ನೊಯ್ಡಾದಲ್ಲಿ ದೇಶದ ಅತಿದೊಡ್ಡ ಫಿಲಂ ಸಿಟಿ ನಿರ್ಮಾಣ: ಯೋಗಿ
Team Udayavani, Sep 20, 2020, 1:41 AM IST
ನೊಯ್ಡಾ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉತ್ತರಪ್ರದೇಶದ ಗೌತಮ ಬುದ್ಧ ನಗರದಲ್ಲಿ ದೇಶದ ಅತ್ಯಂತ ಸುಂದರ ಮತ್ತು ಬೃಹತ್ ಫಿಲಂ ಸಿಟಿಯನ್ನು ನಿರ್ಮಿಸುವುದಾಗಿ ಘೋಷಿಸಿದ್ದಾರೆ.
ಶನಿವಾರ ಮೀರತ್ ಜಿಲ್ಲೆ ಸೇರಿದಂತೆ ವಿವಿಧ ಪ್ರದೇಶಗಳ ಅಭಿವೃದ್ಧಿ ಯೋಜನೆಗಳನ್ನು ಪರಿಶೀಲಿಸಿದ ಸಿಎಂ ಯೋಗಿ ಆದಿತ್ಯನಾಥ್, ನೋಯ್ಡಾ ಪ್ರದೇಶದಲ್ಲಿ ದೇಶದಲ್ಲೇ ಅತಿದೊಡ್ಡ ಫಿಲಂ ಸಿಟಿ ನಿರ್ಮಿಸಲು ನಿರ್ಧರಿಸಿದ್ದು, ಜನರು ಇದಕ್ಕೆ ಸಿದ್ಧರಾಗಿ ಎಂದಿದ್ದಾರೆ. ಗೌತಮನಗರ ಫಿಲಂ ಸಿಟಿ ನಿರ್ಮಾಣಕ್ಕೆ ಸೂಕ್ತ ಸ್ಥಳ ಆಯ್ಕೆ ಮಾಡಿ, ಕಾರ್ಯಯೋಜನೆ ರೂಪಿಸಲು ತಿಳಿಸಲಾಗಿದೆ. ಅದಕ್ಕಾಗಿ ಅನುದಾನವನ್ನೂ ಮೀಸಲಿಡಲಾಗುವುದು ಎಂದೂ ಹೇಳಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅವರ ಘೋಷಣೆಯನ್ನು ಶ್ಲಾ ಸಿರುವ ಬಾಲಿವುಡ್ ನಟಿ ಕಂಗನಾ ರಣೌತ್ ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ನಮ್ಮ ಫಿಲಂ ಇಂಡಸ್ಟ್ರಿಯಲ್ಲಿ ಅನೇಕ ಸುಧಾರಣೆಗಳು ಆಗಬೇಕಿದೆ. ಮೊದಲು ಭಾರತೀಯರದ್ದೇ ಆದ ಚಲನಚಿತ್ರೋದ್ಯಮ ಬೇಕು. ಭಾರತದಲ್ಲಿ ಹಿಂದಿ ಚಿತ್ರರಂಗವನ್ನು ದೊಡ್ಡ ಚಿತ್ರರಂಗವೆಂದು ಬಿಂಬಿಸಲಾಗಿದೆ. ತೆಲಗುಚಿತ್ರರಂಗವೂ ದೊಡ್ಡದಾಗಿದ್ದು, ಎಷ್ಟೋ ಚಿತ್ರಗಳು ರಾಮೋಜಿ ಫಿಲಂ ಸಿಟಿಯಲ್ಲಿ ಚಿತ್ರೀಕರಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.