7 ದಶಕಗಳಲ್ಲೇ ಭಾರತದ ವಿತ್ತೀಯ ಬೆಳವಣಿಗೆ ದರ ಕುಸಿತ
Team Udayavani, Aug 23, 2019, 8:00 PM IST
ಹೊಸದಿಲ್ಲಿ: ಭಾರತ 7 ದಶಕಗಳಲ್ಲೇ ಹಿಂದೆಂದೂ ಕಾಣದ ವಿತ್ತೀಯ ಪ್ರಗತಿಯಲ್ಲಿ ಕುಂಠಿತ ಕಾಣುತ್ತಿದೆ ಎಂದು ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಹೇಳಿದ್ದಾರೆ. ದೇಶದ ಆರ್ಥೀಕ ಪ್ರಗತಿ ಇತ್ತೀಚಿನ ವರ್ಷಗಳಲ್ಲಿ ಕುಂಠುತ್ತಾ ಸಾಗುತ್ತಿದೆ ಎಂದಿದ್ದಾರೆ. ಇದೀಗ ಸ್ವತಃ ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಕುಮಾರ್ ಅವರೇ ದೇಶದ ಆರ್ಥಿಕ ಪ್ರಗತಿಯ ಕುರಿತು ಮಾತನಾಡಿದ್ದು, ಕೆಂದ್ರ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ದೇಶದ ಇಡೀ ಹಣಕಾಸು ವಲಯ ಈಗ ಸಂಕಷ್ಟಕ್ಕೆ ಸಿಲುಕಿದೆ. ಆದರೆ ಈ ಸಂಗತಿಯನ್ನು ಯಾರೂ ಕೂಡ ನಂಬುವ ಸ್ಥಿತಿಯಲ್ಲಿ ಇಲ್ಲ ಎಂದು ಹೇಳಿದ್ದಾರೆ. ಈ ಸಂಕಷ್ಟದಿಂದ ಪಾರಾಗಲು ಸರಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಕೆಲವು ಕಂಪನಿಗಳ ಸಾಲ ಬಾಕಿ ಪ್ರಕರಣದಿಂದಾಗಿ ಹಣಕಾಸು ವಲಯಕ್ಕೆ ಹಿನ್ನಡೆಯಾಗಿದೆ ಎಂದಿದ್ದಾರೆ. ಹಲವು ಆರ್ಥಿಕ ತಜ್ಞರು ಕೇಂದ್ರ ಸರಕಾರವನ್ನು ಎಚ್ಚರಿಸುತ್ತಾ ಬಂದಿದ್ದಾರೆ. ವಿತ್ತ ತಜ್ಞರ ಹೇಳಿಕೆಯನ್ನು ಕೇಂದ್ರ ಸರಕಾರ ನಿರಾಕರಿಸುತ್ತಲೇ ಬಂದಿತ್ತು.
ಈ ಹಿಂದೆಯೇ ಎಚ್ಚರಿಕೆ ನೀಡಲಾಗಿತ್ತು
ನೋಟು ಅಪಮೌಲೀಕರಣ, ಜಿಎಸ್ಟಿ ಸೇರಿದಂತೆ ಮೊದಲಾದ ಕ್ರಮಗಳು ದೇಶದ ಆರ್ಥಿಕತೆ ಮುಂದೆ ಸಂಕಷ್ಟವನ್ನು ತರಲಿದೆ ಎಂದು ವಿಪಕ್ಷಗಳು ಸೇರಿದಂತೆ ಆರ್ಥಿಕ ತಜ್ಞರು ಎಚ್ಚರಿಕೆ ನೀಡಿದ್ದರು. ಮಾಜಿ ಪ್ರಧಾನಿ ಮನ್ಮೋಗನ್ ಸಿಂಗ್, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸರಕಾರಕ್ಕೆ ಈ ಹಿಂದೆಯೇ ಸಲಹೆ ನೀಡಿದ್ದು, ಆರ್ಥಿಕ ಹಿನ್ನಡೆಯ ಅಪಾಯವನ್ನು ಎಚ್ಚರಿಸಿದ್ದರು. ಆದರೆ ಕೇಂದ್ರ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿಲ್ಲ.
ಭಾರತ ಮಾತ್ರವಲ್ಲದೇ ಜಗತ್ತಿನ ಹಲವು ರಾಷ್ಟ್ರಗಳಲ್ಲಿಯೂ ವಿತ್ತೀಯ ಪ್ರಗತಿ ದರ ಕುಂಠಿತಗೊಂಡಿದೆ. ಭಾರತ ದ ಈ ಹಿನ್ನಡೆಯಲ್ಲಿ ಜಗತ್ತಿನ ಆರ್ಥಿಕ ಸ್ಥಿತಿಯೂ ಪರಿಣಾಮ ಬೀರಿರುವ ಸಾಧ್ಯತೆ ಇದೆ. ಭಾರತೀಯ ರಿಸರ್ವ್ ಬ್ಯಾಂಕ್ ಆರ್ಬಿಐ ಇತ್ತೀಚೆಗೆ ತನ್ನ ರೆಪೋ ದರವನ್ನು ಈ ವರ್ಷ 4ನೇ ಬಾರಿ ಇಳಿಸಿದ್ದನ್ನು ನಾವಿಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.