Budget; ಭಾರತೀಯರು ಮೋದಿ ಸರ್ಕಾರದ ಮೇಲೆ ನಂಬಿಕೆಯನ್ನು ಮರುಸ್ಥಾಪಿಸಿದ್ದಾರೆ: ನಿರ್ಮಲಾ
ಭಾರತದ ಆರ್ಥಿಕ ಬೆಳವಣಿಗೆಯು ಉಜ್ವಲವಾಗಲಿದೆ ಎಂದು ಭಾಷಣ ಆರಂಭಿಸಿದ ಹಣಕಾಸು ಸಚಿವೆ
Team Udayavani, Jul 23, 2024, 11:23 AM IST
ಹೊಸದಿಲ್ಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸತತ ಮೂರನೇ ಮೋದಿ ಸರ್ಕಾರದ ಮೊದಲ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ “ಭಾರತದ ಜನರು ಪ್ರಧಾನಿ ಮೋದಿ ನೇತೃತ್ವದ ಸರ್ಕಾರದ ಮೇಲೆ ತಮ್ಮ ನಂಬಿಕೆಯನ್ನು ಮರುಸ್ಥಾಪಿಸಿ ಐತಿಹಾಸಿಕ ಮೂರನೇ ಅವಧಿಗೆ ಮರು ಆಯ್ಕೆ ಮಾಡಿದ್ದಾರೆ” ಎಂದು ಹೇಳಿ ಬಜೆಟ್ ಮಂಡನೆ ಆರಂಭಿಸಿದರು.
“ಭಾರತದ ಆರ್ಥಿಕ ಬೆಳವಣಿಗೆಯು ಉಜ್ವಲವಾಗಲಿದೆ ಮತ್ತು ಮುಂದಿನ ವರ್ಷಗಳಲ್ಲಿ ಹಾಗೆಯೇ ಇರುತ್ತದೆ. ಭಾರತದ ಹಣದುಬ್ಬರವು ಕಡಿಮೆ ಮತ್ತು ಸ್ಥಿರವಾಗಿ 4% ಗುರಿಯತ್ತ ಸಾಗುತ್ತಿದೆ” ಎಂದು ಉಲ್ಲೇಖಿಸಿದ್ದಾರೆ.
ಮಧ್ಯಂತರ ಬಜೆಟ್‌ನಲ್ಲಿ ಪ್ರಸ್ತಾಪಿಸಿದಂತೆ, ನಾವು ಬಡವರು, ಮಹಿಳೆಯರು, ಯುವಕರು ಮತ್ತು ರೈತರ ಕುರಿತು ಯೋಚಿಸಬೇಕಾಗಿದೆ. ನಾವು ಎಲ್ಲ ಪ್ರಮುಖ ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಗಳನ್ನು ಘೋಷಿಸಿದ್ದೇವೆ ಮತ್ತು ವೆಚ್ಚದ ಮೇಲೆ ಕನಿಷ್ಠ 50% ಮಾರ್ಜಿನ್‌ಗೆ ಭರವಸೆ ನೀಡಿದ್ದೇವೆ. ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆಯನ್ನು 5 ವರ್ಷಗಳವರೆಗೆ ವಿಸ್ತರಿಸಲಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ಪ್ರಯೋಜನವಾಗಿದೆ’ ಎಂದು ಹೇಳಿದರು.
ಈ ವರ್ಷ ಕೃಷಿ ಮತ್ತು ಸಂಬಂಧಿತ ವಲಯಗಳಿಗೆ 1.52 ಲಕ್ಷ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಹೇಳಿದರು.
“ನಮ್ಮ ಸರ್ಕಾರವು ಪ್ರಧಾನ ಮಂತ್ರಿಗಳ ಪ್ಯಾಕೇಜ್‌ನ ಭಾಗವಾಗಿ ಉದ್ಯೋಗ-ಸಂಯೋಜಿತ ಪ್ರೋತ್ಸಾಹಕ್ಕಾಗಿ ಮೂರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಇವುಗಳು EPFO ನಲ್ಲಿ ದಾಖಲಾತಿಯನ್ನು ಆಧರಿಸಿದ್ದು, ಮೊದಲ ಬಾರಿಗೆ ಉದ್ಯೋಗಿಗಳನ್ನು ಗುರುತಿಸುವುದು ಮತ್ತು ಉದ್ಯೋಗಿಗಳು ಮತ್ತು ಉದ್ಯೋಗದಾತರಿಗೆ ಬೆಂಬಲವನ್ನು ನೀಡಲಿವೆ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.