ಭಾರತದಲ್ಲಿ ಚಿನ್ನದ ಬೇಡಿಕೆ ಶೇ. 70ರಷ್ಟು ಕುಸಿತ
Team Udayavani, Jul 30, 2020, 5:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುಂಬಯಿ: ರಾಷ್ಟ್ರ ರಾಜಧಾನಿಯಲ್ಲಿ ಚಿನ್ನದ ಬೆಲೆ ಗುರುವಾರ 10 ಗ್ರಾಂ.ಗೆ 118 ರೂ.ಗಳ ಏರಿಕೆಯಾಗುವ ಮೂಲಕ 53,860 ರೂ.ಗೆ ವಹಿವಾಟು ನಡೆಸಿದೆ.
ಬುಧವಾರದ ವಹಿವಾಟಿನಲ್ಲಿ ಹಳದಿ ಲೋಹವು 10 ಗ್ರಾಂ.ಗೆ 53,742 ರೂ.ನಲ್ಲಿತ್ತು. ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ 4 ಪೈಸೆ ಕುಸಿತ ಕಂಡಿದ್ದು, 74.84ಕ್ಕೆ ತಲುಪಿತ್ತು.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನವು ಟನ್‌ಗೆ 1,956 ಡಾಲರ್‌ನಷ್ಟು ಕಡಿಮೆಯಾಗಿದೆ.
ಹಳದಿ ಲೋಹದ ಬೆಲೆಯಲ್ಲಿ ಹಾವು ಏಣಿ ಆಟ ಇದೆ. ಬೆಳ್ಳಿದರವೂ ಏರಿಳಿತ ಕಾಣುತ್ತಿದೆ. ಅಂತಾರಾಷ್ಟ್ರೀಯ ಟ್ರೆಂಡ್, ಚಿನ್ನದ ಮೇಲಿನ ಆಮದು ಸುಂಕ ಮತ್ತು ಡಾಲರ್ ಎದುರು ರೂಪಾಯಿ ಮೌಲ್ಯವನ್ನು ಆಧರಿಸಿ ದಿನದ ಬಂಗಾರ ಹಾಗೂ ಬೆಳ್ಳಿ ದರ ನಿರ್ಧಾರವಾಗುತ್ತದೆ.
2020ರಲ್ಲಿ ಭಾರತದಲ್ಲಿ ಚಿನ್ನದ ಬೇಡಿಕೆ 26 ವರ್ಷಗಳ ಬಳಿಕ ಅತ್ಯಂತ ಕಡಿಮೆ ಮಟ್ಟಕ್ಕೆ ಇಳಿಯುವ ಸಾಧ್ಯತೆ ಇದೆ. ದೇಶೀಯ ಬುಲಿಯನ್ ಬೆಲೆಗಳು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಲಿವೆ. ಜನರ ಆದಾಯವು ಚಿನ್ನ ಖರೀದಿಯನ್ನು ಮೊಟಕುಗೊಳಿಸಬಹುದು ಎಂದು ವಿಶ್ವ ಚಿನ್ನದ ಮಂಡಳಿ (ಡಬ್ಲ್ಯುಜಿಸಿ) ಗುರುವಾರ ಹೇಳಿದೆ.
2019ರಲ್ಲಿ ಸ್ಥಳೀಯ ಮಾರುಕಟ್ಟೆಗೆ ಹೋಲಿಸಿದರೆ ಈ ವರ್ಷ ಶೇ. 35ರಷ್ಟು ಏರಿಕೆಯಾಗಿತ್ತು. 2020ರ ಮೊದಲಾರ್ಧದಲ್ಲಿ ದೇಶದಲ್ಲಿ ಚಿನ್ನದ ಬಳಕೆ ಶೇ. 56ರಷ್ಟು ಕುಸಿದು 165.6 ಟನ್‌ಗಳಿಗೆ ತಲುಪಿದೆ. ಅದರ ಜತೆಗೆ ಈ ಬಾರಿ ಲಾಕ್‌ಡೌನ್‌ನಿಂದಾಗಿ ಜೂನ್ ತ್ತೈಮಾಸಿಕದಲ್ಲಿ ಶೇ. 70ರಷ್ಟು ಬೇಡಿಕೆ ಕಡಿತಗೊಂಡು 63.7 ಟನ್‌ಗಳಿಗೆ ಸೀಮಿತಗೊಂಡಿದೆ. ಇದು ದಶಕಗಳಲ್ಲೇ ಮೊದಲು ಎಂದು ಡಬ್ಲ್ಯುಜಿಸಿ ವರದಿಯಲ್ಲಿ ತಿಳಿಸಿದೆ.
ವೈರಸ್ ಹರಡುವುದನ್ನು ತಡೆಯಲು ದೇಶದಲ್ಲಿ ಜಾರಿಯಾದ ಲಾಕ್‌ಡೌನ್ ಇದಕ್ಕೆ ಕಾರಣವಾಗಿದೆ. ಇದರಿಂದಾಗಿ ಲಕ್ಷಾಂತರ ಭಾರತೀಯರು ಉದ್ಯೋಗ ಕಳೆದುಕೊಂಡಿದ್ದಾರೆ. ಕೆಲವರು ಮಾಸಿಕ ವೇತನದಲ್ಲಿ ಕಡಿತ ಕಂಡಿದ್ದಾರೆ. ವಿವಾಹಗಳು ಮತ್ತು ಅಕ್ಷಯ ತೃತೀಯದಂತಹ ಪ್ರಮುಖ ಹಬ್ಬಗಳ ಕಾರಣದಿಂದಾಗಿ ಜೂನ್ ತ್ತೈಮಾಸಿಕದಲ್ಲಿ ಸಾಮಾನ್ಯವಾಗಿ ಹೆಚ್ಚಾಗಿರುತ್ತದೆ.
ಈ ಅವಧಿಯಲ್ಲಿ ಚಿನ್ನ ಕೊಂಡುಕೊಳ್ಳಲು ಜನರು ಮುಂದೆ ಬರುತ್ತಾರೆ. ಆದರೆ ಲಾಕ್‌ಡೌನ್ ಈ ವರ್ಷ ಅಂಗಡಿಯನ್ನು ತೆರೆಯಲು ಅವಕಾಶ ಮಾಡಿಕೊಡಲಿಲ್ಲ. ಈ ವರ್ಷದ ಮೊದಲಾರ್ಧದಲ್ಲಿ ದುರ್ಬಲ ಬೇಡಿಕೆಯಲ್ಲಿದ್ದ ಚಿನ್ನ ಮಾರುಕಟ್ಟೆಗೆ ಕೊರೊನಾ ಬಲವಾದ ಪೆಟ್ಟು ನೀಡಿದೆ. ಪರಿಣಾಮವಾಗಿ 2020ರಲ್ಲಿ ಭಾರತದ ಚಿನ್ನದ ಬೇಡಿಕೆಯನ್ನು 1994ರಿಂದ ಈಚೆಗೆ ಕನಿಷ್ಠ ಮಟ್ಟಕ್ಕೆ ಇಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.