋದಿ ನಿಧನರಾಗಿದ್ದಾರೆ ಎಂದ ನ್ಯೂಸ್ ಆ್ಯಂಕರ್

Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

saavu

New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-eena

ವಚನ ಸಾಹಿತ್ಯದಲ್ಲಿ ಶ್ರೀಕೃಷ್ಣನ ಮಾತು: ಬೃಹತ್‌ ಗೀತೋತ್ಸವ ಕಾರ್ಯಕ್ರಮದಲ್ಲಿ ವೀಣಾ ಬನ್ನಂಜೆ

1-cocco

230 ರೂ. ಗಡಿ ದಾಟಿದ ಹಸಿ ಕೊಕ್ಕೊ ಧಾರಣೆ

1-sid-male

Udupi; ಸಿದ್ದಾಪುರ ಪರಿಸರದಲ್ಲಿ ಮಳೆ

1-adaa

ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ ದಳವಾಯಿ ನೇಮಕ

1-shadaa

ರಾಜ್ಯ ಸರಕಾರಿ ನೌಕರರ ಸಂಘ ಅಧ್ಯಕ್ಷ ಷಡಾಕ್ಷರಿ ಮರು ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.